ಹಾಸನ | ವಿಡಿಯೋ ಮಾಡಿ ಇನ್ಸ್ಟಾದಲ್ಲಿ ಹರಿಬಿಟ್ಟ ಯುವತಿ; ಮನನೊಂದು ಯುವಕ ಆತ್ಮಹತ್ಯೆ

Date:

ಪ್ರಭಾವೀ ಸೋಷಿಯಲ್‌ ಮೀಡಿಯಾ ಇನ್ಸ್ಟಾಗ್ರಾಂನಲ್ಲಿ ತನ್ನ ವಿಡಿಯೋವನ್ನು ಇನ್ಯಾರೋ ಅಪ್‌ಲೋಡ್‌ ಮಾಡಿ ಹಂಚಿಕೊಂಡರೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾಸನ ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪವನ್‌ ಕೆ (21) ಮೃತ ಯುವಕ.

ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಪವನ್ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಇಬ್ಬರು ಸ್ನೇಹಿತೆಯರ ಜೊತೆ ಕುಳಿತಿದ್ದ. ಆ ಸಮಯದಲ್ಲಿ ಒಬ್ಬ ಯುವತಿಯ ಕೈ ಹಿಡಿದು ಆತ್ಮೀಯವಾಗಿ ಮಾತನಾಡುತ್ತಿದ್ದ. ಈ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ಮೊಬೈಲ್‌ನಲ್ಲಿ ಚಿತ್ರೀಕರಿಸಿ chinnivasi8 ಎಂಬ ಇನ್ಸ್ಟಾಗ್ರಾಂ ಖಾತೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಳು.

WhatsApp Image 2025 09 19 at 11.00.28 AM

ವಿಡಿಯೋ ವೈರಲ್‌ ಆಗಿ, ಟೀಕೆ-ವ್ಯಂಗ್ಯಗಳು ಹೆಚ್ಚಾದ ಹಿನ್ನೆಲೆ ಪವನ್‌ ತೀವ್ರ ಮನನೊಂದು, ತಾನು ಜೊತೆಗಿದ್ದ ಯುವತಿಯರಿಗೆ ತೊಂದರೆ ಉಂಟಾಗಬಹುದು ಎಂದು ಭಯಗೊಂಡಿದ್ದಾನೆ. ವಿಡಿಯೋ ಡಿಲೀಟ್‌ ಮಾಡಿಸಲು ಸಹ ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇದೇ ಆತಂಕದಲ್ಲಿದ್ದ ಪವನ್‌, ಗುರುವಾರ (ಸೆ.18) ಕಾಲೇಜು ಮುಗಿಸಿಕೊಂಡು ಮನೆಗೆ ಹಿಂತಿರುಗಿ, ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್

ಪವನ್ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಪುಟ್ಟಲಕ್ಷ್ಮೀ ಗಾರೆ ಕೆಲಸ ಮಾಡಿ ಮಗನನ್ನು ಸಾಕುತ್ತಿದ್ದರು. ಮಗನ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಪವನ್ ಸಾವಿಗೆ ಕಾರಣಳಾದ ಅಪರಿಚಿತ ಯುವತಿಯನ್ನು ಬಂಧಿಸಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದು, ಮುಂದೆ ಇಂತಹ ಮಾನಹಾನಿ ಯಾರಿಗೂ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...