ಚಿಕ್ಕಬಳ್ಳಾಪುರ | ಹೃದಯ ವಿದ್ರಾವಕ ಘಟನೆ; ಅಪ್ಪ, ಮಗನನ್ನು ಕೊಂದ ಚಿಕ್ಕಪ್ಪ

Date:

ಸ್ವಂತ ಅಣ್ಣ ಮತ್ತು ಅಣ್ಣನ ಮಗನನ್ನು ಒಡಹುಟ್ಟಿದ ತಮ್ಮನೇ ಪಿಸ್ತೂಲ್‌ ಮತ್ತು ಮಚ್ಚಿನಿಂದ ಹೊಡೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ತಾಲೂಕಿನ ಹಂಪಸಂದ್ರ ಗ್ರಾಪಂ ಮಾಜಿ ಸದಸ್ಯ ನಜೀರ್‌ ಅಹಮದ್‌(60) ಚಿಕ್ಕಪ್ಪನಿಂದ ಗುಂಡೇಟು ತಿಂದು ಕೊಲೆಯಾದರೆ, ಆರೋಪಿಯ ಅಣ್ಣ ಮೆಹಬೂಬ್‌(80) ಸ್ವಂತ ತಮ್ಮನಿಂದ ಮಚ್ಚೇಟು ತಿಂದು ಕೊಲೆಯಾಗಿದ್ದಾರೆ. ಮಹಮದ್‌ ಬಷೀರ್‌(65) ಕೊಲೆ ಮಾಡಿದ ಆರೋಪಿ ಚಿಕ್ಕಪ್ಪ.

ಸೌದಿಯಲ್ಲಿ ವಾಸವಾಗಿದ್ದ ಬಷೀರ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ನಜೀರ್ ಅಹಮದ್ ಬುಧವಾರ ಬೆಳಗ್ಗೆ 5 ಗಂಟೆಯ ಸಮಯದಲ್ಲಿ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದ ವೇಳೆ, ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದ ಚಿಕ್ಕಪ್ಪ ಮಹಮ್ಮದ್ ಬಷೀರ್ ಮೊದಲಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ನಂತರ ತನ್ನ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟು ಬಿದ್ದ ಕೂಡಲೇ ನಜೀರ್ ಅಹಮದ್ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 07 24 at 10.24.15 PMWhatsApp Image 2024 07 24 at 10.25.15 PM

ಇದಾದ ನಂತರ ಅಲ್ಲೇ ಸಮೀಪದಲ್ಲಿದ್ದ ಅಣ್ಣ ಮೆಹಬೂಬ್(80) ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮೆಹಬೂಬ್‌ ಅವರನ್ನು ಸ್ಥಳೀಯರು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಮೆಹಬೂಬ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೊಲೆ ಆರೋಪಿ ಮಹಮ್ಮದ್ ಬಷೀರ್‌ ತನ್ನ ಹೆಂಡತಿಯನ್ನೂ ಕೊಲೆ ಮಾಡಲು ಯತ್ನಿಸಿದ್ದ ಎನ್ನಲಾಗಿದ್ದು, ಮಾಹಿತಿ ತಿಳಿದ ಗುಡಿಬಂಡೆ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಪಿಸ್ತೂಲ್‌ ಹಾಗೂ ಮಚ್ಚನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ, ಎ.ಎಸ್‌ಪಿ ಖಾಸಿಂ, ಡಿ.ವೈ.ಎಸ್.ಪಿ. ಶಿವಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ನಯಾಝ್ ಬೇಗ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನೈತಿಕ ಸಂಬಂಧ ಮತ್ತು ಜಮೀನು ವಿವಾದದ ಹಿನ್ನೆಲೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆಯ ಬಳಿಕವಷ್ಟೇ ಕೊಲೆಗೆ ನಿಖರ ಕಾರಣ ತಿಳಿದುಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...