ಹಾಸನ | ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಭಾನುವಾರ ಬೆಳಿಗ್ಗೆ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ.

ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ ರೂ. ಬೆಲೆ ಬಾಳುವ 26 ಎಕರೆ 33 ಗುಂಟೆ ಅರಣ್ಯ ಜಮೀನನ್ನು ಕೆಲವರು ಒತ್ತುವರಿ ಮಾಡಿ, ಇಲ್ಲಿದ್ದ ಮರಗಳನ್ನು ಕಡಿದು ತೋಟ ಮಾಡುವ ದುಸ್ಸಾಹಸ ಮಾಡಿದ್ದರು. ಈ ಬಗ್ಗೆ ಕಚೇರಿಗೆ ಬಂದ ದೂರು ಆಧರಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಕಳೆದ ಅಕ್ಟೋಬರ್ 23ರಂದು ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದರು.

ಸದರಿ ಜಮೀನು ಮೀಸಲು ಅರಣ್ಯವಾಗಿದ್ದು, ಅರಣ್ಯ ಒತ್ತುವರಿ ಮಾಡಿ ಮರ, ಗಿಡ ನಾಶ ಮಾಡಿ, ತೋಟ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಇಂದು ಬೆಳಿಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ತೆರಳಿ, ಅರಣ್ಯ ಭೂಮಿ ತೆರವು ಮಾಡಿ, ಸ್ಥಳೀಯ ಪ್ರಭೇದದ ಸಸಿಗಳನ್ನು ನೆಟ್ಟು, ಫಲಕ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ವರ್ಷಗಳಿಂದ ಹಾಸನ ಜಿಲ್ಲೆಯಲ್ಲಿ ಶುಂಠಿ ಬೆಳೆಯುವ ಹೆಸರಿನಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು, ಅರಣ್ಯ ಭೂಮಿ ಕಬಳಿಸಿ, ಬೆಲೆ ಬಾಳುವ ಮರ ಕಡಿದು ನಂತರ ತೋಟ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಅರಣ್ಯ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡುತ್ತಿದ್ದಾರೆ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಮೇಲೆ ಇಂತಹ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಗರೇಟ್‌ ತಂದು ಕೊಡಲಿಲ್ಲವೆಂದು ಕಾರಿನಿಂದ ಡಿಕ್ಕಿ ಹೊಡೆದು ಕೊಲೆ; ಆರೋಪಿ ಬಂಧನ

ಅರಣ್ಯ ಭೂಮಿಯನ್ನು ಮನಸೋಇಚ್ಛೆ ಒತ್ತುವರಿ ಮಾಡಿ ತೆಂಗು, ಕಾಫಿ ಮತ್ತು ಅಡಿಕೆ ತೋಟ ಮಾಡುತ್ತಿದ್ದವರಿಗೆ ಮಡಬ ಅರಣ್ಯ ತೆರವು ಎಚ್ಚರಿಕೆಯ ಗಂಟೆಯಾಗಿದೆ.

ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...