ಗುಡಿಬಂಡೆ | ಕನ್ನಡ ಭಾಷೆಯನ್ನು ಉಳಿಸಿ ಬೆಳಸಲು ನಾವೆಲ್ಲರೂ ಶ್ರಮಿಸಬೇಕಿದೆ: ಶಾಸಕ ಸುಬ್ಬಾರೆಡ್ಡಿ

Date:

ಗಡಿಭಾಗದ ಈ ಪ್ರದೇಶದಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳಸಲು ನಾವೆಲ್ಲರೂ ಶ್ರಮಿಸಬೇಕಿದೆ. ಹಾಗೆಯೇ ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಅಮಾನಿ ಬೈರಸಾಗರ ಕೆರೆಯನ್ನು ಅಂತಾರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕು ಎಂದು 6ನೇ ಸಮ್ಮೇಳನಾಧ್ಯಕ್ಷ ಸ ನ ನಾಗೇಂದ್ರ ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭವನ ನಿರ್ಮಾಣಕ್ಕಾಗಿ ಒತ್ತಾಯಿಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಮಂಜುನಾಥ್ ಅವರು ಶಾಸಕರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಕೋಡಿ ರಂಗಪ್ಪ, 6 ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು ತಾಲೂಕಿನ ಅಧಿಕಾರ ವರ್ಗ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.

ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಮಾತನಾಡಿ, “ಮಾನವ ಕುಲವೊಂದೇ ವನಂ ಎಂಬ ಪಂಪನ ನಾಣ್ಣುಡಿಯಂತೆ ಕನ್ನಡಿಗರಲ್ಲಿ ಅರಿವು ಮೂಡಬೇಕು. ಸಾಹಿತ್ಯ ಬೆಳೆಯಲು ಶಿಕ್ಷಣ ಅತಿಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವರ್ಗ ಮುಂದಾಗಬೇಕೆಂದು ನಿವೃತ್ತ ಉಪನ್ಯಾಸಕ ಬಿ ಅಮಿರ್ ಜಾನ್ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ನೇಮಿಸಿರುವುದು ಶ್ಲಾಘನೀಯ” ಎಂದರು.

ಕಾರ್ಯಕ್ರಮಕ್ಕೂ ಮುನ್ನ ಭಾರತರತ್ನ ಬಾಬಾಸಾಹೇಬ್‌ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಆದಿರೆಡ್ಡಿ, ಸಿಪಿಎಂ ಕಾರ್ಯದರ್ಶಿ, ಬಿಜೆಪಿ ಅಧ್ಯಕ್ಷ ಗಂಗಿರೆಡ್ಡಿ ಸೇರಿದಂತೆ ಹಲವರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವರ್ಷಗಳಾದರೂ ಪೂರ್ಣಗೊಳ್ಳದ ಕಾಮಗಾರಿ; ಲಕ್ಷಾಂತರ ಹಣ ಗುಳುಂ

ನಗರದ ಮುಖ್ಯ ರಸ್ತೆಯಲ್ಲಿ ಬಂಗಾರಲೇಪಿತ ರಥದ ಮೆರವಣಿಗೆಯ ಮೂಲಕ ಕಲಾತಂಡಗಳೊಂದಿಗೆ ಸಮ್ಮೇಳನ ಅಧ್ಯಕ್ಷರನ್ನು ವೇದಿಕೆಗೆ ಕರೆತರಲಾಯಿತು. 6ನೇ ಸಮ್ಮೇಳನ ಅಧ್ಯಕ್ಷ ಸ ನ ನಾಗೇಂದ್ರ ಅವರು 7ನೇ ಸಮ್ಮೇಳನಾಧ್ಯಕ್ಷ ಬಿ ಅಮೀರ್ ಜಾನ್ ಅವರಿಗೆ ಕನ್ನಡ ಧ್ವಜವನ್ನು ಹಸ್ತಾಂತರ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...