ಹಾಸನ | ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ, ಅನುಸರಿಸಬೇಕು: ಡಾ. ಬಿಪಿನ್ ನಾಗರಾಜ್

Date:

ದಲಿತ ಎಂದರೆ ಜಾತಿಯಲ್ಲ. ಅದು ಒಂದು ಶೋಷಿತ ವರ್ಗದವರು ಎಂದರ್ಥ. ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ ಅನುಸರಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಮೈಸೂರು ವಿಶ್ವವಿದ್ಯಾಲಯ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಿಪಿನ್ ನಾಗರಾಜ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಹಾಸನ ನಗರದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಗುಡ್ಡೆನಹಳ್ಳಿ ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳ ಸಹಯೋಗ ಹಾಗೂ ದಲಿತ ವಿದ್ಯಾರ್ಥಿಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್‌ ಅವರ 134ನೇ ಜಯಂತಿ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

“ಪ್ರಸ್ತುತ ಯುವಜನರೆಲ್ಲರೂ ಬುದ್ಧನ ಮಾರ್ಗದಲ್ಲಿ ನಡೆಯರಿ. ಬಾಬಾಸಾಹೇಬರನ್ನು ಒಂದು ವರ್ಗಕ್ಕೆ ಸೀಮಿತ ಮಾಡಬಾರದು. ಅಂಬೇಡ್ಕರ್ ಅವರ ಪ್ರಬುದ್ಧ ಭಾರತ ಕಟ್ಟಲು ನಾವೆಲ್ಲರೂ ಪಣ ತೊಡಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನುವಾದವನ್ನು ಮೆಟ್ಟಿನಿಲ್ಲುವ ಶಕ್ತಿ ಇರುವುದು ಅಂಬೇಡ್ಕರ್ ವಾದಕ್ಕೆ ಮಾತ್ರ. ಹಾಗಾಗಿ ಅಂಬೇಡ್ಕರ್‌ ಅವರ ಮೆರವಣಿಗೆ ಬೇಡ, ಬದಲಿಗೆ ಅವರ ಬರವಣಿಗೆ ಬೇಕು. ಅದಕ್ಕಾಗಿ ತಾವೆಲ್ಲರೂ ಬುದ್ಧ ದಮ್ಮವನ್ನು ಅನುಸರಿಸಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅಂಬೇಡ್ಕರ್‌ ನಿಲಯದ ವಿದ್ಯಾರ್ಥಿಗಳು

ದಲಿತ ಸಂಘರ್ಷ ಸಮಿತಿಯ(ಅಂಬೇಡ್ಕರ್ ವಾದ) ರಾಜ್ಯ ಪ್ರದಾನ ಸಂಚಾಲಕರೂ ಆದ ಮಾವಳ್ಳಿ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಸಂವಿಧಾನದ ಬಗ್ಗೆ ಕಟುವಾಗಿ ಮಾತನಾಡುವವರ ವಿರುದ್ಧ ಬಹಳ ಎಚ್ಚರಿಕೆಯಿಂದ ಇರಬೇಕು. ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಬದುಕಬೇಕಿದೆ. ಸಂವಿಧಾನ ಮತ್ತು ಮನುಸ್ಮೃತಿ ನಡುವೆ ನೆಡೆಯುತ್ತಿರುವ ಯುದ್ಧವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಸಲಹೆ ನೀಡಿದರು.

“ಮನು ಧರ್ಮ ಅತ್ಯಂತ ಕಠೋರವಾಗಿ ನಮ್ಮೊಳಗೇ ಪ್ರವೇಶ ಮಾಡುತ್ತ ಬಂದಿದೆ. ಹಾಗಾಗಿ ನಾವೆಲ್ಲರೂ ಜಾಗೃತರಾಗಿ ಬದುಕಬೇಕಿದೆ. ಜತೆಗೆ ಬಾಬಾ ಸಾಹೇಬರ ಆಶಯವನ್ನು ನಾವೆಲ್ಲರೂ ಈಡೇರಿಸಿ ಮುನ್ನೆಡೆಯಬೇಕಿದೆ” ಎಂದು ಕರೆ ನೀಡಿದರು.

ಅರಕಲಗೂಡಿನ ಪ್ರಥಮ ದರ್ಜೆ ಕಾಲೇಜು ಪ್ರಾಶುಪಾಲ ಮಹೇಶ್ ಎಂ ಮುಖ್ಯ ಅತಿಥಿಗಳಾಗಿ ಮಾತನಾಡಿ, “ಅಂಬೇಡ್ಕರ್ ಅವರು ಒಬ್ಬ ಶ್ರೇಷ್ಠ ಉದಾರವಾದಿ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು. ವೈಜ್ಞಾನಿಕ ಮನೋಭಾವನೆಯಿಂದ ಬದುಕಬೇಕು” ಎಂದು ಹೇಳಿದರು.

ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಹರೀಶ್ ಅತ್ನಿ ಮಾತನಾಡಿ, “ವಿದ್ಯಾರ್ಥಿಗಳು ದೇಶದ ಯುವಪ್ರತಿಭೆಗಳು. ಇಡೀ ಪ್ರಪಂಚದಲ್ಲಿ ಅತಿ ಅಭಿಮಾನಿಗಳು ಇದ್ದರೆ ಅದು ಅಂಬೇಡ್ಕರ್ ಅವರು ಮಾತ್ರ. ಹಾಗಾಗಿ ಅಂಬೇಡ್ಕರ್ ಅವರನ್ನು ಆಚರಿಸದೆ ಅನುಸರಿಸಬೇಕು” ಎಂದು ತಿಳಿಸಿದರು.

ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮನುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಅಂಬೇಡ್ಕರ್ ಅಭಿಮಾನಿಗಳು ಅನುಯಾಯಿಗಳಾಗಿ ವಿಚಾರವಂತರಾಗೋಣ” ಎಂದು ಕರೆ ನೀಡಿದರು.

ಇದನ್ನೂ ಓದಿದ್ದೀರಾ? ಮನೆಮನೆಗೆ ಪರಿಶಿಷ್ಟ ಜಾತಿ ಸಮೀಕ್ಷೆಯ ಸ್ಟಿಕ್ಕರ್: ನಾಗರಿಕರಿಗೆ ಸ್ಪಷ್ಟೀಕರಣ ನೀಡಿದ ಬಿಬಿಎಂಪಿ

ಕಾರ್ಯಕ್ರಮದಲ್ಲಿ ಉಪನಿರ್ದೇಶಕ ದೂದ್ ಪೀರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ದುಮ್ಮಿ ಕೃಷ್ಣ, ಈರೇಶ್ ಹಿರೇಹಳ್ಳಿ, ನಿಲಯ ಪಾಲಕರಾದ ವೆಂಕಟೇಶ್, ದೇವೇಗೌಡ, ಆನಂದ್‌ ಪ್ರಕಾಶ್, ಶಿವಾನಂದ್ ಬಿರಾದಾರ್, ಯೋಗರಾಜ್ ಹಾಗೂ ನಿಲಯದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...