ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಲು ಎಚ್ ಆಂಜನೇಯ ಆಗ್ರಹ

Date:

ಬೇಡ ಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕು ಎಂದು ಮಾಜಿ ಸಚಿವ ಎಚ್ ಆಂಜನೇಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಬಳ್ಳಾರಿ ನಗರದ ರಾಯಲ್ ಪೋರ್ಟ್ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಮನೆ ಬಾಗಿಲಿಗೆ ಬರುವ ಜಾತಿ ಗಣತಿದಾರರಿಗೆ ಆದಿ ಕರ್ನಾಟಕ, ಆದಿ ಜಾಂಬವ ಎಂದು ಬರೆಸದೆ ಪರಿಶಿಷ್ಟ ಜಾತಿ ಮಾದಿಗ” ಎಂದು ಬರೆಸಲು ಮಾದಿಗ ಜನಾಂಗಕ್ಕೆ ಕರೆ ನೀಡಿದರು.

“ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿದ್ದರೂ ಈಗಾಗಲೇ ಸುಮಾರು 80ರಷ್ಟು ಜಾತಿಗಳು ಅಳಿದು ಹೋಗಿವೆ. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ ಎಂದು ಬ್ರಿಟಿಷ್ ಕಾಲದ ಮಿಲ್ಲರ್ ನಡೆಸಿದ್ದ ಜಾತಿ ಜನಗಣತಿಯನ್ನು ಈಗಲೂ ಹಾಗೆ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಆ ಸಂದರ್ಭದಲ್ಲಿ ಬೇಡ ಜಂಗಮ, ಹಲಾಲ್ ಕೋರ, ಚಾಂಡಾಳ ಜಾತಿಗಳು ಸೇರಿದಂತೆ ಅನೇಕ ಜಾತಿಗಳು ಈಗಾಗಲೇ ನಶಿಸಿಹೋಗಿವೆ. ನಶಿಸಿ ಹೋದ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡಬೇಕು” ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ನಶಿಸಿ ಹೋದ ಬೇಡ ಜಂಗಮ ಜಾತಿಯವರು ವೀರಶೈವ ಜನಾಂಗಕ್ಕೆ ಸೇರಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇವರು ಪುರೋಹಿತ ವೃತ್ತಿಯನ್ನು ಮಾಡುತ್ತಿದ್ದಾರೆ ಹಾಗೂ ಮೇಲ್ವರ್ಗದ ಜಾತಿಗೆ ಸೇರಿದವರಾಗಿದ್ದಾರೆ. ಆದರೂ ಪರಿಶಿಷ್ಟ ಜಾತಿ ಎಂದು ಜಾತಿ ಪ್ರಮಾಣ ಪತ್ರ ಪಡೆದು ನಮ್ಮ ಅನ್ನವನ್ನು ಕಸಿದುಕೊಳ್ಳುತ್ತಿದ್ದಾರೆ. ಬೇಡ ಜಂಗಮ ಎಂದು ಸುಳ್ಳು ಹೇಳಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡವರಿಗೆ ಮತ್ತು ಮಂಜೂರು ಮಾಡಿದವರಿಗೆ ಜೈಲು ಶಿಕ್ಷೆ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಚಾಮರಾಜನಗರ | ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ಪ್ರಗತಿ ಪರಿಶೀಲನೆ

“ಜನಸಂಖ್ಯೆಗೆ ಅನುಗುಣವಾಗಿ ಮಾದಿಗರಿಗೆ ಒಳ ಮೀಸಲಾತಿಯನ್ನು ನೀಡಬೇಕು. ಆಂಧ್ರ ಪ್ರದೇಶದಲ್ಲಿ ಮಂದಕೃಷ್ಣ ಮಾದಿಗ ಅವರ ಹೋರಾಟಕ್ಕೆ ಮಣಿದು ಅಲ್ಲಿನ ಸರ್ಕಾರ ಒಳಾಮಿಸಲಾತಿಯನ್ನು ಜಾರಿಗೊಳಿಸಿರುತ್ತದೆ. ಅದೇ ಪ್ರಕಾರ ರಾಜ್ಯದಲ್ಲಿಯೂ ಸಹ ನಾಗಮೋಹನ್ ದಾಸ್ ಅವರ ವರದಿಯ ಅನುಗುಣವಾಗಿ ಆದಷ್ಟು ಬೇಗ ಜೂನ್ ಒಳಗೆ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು” ಎಂದರು.

ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎ ಮಾನಯ್ಯ, ಕೆಪಿಸಿಸಿ ಸದಸ್ಯ ಎಲ್ ಮಾರೆಣ್ಣ, ಸಂಗನಕಲ್ಲು ವಿಜಯ್ ಕುಮಾರ್, ಎ ಕೆ ಗಂಗಾಧರ, ಸಿದ್ದೇಶ್, ಎರುಕುಲ ಸ್ವಾಮಿ, ಎನ್ ಡಿ ವೆಂಕಮ್ಮ, ವೆಂಕಟೇಶ್ ಹೆಗಡೆ, ಮಾದಿಗ ಜನಾಂಗದ ಮುಖಂಡರು ಹಾಗೂ ಇತರರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...