ಹಾಸನ | ಬಿಇಒ ಬಲರಾಮ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ; ಎಚ್ ಪಿ ಸ್ವರೂಪ್ ಕಿಡಿ

Date:

  • ʼಬಲರಾಮ್ ಅವರಿಂದ ನ್ಯಾಯಸಮ್ಮತ, ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿಲ್ಲʼ
  • ಬಲರಾಮ್‌ ಅವರ ಮೊಬೈಲ್ ಕರೆ ಪರಿಶೀಲಿಸಿ, ತನಿಖೆ ನಡೆಸುವಂತೆ ಆಗ್ರಹ

ಹಾಸನದ ಬಿಇಒ ಬಲರಾಮ್ ಅವರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಜೆಡಿಎಸ್‌ ಅಭ್ಯರ್ಥಿ ಎಚ್ ಪಿ ಸ್ವರೂಪ್ ಆಗ್ರಹಿಸಿದ್ದಾರೆ.

ಹಾಸನ ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಏಪ್ರಿಲ್ 4ರಂದು ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. 15 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮೇಲಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

“ಬಲರಾಮ್ ಅವರು ಇದೇ ಜಿಲ್ಲೆಯ ಅರಕಲಗೂಡಿನವರು.‌ ಹಾಗಾಗಿ ಅವರಿಂದ ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ಚುನಾವಣೆ ಸಾಧ್ಯವಿಲ್ಲ. ಶಿಕ್ಷಕರಿಗೆ ಒತ್ತಡ ಹಾಕಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಇಡಿಸಿ ಮತಗಳನ್ನು ತಮ್ಮ ಕೈಗೆ ಕೊಡುವಂತೆ ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಅವರ ಮೊಬೈಲ್ ಕರೆ ಪರಿಶೀಲಿಸಿ, ತನಿಖೆ ನಡೆಸಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಲರಾಮ್‌ ಅವರು ಹಾಸನ ಜಿಲ್ಲೆಯವರೇ ಆಗಿರುವ ಕಾರಣ, ಕೂಡಲೇ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು. ಏಕೆಂದರೆ ಒಂದು ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ” ಎಂದರು.

“ಸರ್ಕಾರಿ ಶಿಕ್ಷಕರನ್ನು ಕರೆಸಿ ಅವರಿಗೆ ಊಟೋಪಚಾರ ಮಾಡುತ್ತಾ, ಒತ್ತಡ ಹಾಕುತ್ತಾ ಪ್ರಭಾವ ಬೀರುತ್ತಿದ್ದು, ಅವರ ಸಹೋದರಿ ಕೂಡ ಸಾಲಗಾಮೆಯಲ್ಲಿ ಶಿಕ್ಷಕಿ ಆಗಿರುವುದರಿಂದ ಅವರ ಮೂಲಕವೂ ಪ್ರಭಾವ ಬೀರುತ್ತಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಸೂಕ್ತವಾಗಿ ಪರಿಶೀಲನೆ ನಡೆಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನದಲ್ಲಿ ನೂರಕ್ಕೆ ನೂರು ಗೆದ್ದೇ ಗೆಲ್ತೀವಿ : ಪ್ರಜ್ವಲ್ ರೇವಣ್ಣ

ಶಾಸಕರಿಗೆ ಜನರೇ ಉತ್ತರ ಕೊಡುತ್ತಾರೆ

“ಶಾಸಕರ ಭ್ರಷ್ಟಾಚಾರದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಯಾವುದೇ ನಾಯಕರ ಬಗ್ಗೆ ಮಾತನಾಡಲ್ಲ ಎಂದಿರುವ ಪ್ರೀತಂ ಗೌಡರಿಗೆ ಈಗ ಬುದ್ದಿ ಬ೦ದಿರಬೇಕು, ದುರಹಂಕಾರದ ಶಾಸಕರಿಗೆ ಮುಂದೆ ಜನರೇ ಉತ್ತರ ಕೊಡುತ್ತಾರೆ” ಎಂದರು.

“ಜೆಡಿಎಸ್‌ ರ್‍ಯಾಲಿ ಹಾಗೂ ನಮ್ಮ ನಾಯಕರ ಆಗಮನ ಕಂಡು ಅವರಿಗೆ ಭಯ ಆಗಿರಬೇಕು. ಅದಕ್ಕೇ ಯಾರ ಬಗ್ಗೆಯೂ ಮಾತನಾಡುವುದಿಲ್ಲ” ಎಂದಿದ್ದಾರೆ ಎಂದು ಕುಟುಕಿದರು.

“ಹಾಸನ ಟಿಕೆಟ್‌ ಗೊಂದಲ ವಿಚಾರ ಈಗ ಮುಗಿದ ಅಧ್ಯಾಯ. ಭವಾನಿ ರೇವಣ್ಣ ಅವರು ನಮ್ಮ ತಾಯಿ ಇದ್ದಹಾಗೆ, ಆಶೀರ್ವಾದ ಮಾಡಿ ಪ್ರಚಾರ ಕೈಗೊಂಡಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇರಲಿಲ್ಲ. ಯಾರಿಗೆ ಟಿಕೆಟ್ ಸಿಕ್ಕರೂ ಕೆಲಸ ಮಾಡಲು ನಿರ್ಧರಿಸಿದ್ದೆವು” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಹಾಸನ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅವಕಾಶ ಇದೆ. ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತೇನೆ. ಮುಚ್ಚುತ್ತಿರುವ ಕಾರ್ಖಾನೆಗಳಿಗೆ ಪುನರುಜ್ಜೀವನ ನೀಡಬೇಕು. ಇಲ್ಲಿ ಓದಿದವರಿಗೆ ಇಲ್ಲೇ ಉದ್ಯೋಗ ಸಿಗಬೇಕು. ರೇವಣ್ಣ ಅವರ ಕನಸಿನಂತೆ ಚನ್ನಪಟ್ಟಣ ಕೆರೆ ಅಭಿವೃದ್ಧಿಯಾಗಬೇಕು ಎಂಬ ವಿಷಯ ಮುಂದಿಟ್ಟು ಜನರ ಎದುರು ಮತ ಕೇಳುವೆ” ಎಂದಿದ್ದಾರೆ.

“ಶಾಸಕರಿಗೆ ಭಯ ಶುರುವಾಗಿದೆ, ಹಾಗಾಗಿಯೇ ರೇವಣ್ಣ ಅವರನ್ನು ಒಮ್ಮೆ ಹೊಗಳೋದು, ಒಮ್ಮೆ ತೆಗಳೋದನ್ನು ಮಾಡುತ್ತಿದ್ದಾರೆ. ಸುದ್ದಿ ಮಾಧ್ಯಮಗಳ ಗಮನ ಬೇರೆಡೆಗೆ ಸೆಳೆಯಲು, ನಮ್ಮ ರ್‍ಯಾಲಿ ದಿನ ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸುವೆ ಎಂದರು. ಆದರೆ, ದೇವೇಗೌಡರ ಆದಿಯಾಗಿ ನಮ್ಮ ನಾಯಕರೆಲ್ಲರೂ ಬಂದು ಆಶೀರ್ವಾದ ಮಾಡಿದರು. ಜನ ಬೆಂಬಲವೂ ಸಿಕ್ಕಿತು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...