ಉಡುಪಿ‌ | ಡಿ.ಸಿ. ಆದೇಶ ಉಲ್ಲಂಘನೆ ಆರೋಪ, ಶಾಸಕ ಗುರ್ಮಿ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ ಸೇರಿದಂತೆ 35 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಉಡುಪಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇಧಾಜ್ಞೆ ಮಧ್ಯೆಯೇ 80 ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್ ಗುರುರಾಜ್ ಅವರ ದೂರಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 189(2), 191(2), 329(3), 190 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 37, 109ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ಪಟ್ಟಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಕ್ಷೇತ್ರದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಎಂಎಲ್ಸಿ ಧನಂಜಯ್ ಸರ್ಜಿ, ಸಂಸದ ಶ್ರೀನಿವಾಸ ಪೂಜಾರಿ, ಕಾಪು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಹಲವರ ಹೆಸರುಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತರ ಆರೋಪಿಗಳಾಗಿ ಮಟ್ಟಾರು ರತ್ನಾಕರ ಹೆಗ್ಡೆ, ಶಿಲ್ಪಾ ಸುವರ್ಣ (ಕಾಪು), ಗೀತಾಂಜಲಿ ಸುವರ್ಣ (ಕಟಪಾಡಿ), ನಂದಳಿಕೆ ಶ್ರೀಕಾಂತ್ ಭಟ್, ಶುಭಕರ ಶೆಟ್ಟಿ (80 ಬಡಗಬೆಟ್ಟು), ಸಂದೀಪ್ ಶೆಟ್ಟಿ (80 ಬಡಗಬೆಟ್ಟು), ಜಿಯಾನಂದ ಹೆಗ್ಡೆ (ಬೈರಂಪಳ್ಳಿ), ವೀಣಾ ಶೆಟ್ಟಿ (ಉಡುಪಿ), ಸಾಯಿಶ ಸುಧಾಕರ ಶೆಟ್ಟಿ (ಪೆರ್ಡೂರು), ಬೆಳಪು ದೇವಿಪ್ರಸಾದ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಶ್ರೀನಿಧಿ ಹೆಗ್ಡೆ (ಉಡುಪಿ), ಹರಿಕೃಷ್ಣ (ಬಂಟ್ವಾಳ), ರವೀಂದ್ರ ಮಡಿವಾಳ್ (ಕಾರ್ಕಳ), ಅಂತೋನಿ ಡಿಸೋಜಾ (ನಕ್ರೆ), ವಿಜಯ್ ಕುಮಾರ್ (ಕಂಗಿನ ಮನೆ, ಹೊಸ್ಮಾರ್), ಶ್ಯಾಮಲಾ ಕುಂದರ್ (ಹಿರಿಯಡ್ಕ), ಲೋಕೇಶ್ ಶೆಟ್ಟಿ (ಕಾರ್ಕಳ), ಮೋಹನ್ ಭಟ್ (ಹಿರಿಯಡ್ಕ), ದಿಲ್ಲೇಶ್ ಶೆಟ್ಟಿ (ಕುಕ್ಕೆಹಳ್ಳಿ), ಶಾಂತಾರಾಮ ಶೆಟ್ಟಿ (ರಾಜೀವನಗರ), ರವೀಂದ್ರ ನಾಯ್ಕ (ಕುಕ್ಕುದಕಟ್ಟೆ, 80 ಬಡಗಬೆಟ್ಟು), ಗೋಪಾಲ ಕೃಷ್ಣ (ಮಟ್ಟು), ಸುಭಾಷ್ ಬಲ್ಲಾಳ್ (ಕಟಪಾಡಿ), ಶಿವಪುನಾರ್ (ಹಿರೇಬೆಟ್ಟು), ಮೋಹನ್ ಶೆಟ್ಟಿ (ಕಬ್ಯಾಡಿ), ಕೃಷ್ಣ ಕುಲಾಲ್ (ವರ್ವಾಡಿ) ಸೇರಿದಂತೆ ಇತರ ಸ್ಥಳೀಯ ಕಾರ್ಯಕರ್ತರ ಹೆಸರುಗಳೂ ಸೇರಿವೆ ಎಂದು ‌ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...