ಹಾಸನ | ಪಾಳು ಬಿದ್ದಿದ್ದ ಕಟ್ಟಡ ಕುಸಿತ; ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

Date:

ಪಾಳು ಬಿದ್ದಿದ್ದ ಕಟ್ಟಡ ಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.

ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಬೇಲೂರು ಬಸ್ ನಿಲ್ದಾಣದ ಮುಂಭಾಗದಲ್ಲಿದ್ದ ಸತ್ಯನಾರಾಯಣ ಎಂಬುವರಿಗೆ ಸೇರಿದ ಎಂಟು ಮಳಿಗೆಗಳನ್ನೊಳಗೊಂಡ ಹಳೆಯ ಕಟ್ಟಡ ಇದಾಗಿದ್ದು, ಇದರಲ್ಲಿ ವ್ಯಾಪಾರ ನಡೆಯುತ್ತಿತ್ತು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದರು. ಈ ವೇಳೆ ಕಟ್ಟಡದ ಸಬ್ಜಾ ಕುಸಿದುಬಿದ್ದಿದೆ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳಾ ವ್ಯಾಪಾರಿಗಳ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಾರಿ-ಕಾರು ನಡುವೆ ಭೀಕರ ಅಪಘಾತ; ಬಿಎಂಟಿಸಿ ನಿವೃತ್ತ ನೌಕರ ಸೇರಿ ಐವರ ಸಾವು

ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...