ಉಡುಪಿ | ಗುಲ್ವಾಡಿಗೆ KSRTC ಬಸ್ಸಿಗಾಗಿ ಒತ್ತಾಯಿಸಿ ಪ್ರತಿಭಟನೆ

Date:

ಉಡುಪಿ ಜಿಲ್ಲೆಯ ಕುಂದಾಪುರದಿಂದ ತಲ್ಲೂರು ಮಾವಿನಕಟ್ಟೆ ಮಾರ್ಗವಾಗಿ ಗುಲ್ವಾಡಿಗೆ ಅಲ್ಲಿಂದ ಸೌಕೂರು, ಕಂಡ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಕೆಎಸ್ಆರ್ಟಿಸಿ ಬಸ್ ಆರಂಭಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಹಂಚು ಕಾರ್ಮಿಕರು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಗುಲ್ವಾಡಿ ಪಂಚಾಯತ್ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಪಿಡಿಓ ಮುಖಾಂತರ ಸಾರಿಗೆ ಆಯುಕ್ತರಿಗೆ ಮನವಿ ನೀಡಿದರು.

ಖಾಸಗಿ ಬಸ್ ಗಳು ಸರಿಯಾದ ಸಮಯಕ್ಕೆ ಬಸ್ ಸಂಚಾರ ನಡೆಸದೆ ಗ್ರಾಮದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಅನಾರೋಗ್ಯ ಪೀಡಿತರಿಗೆ ತುಂಬ ತೊಂದರೆ ಆಗಿದೆ. KSRTC ಬಸ್ ಸಂಚಾರ ಆರಂಭಿಸುವುದರ ಮುಖಾಂತರ ಮಹಿಳೆಯರಿಗೆ ಶಕ್ತಿ ಯೋಜನೆ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆಯುವಂತೆ ಮಾಡಬೇಕಾಗಿ ಸಾರಿಗೆ ಪ್ರಾಧಿಕಾರವನ್ನು ಒತ್ತಾಯಿಸಿದರು.

ಹೋರಾಟದ ನೇತೃತ್ವವನ್ನು ಹಂಚು ಕಾರ್ಮಿಕರ ಮುಖಂಡರಾದ ಜಿ ಡಿ ಪಂಜು, ನಾಗರಾಜ್, ಚಂದ್ರ,ಭಾಸ್ಕರ, H ನರಸಿಂಹ, ಕೃಷಿಕೂಲಿಕಾರರ ಮುಖಂಡರಾದ ನಾಗರತ್ನ, ಶೋಭಾ, JMS ಮುಖಂಡರಾದ ಶೀಲಾವತಿ, ಕಟ್ಟಡ ಕಾರ್ಮಿಕರ ಮುಖಂಡರಾದ ಚಂದ್ರಶೇಖರ್ ವಿ, ರೆಹ್ಮಾನ್ ಅಣ್ಣಪ್ಪ , ರಾಜೀವ ಪಡುಕೋಣೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...