ಹಗರಿಬೊಮ್ಮನಹಳ್ಳಿ | ತುಂಗಭದ್ರ ಕ್ರಸ್ಟ್ ಗೇಟ್‌; ಅಧಿಕಾರಿಗಳ ಅಮಾನತುಗೊಳಿಸುವಂತೆ ರೈತರಿಂದ ಮನವಿ

Date:

ಹೊಸಪೇಟೆಯಲ್ಲಿರುವ ತುಂಗಭದ್ರಾ ನೀರನ್ನು ಉಳಿಸುವಂತೆ ಒತ್ತಾಯಿಸಿ ವಿಜಯನಗರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ಹಗರಿಬೊಮ್ಮನಹಳ್ಳಿಯ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ರಾಜ್ಯ ಕಾರ್ಯದರ್ಶಿ ಗೋಣಿಬಸಪ್ಪ ಬಿ.ಮಾತನಾಡಿ, “ವಿಜಯನಗರ ಜಿಲ್ಲೆಯ ತುಂಗಭದ್ರ ಡ್ಯಾಮ್‌ನ 19 ನೇ ಗೇಟ್ ಸಂಪೂರ್ಣ ಕಿತ್ತು ಹೋಗಿದ್ದು, ಅದನ್ನು ಕೂಡಲೆ ರಿಪೇರಿ ಮಾಡಿಸಿ, ನೀರನ್ನು ರಕ್ಷಿಸಬೇಕು. ಈ ನದಿಯ ನೀರನ್ನು ನಂಬಿ ಮೂರು ರಾಜ್ಯಗಳ 22 ಜಿಲ್ಲೆಯ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈಗ ನೀರು ಸಂಪೂರ್ಣ ಪೋಲಾಗುವುದರಿಂದ ಬೆಳೆಗಳಿಗೆ ಹಾಕಿರುವ ಬಂಡವಾಳ ನಷ್ಟವಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ತುಂಗ ಭದ್ರ ಹಿನ್ನೀರಿನ ಏತ ನೀರಾವರಿ ಯೋಜನೆಗಳನ್ನು ನಂಬಿ ಕೋಟ್ಯಾನುಗಟ್ಟಲೆ ಬಂಡವಾಳ ಹಾಕಿ ಹಲವು ರೈತರು ಕೃಷಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕ್ರಸ್ಟ್ ಗೇಟ್ ಒಡೆದು ನೀರು ಹೋಗುತ್ತಿರುವುದರಿಂದ ಹಾಕಿರುವ ಬಂಡವಾಳ ವಾಪಸು ಬರದೇ ರೈತರು ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಾಲದ ಹೊರೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರಬಹುದು. ಇದನ್ನು ತಡೆಗಟ್ಟಬೇಕಾದರೆ, ಎಲ್ಲ ರೈತರಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕು. ಈ ಬಗ್ಗೆ ಕೇಂದ್ರ ಮತ್ತೆ ರಾಜ್ಯ ಸರ್ಕಾರಗಳು ಸಮೀಕ್ಷೆ ಮಾಡಿ, ಬೆಳೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಬಿ. ಗೋಣಿಬಸಪ್ಪ, ಎನ್. ವೀರಣ್ಣ, ಹರಟಿಕಾಳಪ್ಪ, ಕೆ. ಶಿವಣ್ಣ, ವಿ. ನಾಗೇಂದ್ರಪ್ಪ, ರವಿಕುಮಾರ್,ಬಿ. ಯಮುನೂರಪ್ಪ, ಬಗಪ್ಪ, ಬಿ. ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು.

ಹಕ್ಕೊತ್ತಾಯಗಳು:

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಪರಿಹಾರ ಒದಗಿಸಿ ಕೊಡಬೇಕು.
  2. ತುಂಗಭದ್ರ ಡ್ಯಾಮ್‌ನ ಕ್ರಸ್ಟ್ ಗೇಟ್‌ನ ಚೇನ್ ಕಟ್ಟಾಗಿ ಗೇಟು ಮುರಿಯಲು ಕಾರಣರಾದ ಬೇಜವಾಬ್ದಾರಿ ಅಧಿಕಾರಿಗಳನ್ನು ಈ ಕೂಡಲೆ ಅಮಾನತುಗೊಳಿಸಬೇಕು
  3. ಕೂಡಲೆ ಗೇಟ್ ರಿಪೇರಿ ಮಾಡಬೇಕು.
  4. ಆಯಕಟ್ಟಿನ ರೈತರ ಮುಂಗಾರಿನ ಬೆಳೆಗೆ ಮತ್ತು ಏತ ನೀರಾವರಿ ಯೋಜನೆಯ ಎಲ್ಲ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆ ಪರಿಹಾರವನ್ನು 1 ಎಕರೆಗೆ ರೂ 25,000ದಂತೆ ಕೂಡಲೇ ನೀಡಬೇಕು.
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...