ಚಾಮರಾಜನಗರ | ಎಸ್ಎಸ್ಎಲ್ಸಿ 2025-26ರಲ್ಲಿ ಶೇ.100 ಫಲಿತಾಂಶಕ್ಕೆ ‘ಗುರಿ ನೂರು’ ಅಭಿಯಾನ

Date:

ಚಾಮರಾಜನಗರ ಜಿಲ್ಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿಗೆ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸಿ ಶೇ.100ರಷ್ಟು ಫಲಿತಾಂಶ ಸಾಧಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಂಪನ್ಮೂಲ ಸಮನ್ವಯಾಧಿಕಾರಿಗಳು ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ ನಡೆಸಲಾಯಿತು.

ಸಭೆಯಲ್ಲಿ “ಗುರಿ ನೂರು– 2026” ಆಶಯದೊಂದಿಗೆ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಬೇಕೆಂದು ಸೂಚಿಸಲಾಯಿತು. ಶಾಲೆಗೆ ಗೈರಾಗುತ್ತಿರುವ ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ, ಪೋಷಕರ ಮನೆಗೆ ಭೇಟಿ ನೀಡಿ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಎಲ್ಲರಿಗೂ ಇರುವುದಾಗಿ ತಿಳಿಸಿದರು.

ಮೊದಲನೇ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ (SA-1) ತಾಲ್ಲೂಕು ಹಾಗೂ ವಿಷಯವಾರು ಫಲಿತಾಂಶಗಳನ್ನು ವಿಶ್ಲೇಷಣೆ ಮಾಡಲಾಗಿದ್ದು, ಕಡಿಮೆ ಸಾಧನೆ ಮಾಡಿದ ತಾಲ್ಲೂಕುಗಳಲ್ಲಿ ಶೇಕಡ ನೂರು ಫಲಿತಾಂಶಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತೀ ತಾಲ್ಲೂಕಿನ ಒಬ್ಬ ವಿದ್ಯಾರ್ಥಿಯನ್ನು 2026ರ ಜನವರಿ 26ರ ಗಣರಾಜ್ಯೋತ್ಸವದಂದು ಜಿಲ್ಲಾ ಮಟ್ಟದಲ್ಲಿ ಸನ್ಮಾನಿಸಲು ನಿರ್ಧಾರ ಕೈಗೊಳ್ಳಲಾಯಿತು. ಕಡಿಮೆ ಫಲಿತಾಂಶ ಸಾಧಿಸಿದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಉಪನಿರ್ದೇಶಕರಿಗೆ ಸೂಚನೆ ನೀಡಲಾಯಿತು.

ಎಸ್‌ಎಸ್‌ಎಲ್‌ಸಿ ಶೇ.100 ಗುರಿ ಸಾಧನೆಗಾಗಿ ಶಾಲಾ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ 20 ಅಂಶಗಳ ಕಾರ್ಯಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು: ಕವಿ ಕಾಜೂರು ಸತೀಶ್

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...