ಬೀದರ್‌ | ಬಡ ಕಲಾವಿದನಿಗೆ ರಾಜೋತ್ಸವ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ : ನರಸಪ್ಪ ಮಾಳೆಗಾಂವ

Date:

ರಾಜ್ಯ ಸರ್ಕಾರ ನನ್ನಂತಹ ಬಡ ಕಲಾವಿದನಿಗೆ ಗುರುತಿಸಿ, ರಾಜ್ಯ ಮಟ್ಟದ ಕರ್ನಾಟಕ
ರಾಜ್ಯೋತ್ಸವ ಪ್ರಶಸ್ತಿ ನೀಡಿ  ಗೌರವಿಸಿದ್ದು ತುಂಬಾ ಸಂತೋಷವಾಗಿದೆ ಎಂದು ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ  ನರಸಪ್ಪಾ ಭೂತೇರ ಮಾಳೆಗಾಂವ ಹೇಳಿದರು.

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಬೀದರ್‌ ಜಿಲ್ಲೆಯ ಭೂತೇರ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳಿಂದ ನಗರದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ,”ಗಡಿ ಜಿಲ್ಲೆಯ ಒಬ್ಬ ಬಡ ಕಲಾವಿದನಿಗೆ ರಾಜ್ಯಮಟ್ಟದಲ್ಲಿ ಗುರುತಿಸಿದೆ” ಎಂದು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.

ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಮಾತನಾಡಿ, “ಗಡಿ ಜಿಲ್ಲೆಯಲ್ಲಿ ಕಳೆದ 40 ವರ್ಷಗಳಿಂದ ಭೂತೇರ ಕುಣಿತ ಕಲೆಯನ್ನು ಜೀವಂತವಾಗಿಟ್ಟ ಬಡ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು ಜಿಲ್ಲೆಗೆ ಹೆಮ್ಮೆಯಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಶ್ರೀಮಂತ ವ್ಯಕ್ತಿಗಳಿಗೆ ಲಭಿಸಿದರೆ ಜಿಲ್ಲಾ ನಾಗರಿಕ ಸಮಿತಿ ಸನ್ಮಾನ ಕಾರ್ಯಕ್ರಮ ಆಯೋಜಿಸುತ್ತದೆ. ಆದರೆ ಓರ್ವ ನಿಷ್ಠಾವಂತ ಬಡ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಿದರೂ ಬೀದರ ಜಿಲ್ಲಾ ನಾಗರಿಕ ಸಮಿತಿ ಕನಿಷ್ಢ ಗೌರವಿಸದೇ ಇರುವುದು ಶೋಚನೀಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಮಾತನಾಡಿ, “ಗಡಿ ಜಿಲ್ಲೆಯಲ್ಲಿ ಭೂತೇರ ಕುಣಿತ ಕಲೆ ಮುಂದಿನ ಪೀಳಿಗೆಗೆ ಜೀವಂತವಾಗಿಡಲು ನರಸಪ್ಪ ಮಾಳೆಗಾಂವ ಅವರು ತಮ್ಮ ಶಿಷ್ಯಂದಿರ ಸಂಖ್ಯೆ ಹೆಚ್ಚಿಸಬೇಕು. ಇದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಶಿಸಿ ಹೋಗುತ್ತಿರುವ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇವರ ತಂಡ
ಕಾರ್ಯಪ್ರವೃತ್ತರಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದೀರಾ? ಈ ದಿನ ಸಂಪಾದಕೀಯ | ಭೂ ಹಗರಣಗಳ ತನಿಖೆಗೆ ಹೆಗ್ಗಡೆಯವರು ಸಿದ್ಧವಿರುವರೇ?

ಕಾರ್ಯಕ್ರಮದಲ್ಲಿ ಕರ್ನಾಟಕ ಯುವ ಸಂಘ-ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಸಾಹಿತಿಗಳಾದ ರಮೇಶ ಬಿರಾದಾರ, ರಾಜಕುಮಾರ ಹೆಬ್ಬಾಳೆ ಹಾಗೂ ಪ್ರಮುಖರಾದ ನಾಗಶೆಟ್ಟಿ ಧರಮಪೂರ, ಎಂ.ಪಿ. ಮುದಾಳೆ, ಹಾಜಿಪಾಶಾ ಬಾಳೂರ, ಯಾದವರಾವ ಘೋಡ್ಕೆ, ಸಂಜೀವಕುಮಾರ ಅತಿವಾಳೆ, ಪಂಢರಿ ನೇಳಗೆ, ರವಿ ನೇಳಗೆ, ಸಂಗ್ರಾಮ ಚಿಟ್ಟಾ, ಹಣಮಂತ ರಾಮಲು, ರೇಣುಕಾ ಅವರು ಸೇರಿದಂತೆ ನಾವದಗೇರಿ ಬಡಾವಣೆಯ ಮಹಿಳೆಯರು, ಮಕ್ಕಳು, ಹಿರಿಯರು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...