ಮಂಡ್ಯ | ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಹಲ್ಲೇಗೆರೆ, ಚಂದಗಾಲು ಗ್ರಾಮಸ್ಥರಿಂದ ಧರಣಿ

Date:

ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಸಂತೇಮಾಳ ಸ್ಥಳ ಮತ್ತು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಹಲ್ಲೆಗೆರೆ ಮತ್ತು ಚಂದಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಮತ್ತು ಸದಸ್ಯರು ರಸ್ತೆ ತಡೆ ಮಾಡಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ, “ಶಿರಾ ಮತ್ತು ಮಂಡ್ಯ ರಾಜ್ಯ ಹೆದ್ದಾರಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದಲೂ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ.‌ ಆದರೆ ರಸ್ತೆ ದುರಸ್ತಿ ಕಾರ್ಯ ಮಾತ್ರ ಪರಿಪೂರ್ಣವಾಗಿಲ್ಲ. ನಮ್ಮ ಗ್ರಾಮದ ಸಂತೆಮಾಳವನ್ನು ಕಡೆಗಣಿಸಿ ಅದರ ಸ್ಥಳವನ್ನು ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

1001187403

ಉತ್ತಮ ರಸ್ತೆ ನಿರ್ಮಿಸುವ ಮೂಲಕ ರಾಜ್ಯ ಹೆದ್ದಾರಿಯಲ್ಲಿ ಮುಕ್ತವಾಗಿ ಸಂಚಾರ ಮಾಡಲು ಅವಕಾಶ ಮಾಡಿಕೊಡಬೇಕು. ಈಗ ನಕಲಿ ಆರ್‌ಟಿಸಿ ಸೃಷ್ಟಿಸಿಕೊಂಡಿರುವ ಕೆಲವು ಸಂತೆಮಾಳದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ತಕ್ಷಣವೇ ಉಪಯೋಗಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ಮುಖಂಡ ಹಲ್ಲೇಗೆರೆ ಹರೀಶ್‌ ಮಾತನಾಡಿ, ರಸ್ತೆ ಅಭಿವೃದ್ಧಿಯಾಗಿದೆ ಎಂದು ನಮ್ಮ ಭಾಗದ ರಸ್ತೆಯ ಹಣವನ್ನು ಗುತ್ತಿಗೆದಾರ ತೆಗೆದುಕೊಂಡಿದ್ದಾನೆ. ಒಂದು ಭಾಗದ ರಸ್ತೆ ಕಡೆಯವರು ಒತ್ತುವರಿಯಾಗಿದೆ ಎಂದರೆ ಮತ್ತೊಂದು ಬದಿಯ ಜನರು ಒತ್ತುವರಿಯಾಗಿಲ್ಲ ಎನ್ನುತ್ತಾರೆ. ಇದನ್ನು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ನಿಜವಾಗಲೂ ರಸ್ತೆ ಒತ್ತುವರಿಯಾಗಿದ್ದರೆ ಅವರಿಗೆ ಪರಿಹಾರ ನೀಡಬೇಕು. ಜೊತೆಗೆ ಒತ್ತುವರಿ ಮಾಡಿಕೊಂಡಿರುವ ಕಡೆ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮುಖಂಡ ಚಲ್ಲನಾಯಕನಹಳ್ಳಿ ಸುರೇಶ್‌ ಮಾತನಾಡಿ, ಕರ್ನಾಟಕ ರಾಜ್ಯ ರಸ್ತೆಯು 2002ರಲ್ಲಿ ಡಿಪಿಆರ್‌ ಆಗಿದೆ.‌ ಅದರ ಪ್ರತಿ ಕೂಡ ಇದೆ ಎಲ್ಲಿ ಒತ್ತುವರಿಯಾಗಿದೆ ಎಂಬುದನ್ನು ತಿಳಿದು ಬಿಡಿಸಬೇಕು. ಈ ಹಿಂದೆ ಭೂ ಸ್ವಾಧೀನ ಆಗಿರುವುದನ್ನು ಬಿಟ್ಟು ಬೇರೆ ಜಾಗವನ್ನು ತೆಗೆದುಕೊಂಡಿದ್ದಾರೆ. ಅದನ್ನು ಬಿಟ್ಟು ಮೂಲ ಭೂಸ್ವಾಧೀನವಾಗಿರುವ ಕಡೆ ರಸ್ತೆ ನಿರ್ಮಾಣ ಮಾಡಿ ರೈತರಿಗೆ ಪರಿಹಾರ ನೀಡಲಿ ಎಂದು ಒತ್ತಾಯಿಸಿದರು.

ಕಳೆದ ವಾರದ ಹಿಂದೆ ಬಂದ ಎಸಿ ಮತ್ತು ತಹಶೀಲ್ದಾರ್, ಜಿಲ್ಲಾ ಪಂಚಾಯಿಯಿ ಸಿಇಒ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಮೂಲ ರಸ್ತೆ ಎಲ್ಲಿ ಹೋಗಬೇಕು ಎನ್ನುವುದನ್ನು ತಿಳಿಸಿದ್ದಾರೆ.‌ 2010ರಲ್ಲಿಯೂ ಈ ಹಿಂದೆ ಆದಂತಹ ಡಿಪಿಆರ್‌ ಅನ್ನು ಮುಂದುವರಿಸುತ್ತಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿಗೆ ಹೇಳಿದರೆ, ನಮ್ಮ ಜನರ ಮೇಲೆಯೇ ಆರೋಪ ಮಾಡುತ್ತಾರೆ. ಅವರಿಗೆ ಒಂದು ಮತಕ್ಕೂ ನಾವು ಬೇಕಿತ್ತು. ಈಗ ಬೇಡ, ಅದೇ ಶಾಸಕ ರವಿಕುಮಾರ್‌ ಗಣಿಗ ಅವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಧರಣಿಯಲ್ಲಿ ಗ್ರಾ.ಪಂ.ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಭಾಗ್ಯಮ್ಮ, ಮುಖಂಡರಾದ ನಿಂಗರಾಜು, ಸಿ.ಕೆ.ಪಾಪಯ್ಯ, ಕರೀಗೌಡ, ಚಲ್ಲನಾಯಕನಹಳ್ಳಿ ಶಂಕರ್, ರಾಜಣ್ಣ, ದಯಾನಂದ, ರಾಮಲಿಂಗಯ್ಯ, ಮಣಿ, ಶಶಿ, ವಿಜಯೇಂದ್ರ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...