ಗುಲಬರ್ಗಾ ವಿವಿ ಸಿಂಡಿಕೇಟ್‌ ಸದಸ್ಯರಾಗಿ ಸಿದ್ದಪ್ಪ ಸುಳ್ಳದ್ ನೇಮಕ

Date:

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾಗಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಸಿದ್ದಪ್ಪ ಸುಳ್ಳದ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೆರೂರು ಗ್ರಾಮದವರಾದ ಸಿದ್ದಪ್ಪ ಸುಳ್ಳದ್‌ ಅವರು ಶಿಕ್ಷಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಸಾಮಾಜಿಕ ಹೊರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ರಾಜ್ಯಪಾಲರ ಸಚಿವಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಿಗೆ ಬರೆದ ನೇಮಕಾತಿ ಪತ್ರದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಸಿದ್ದಪ್ಪ ಸುಳ್ಳದ್, ಸಿದ್ದಪ್ಪ ಮೂಲಗೆ, ಡಾ. ಶ್ರೀದೇವಿ ಎಸ್ ಕಟ್ಟಿಮನಿ, ಡಾ. ಪೀರ್‌ಜಾದ ಫಹೀಮುದ್ದೀನ್‌ ಬಿನ್‌ ಅಲಿ ಶೇರ್‌, ಮಲ್ಲಣ್ಣ ಎಸ್ ಮಾಡಿವಾಳ, ಉದಯ್‌ ಕಾಂತ್‌ ಸೇರಿದಂತೆ ಒಟ್ಟು ಆರು ಮಂದಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಲಬರ್ಗಾ ವಿಶ್ವವಿದ್ಯಾಲಯಾದ ಸಿಂಡಿಕೇಟ್ ಪ್ರಾಧಿಕಾರಕ್ಕೆ ಕರ್ನಾಟಕ ವಿದ್ಯಾವಿದ್ಯಾಲಯದ ಅಧಿನಿಯಮ, 2000ರ ಪ್ರಕರಣ 28(1)(ಜಿ)ರಡಿ ಪ್ರದತ್ತವಾದ ಅಧಿಕಾರದನ್ವಯ ಹಾಗೂ ಪ್ರಕರಣ 38(1)ಮತ್ತು 39(1)ರ ಉಪಬಂಧಗಳಿಗೊಳಪಟ್ಟು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ನಾಮ ನಿರ್ದೇಶನ ಮಾಡಿ ಆದೇಶಿಸಲಾಗಿದೆ.

ಅಂತೆಯೇ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಪ್ರೊ.ಸಾಕಮ್ಮ ಬಿ, ಶಿವಕುಮಾರ ಎಂ, ಮುಸಾವೀರ್‌ ಬಾಷಾ ಎಂ, ಲಕ್ಷ್ಮೀಕಾಂತ ಚಿಮನೂರ, ಕೆ ಪಿ ಶ್ರೀಪಾಲ್‌, ಹೆಚ್ ಜಿ ಅರವಿಂದ ಸೇರಿ ಆರು ಮಂದಿ ಆಯ್ಕೆಯಾಗಿದ್ದಾರೆ. ರಾಯಚೂರು ವಿಶ್ವವಿದ್ಯಾಲಯದಿಂದ ಡಾ. ಮೀನಾಕ್ಷಿ ಖಂಡಿಮಠ, ಡಿ ಆರ್ ಚಿನ್ನ, ಜೀಶಾನ್‌ ಆಖಿಲ್‌ ಸಿದ್ದಿಖಿ ಮಾನ್ವಿ, ಶಿವಣ್ಣ ಬಿ, ಚನ್ನಬಸವ ಬಿ, ಕೆ ಪ್ರಾತಿಮಾ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕ್ಷೌರ ವಿಚಾರಕ್ಕೆ ಕೊಲೆ: ದಲಿತ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ಸಿಪಿಐಎಂ ಆಗ್ರಹ

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಡಾ.ಜಯಲಕ್ಷ್ಮೀ ನಾಯಕ, ಡಾ ವೈ ಆರ್ಥೋಬ ನಾಯಕ, ಬಿ ಪೀರ್‌ ಬಾಷಾ, ಶಿವಕುಮಾರ್, ಡಾ.ಅಮರೇಶ ನುಗಡೋಣಿ ಸಿರಿವಾರ, ಚ ಹ ರಘುನಾಥ್ ಆಯ್ಕೆಗೊಂಡಿದ್ದಾರೆ.

ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಹಾಂತೇಶ ಕಂಬಾರ, ಡಾ.ಕಾವೇರಿ, ರವೀಂದ್ರ ಮಲ್ಲಪ್ಪ ನಾಯ್ಕರ್, ರಫೀಕ್ ಭಂಡಾರಿ, ಮಾರುತಿ ಮುಂಡರಗಿ, ಎಸ್ ಎಸ್ ಅಂಗಡಿ ಸೇರಿದಂತೆ ಆರು ಮಂದಿಯನ್ನು ಸಿಂಡಿಕೇಟ್‌ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...