ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

Date:

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯಿಂದ ಪ್ರತಿಭಟನೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅರಣ್ಯವನ್ನು ಖಾಸಗೀಕರಣ ಮಾಡಲು ನಡೆಸಿರುವ ಹುನ್ನಾರವನ್ನು ಖಂಡಿಸಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿ ತೆರಕಣಾಂಬಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನ ಹಳ್ಳಿಯಲ್ಲಿರುವ ಸಫಾರಿ ಕ್ಯಾಂಪಸ್ ನ ಸಭಾಂಗಣದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಇದೇ ಫೆಬ್ರವರಿ.9 ರಿಂದ 11ರ ವರೆಗೆ ನಡೆಯುತ್ತಿದೆ. ಹಾಗೆಯೇ, 12 ಮತ್ತು 13ರಂದು ಕೊಡಗು ಜಿಲ್ಲೆ ನಾಗರಹೊಳೆಯಲ್ಲಿ ನಡೆಯಲಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ? ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬೆನ್ನಲ್ಲೇ ಏಕಾಏಕಿ ಬಂಡೀಪುರ ಹಾಗು ನಾಗರಹೊಳೆಯಲ್ಲಿ ಶೃಂಗಸಭೆ ನಡೆಸುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಒಂದು ಕಡೆ ಮಾನವ-ವನ್ಯಜೀವಿ ಸಂಘರ್ಷ, ಇನ್ನೊಂದೆಡೆ ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುತ್ತಿರುವಾಗ ಯಾವುದೇ ಮುನ್ಸೂಚನೆ ಇರದೇ 18 ರಾಷ್ಟ್ರಗಳ ಪ್ರತಿನಿಧಿಗಳನ್ನೊಳಗೊಂಡ ಸಭೆ ನಡೆಸುತ್ತಿರುವುದು, ಅರಣ್ಯವನ್ನು ಖಾಸಗೀಕರಣ ನಡೆಸುವ ಹುನ್ನಾರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿರುವ ಸವಾಲುಗಳು

  • ಸಂರಕ್ಷಣೆಗಾಗಿ ಎಂಬ ಹೆಸರಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಧಿ ಸಂಗ್ರಹಕ್ಕೆ ಚಾಲನೆ.
  • ಹಣ ದುರ್ಬಳಕೆ.
  • ಪಾರದರ್ಶಕತೆಯ ಕೊರತೆ.
  • ಆದಿವಾಸಿ ಸಮುದಾಯಗಳ ಬಲವಂತದ ಸ್ಥಳಾಂತರ ಹಾಗು ಜೀವನೋಪಾಯಕ್ಕೆ ಹಾನಿ.
  • ನಮ್ಮ ಜನರನ್ನೇ, ನಮ್ಮದೇ ಜಾಗದಲ್ಲಿ ಕಳ್ಳರಂತೆ, ದೇಶ ದ್ರೋಹಿಗಳಂತೆ ನಡೆಸಿಕೊಳ್ಳುತಾರೆ.
  • ಅಬಿವೃದಿ ಹೆಸರಿನಲ್ಲಿ ಕಾಡಿನ ಒಡಲನ್ನು ಸೀಳಿ ಗಣಿಗಾರಿಕೆ ಮಾಡಲು ಅನುಮತಿ ಕೊಡುತ್ತಾರೆ.
  • ಪ್ರವಾಸೋದ್ಯಮದ ಹೆಸರಿನಲ್ಲಿ ಕಾಡನ್ನು ಖಾಸಗೀಕರಣ ಮಾಡಿ ಕಾಡನ್ನು ಶೋಷಣೆ ಮಾಡುತ್ತಾರೆ.
  • ತಂತ್ರಜ್ಞಾನದ ಹೆಸರಲ್ಲಿ ವ್ಯಾಪಾರ ಮತ್ತು ಡೇಟಾ ಸಾರ್ವಭೌಮತ್ವದ ಸಮಸ್ಯೆ ಉಂಟಾಗುತ್ತದೆ.
  • ಪ್ರಬಲ ರಾಷ್ಟ್ರಗಳ ಕಾರ್ಯಸೂಚಿ ನಮ್ಮ ಮೇಲೆ ಹೇರಿಕೆಯಾಗುತ್ತದೆ.
  • ದೊಡ್ಡ ಕಾರ್ಖಾನೆಗಳು ಮಾಡಿದ ಪರಿಸರದ ವಿನಾಶದ ಪಾಪ ಕಳೆದುಕೊಳ್ಳುವ carbon credit ದಂದೆಗೆ ಕೋಟೆ ಬಾಗಿಲು ತೆರೆದುಕೊಳ್ಳುತ್ತಿದೆ.

ಪ್ರತಿಭಟನೆಯಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡರಾದ ಹೊನ್ನೂರು ಪ್ರಕಾಶ್, ಮಂಜು ಕಿರಣ್, ಶಿರ್ವಳ್ಳಿ ಮಂಜು ಹಾಗು ಗುಂಡ್ಲುಪೇಟೆ ಭಾಗದ ಹಲವು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...