ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

Date:

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ತನಿಖೆ ಮತ್ತೊಂದು ತಿರುವು ಪಡೆದಿದೆ. ಬಂಧಿತ ಮೂವರು ಆರೋಪಿಗಳನ್ನು ಬಳಸಿಕೊಂಡು ಕೆಲವರು ಈ ಕೊಲೆ ಮಾಡಿಸಿರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. ಹಣಕ್ಕಾಗಿ ಈ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಇಂದು ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಗಳಾದ ಫೈಝಲ್, ಶರೀಫ್ ಹಾಗೂ ಶುಕೂರಿಗೆ ಸೈಫ್‌ನ ವಿರುದ್ಧ ವೈಯಕ್ತಿಕ ಧ್ವೇಷ ಇತ್ತು ಎಂದು ಹೇಳಿದರು. ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗ ಸೈಫ್ ಯಾವುದೇ ರೀತಿಯ ಸಹಕಾರ ನೀಡದಿದ್ದ ಕಾರಣದಿಂದ ಶರೀಫ್ ಮತ್ತು ಶುಕೂರು ಅಸಮಾಧಾನಗೊಂಡಿದ್ದರು. ಫೈಝಲ್‌ಗೂ ತನ್ನ ಪತ್ನಿಯೊಂದಿಗೆ ಸೈಫ್ ಸಂಪರ್ಕದಲ್ಲಿದ್ದಾನೆ ಎಂಬ ಅನುಮಾನದಿಂದ ದ್ವೇಷ ಹುಟ್ಟಿತ್ತು. ಈ ಕಾರಣಗಳನ್ನು ಬಳಸಿಕೊಂಡು ಕೆಲವು ಮಂದಿ ಸೇರಿ ಕೊಲೆಗೈದಿದ್ದಾರೆ ಎಂದು ಹೇಳಿದರು.

WhatsApp Image 2025 10 06 at 9.38.18 AM

ಸೈಫ್‌ನನ್ನು ಕೊಲೆ ಮಾಡಲು ಆರೋಪಿಗಳು ಹಲವು ತಿಂಗಳಿನಿಂದ ಸಂಚು ರೂಪಿಸಿದ್ದರು. ಸುಮಾರು ಎರಡು ತಿಂಗಳ ಹಿಂದೆ ಈ ಯೋಜನೆ ಅಂತಿಮಗೊಂಡಿತ್ತು. ಸೆಪ್ಟೆಂಬರ್ 27ರಂದು ಫೈಝಲ್ ಸೈಫ್‌ನನ್ನು “ಬಸ್ಸಿನ ವ್ಯವಹಾರದ ಕುರಿತು ಮಾತನಾಡಲು ಮಂಗಳೂರಿಗೆ ಹೋಗೋಣ” ಎಂದು ಹೇಳಿ ಮನೆಗೆ ಕರೆದುಕೊಂಡು ಬಂದಿದ್ದ. ನಂತರ “ನಿನ್ನನ್ನು ನೋಡಲು ರಿಧಾ ಕೊಡವೂರಿನ ಮನೆಯಲ್ಲಿ ಕಾಯುತ್ತಿದ್ದಾಳೆ” ಎಂದು ಸುಳ್ಳು ಹೇಳಿ ಆತನನ್ನು ಕೊಡವೂರಿನ ಮನೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಶರೀಫ್ ಮತ್ತು ಶುಕೂರು ಶೆಡ್‌ನಲ್ಲಿ ಅಡಗಿ ಕುಳಿತಿದ್ದು, ಸೈಫ್ ಮನೆಗೆ ಪ್ರವೇಶಿಸುತ್ತಿದ್ದಂತೆಯೇ ಮೂವರು ಸೇರಿಕೊಂಡು ಕೊಲೆಗೈದಿದ್ದಾರೆ ಎಂದು ಎಸ್ಪಿ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 06 at 9.36.30 AM

ಈ ಸಂಚಿನಲ್ಲಿ ಫೈಝಲ್‌ನ ಪತ್ನಿ ರಿಧಾ ಶಭಾನಳೂ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಆಕೆಯನ್ನು ಈಗಾಗಲೇ ಬಂಧಿಸಲಾಗಿದೆ. ಸೈಫ್ ಆಕೆಗೆ ಕಿರುಕುಳ ನೀಡುತ್ತಿದ್ದಾನೆ ಎಂಬ ಫೈಝಲ್‌ನ ಹೇಳಿಕೆಯನ್ನು ಪೊಲೀಸರು ಪರಿಶೀಲಿಸಿದಾಗ, ಅವರಿಬ್ಬರ ಮಧ್ಯೆ ಸಾಕಷ್ಟು ಫೋನ್‌ಕಾಲ್‌ಗಳು ಹಾಗೂ ಚಾಟ್‌ಗಳ ದಾಖಲೆಗಳು ದೊರೆತಿದ್ದು, ಕಿರುಕುಳದ ಆರೋಪ ಸಾಬೀತಾಗಿಲ್ಲವೆಂದು ಎಸ್‌ ಪಿ ಸ್ಪಷ್ಟಪಡಿಸಿದರು. ಕನಿಷ್ಠ ಒಂದು ವರ್ಷದಿಂದ ಸೈಫ್ ಮತ್ತು ರಿಧಾಳ ನಡುವೆ ಸಂಪರ್ಕ ಇದ್ದದ್ದು ತನಿಖೆಯಿಂದ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವರು ಸಂಚಿನಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು, ಅವರನ್ನೂ ಬಂಧಿಸುವ ಕಾರ್ಯ ನಡೆಯುತ್ತಿದೆ. ಸಂಚಿನಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...