ಕಲಬುರಗಿ | ಕಾಂತರಾಜು ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಿ: ಸಿಪಿಐಎಂ

Date:

ಜಾತಿ ಸಮೀಕ್ಷೆಯ ಎಚ್. ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಅಗಾಧ ಶ್ರಮ ಹಾಗೂ ಸಂಪನ್ಮೂಲಗಳ ವ್ಯಯದೊಂದಿಗೆ ಸಿದ್ಧಪಡಿಸಲಾದ ವರದಿಯನ್ನು ಪಟ್ಡಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಮೂಲೆಗುಂಪಾಗಲು ಬಿಡಬಾರದೆಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಒತ್ತಾಯಿಸಿದ್ದಾರೆ.

“ಎಚ್. ಕಾಂತರಾಜುರವರ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015 ರಲ್ಲಿ ಸುಮಾರು 170 ಕೋಟಿ ರೂ.ಗಳ ಸಾರ್ವಜನಿಕ ವೆಚ್ಚದಲ್ಲಿ, ಸರ್ಕಾರದ ಸುಪರ್ದಿಯಲ್ಲಿರುವ 22,180 ಮೇಲ್ವಿಚಾರಕ ಅಧಿಕಾರಿಗಳ ಉಸ್ತುವಾರಿಯಲ್ಲಿ 1.33 ಲಕ್ಷ ರೂ. ನೌಕರ ಗಣತಿದಾರರು ಒಂದು ತಿಂಗಳ ಕಾಲ ರಾಜ್ಯದಾದ್ಯಂತ ತಲಾ 150 ರಿಂದ 175 ಮನೆಗಳಿಗೆ ಭೇಟಿ ಮಾಡಿ ಸುಮಾರು 55 ಪ್ರಶ್ನೆಗಳ ಮೂಲಕ, ಸುಮಾರು 1,351 ಜಾತಿ – ಉಪ ಜಾತಿಗಳ ಕುಟುಂಬಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯ ನಂತರದ 76 ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲ ಸಮುದಾಯಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಒಕ್ಕೂಟ ಹಾಗೂ ರಾಜ್ಯ ಸರಕಾರಗಳು ಲಕ್ಷಾಂತರ ಕೋಟಿ ರೂ.ಗಳನ್ನು ವ್ಯಯ ಮಾಡಿದ್ದು, ಅದರ ಫಲಿತಾಂಶವನ್ನು ಇಂತಹ ಸಮೀಕ್ಷೆಗಳ ಮೂಲಕ ರಾಜ್ಯದ ಜನತೆ ತಿಳಿಯುವುದು ಅಗತ್ಯವಿದೆ. ವರದಿಯು, ಸಾರ್ವಜನಿಕ ಚರ್ಚೆಗೆ ಬಹಿರಂಗಗೊಂಡ ನಂತರವೇ ಅದು ಸರಿಯಿದೆಯಾ ಅಥವಾ ವ್ಯತ್ಯಾಸವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಅದು ಬಿಡುಗಡೆಯಾಗದೇ, ಅದರಲ್ಲೇನಿದೆಯೆಂಬುದು ತಿಳಿಯದೇ ಊಹೆಯ ಮೇಲೆ ವಿರೋಧಿಸುವುದು ಅಥವಾ ಬೆಂಬಲಿಸುವುದು ಸರಿಯಾದ ಕ್ರಮವಲ್ಲ” ಎಂದರು.

“ಬಹುಶಃ ಸಮೀಕ್ಷೆಯ ಫಲಿತಾಂಶ ಮತ್ತು ಅದರಿಂದ ಆಗಬಹುದಾದ ಮುಂದಿನ ಕ್ರಮಗಳು, ಕೆಲವರನ್ನು ಭಯ ಭೀತಿಗೊಳಿಸಿರುವುದರಿಂದ ಅದನ್ನು ವಿರೋಧಿಸಿ ತಡೆಯುವ ಕ್ರಮಗಳಿಗೆ ಮುಂದಾಗುವ ಮೂಲಕ ಸರಕಾರದ ಮೇಲೆ ಒತ್ತಡ ಹೇರುತ್ತಿರುವಂತೆ ಕಾಣುತ್ತಿದೆ. ವೈಜ್ಣಾನಿಕವಾದ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯು, ಕೆಲವರ ಕೈಯಲ್ಲಿ ಕೇಂದ್ರೀಕೃತವಾದ ಅಧಿಕಾರ ಹಾಗೂ ಕೆಲವರಿಗೆ ಲಾಭಕರವಾಗಿರುವ ಸಾರ್ವಜನಿಕ ವೆಚ್ಚದ ಹೂರಣವನ್ನು ಬಯಲಿಗೆಳೆಯಲಿದೆ. ಹೀಗಾಗಿ ಈ ಕೆಲವರಿಗೆ ಅಧಿಕಾರ ಹಾಗೂ ಸಾರ್ವಜನಿಕ ವೆಚ್ಚದಿಂದ ಸಿಗುವ ಆದಾಯವು ಕಡಿತಗೊಳ್ಳಬಹುದೆಂಬ ಭೀತಿಯು ಕಾಡುತ್ತಿರಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬರ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘಟನೆಗಳು ಆಗ್ರಹ

“ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಇಂತಹ ಸಮೀಕ್ಷೆಗಳ ಅಗತ್ಯವಿದೆ. ಆದ್ದರಿಂದ ಇದರ ಸತ್ಯಾಸತ್ಯತೆ ಜನತೆ ತಿಳಿಯುವಂತಾಗಲು ಈ ವರದಿ ಬಹಿರಂಗವಾಗುವುದು ಅಗತ್ಯವಾಗಿದೆ. ಯಾವುದೇ ಆಂತರಿಕ ಹಾಗೂ ಬಾಹ್ಯ ಒತ್ತಡಗಳಿಗೆ ಮಣಿಯದೇ ಮುಖ್ಯಮಂತ್ರಿಗಳು ಆಯೋಗದ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡುವಂತೆ” ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...