ಹಾಸನ | ಪ್ರಜ್ವಲ್‌ ಪರ ಪ್ರಚಾರ; ಬಿಜೆಪಿಗರ ಮೇಲೆ ಬಿಜೆಪಿಗರಿಂದಲೇ ಹಲ್ಲೆ?

Date:

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ 14 ದಿನಗಳಷ್ಟೇ ಬಾಕಿ ಇವೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಣಕ್ಕಿಳಿದಿವೆ. ಆದರೆ, ಹಲವೆಡೆ, ಸ್ಥಳೀಯ ಬಿಜೆಪಿ-ಜೆಡಿಎಸ್‌ ನಾಯಕರು, ಕಾರ್ಯಕರ್ತರಲ್ಲಿ ಒಂದಾಣಿಕೆ ಕಾಣಿಸುತ್ತಿಲ್ಲ. ಪರಿಣಾಮ, ಹಲವೆಡೆ ಗಲಾಟೆಗಳು ವರದಿಯಾಗುತ್ತಿವೆ.

ಇತ್ತೀಚೆಗೆ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಕುಣಿಗಲ್‌ನಲ್ಲಿ ಜೆಡಿಎಸ್‌ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿತ್ತು. ಇದೀಗ, ಹಾಸನದಲ್ಲಿಯೂ ಅಂತದ್ದೇ ಪ್ರಕರಣ ನಡೆದಿದೆ. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಪ್ರಚಾರಕ್ಕೆ ಹೋಗಿದ್ದಕ್ಕೆ ಬಿಜೆಪಿ ಮುಖಂಡನ ಮೇಲೆ ನಡೆದಿದೆ. ಹಲ್ಲೆ ನಡೆಸಿದವರೂ ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ, ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಬಿಜೆಪಿ ಮುಖಂಡನ ಅಂಗಡಿ ಮೇಲೆ 30ಕ್ಕೂ ಹೆಚ್ಚು ಮಂದಿಯ ಗುಂಪು ದಾಳಿ ನಡೆಸಿದೆ. ಬಿಜೆಪಿ ಮುಖಂಡ ಐನೆಟ್ ವಿಜಯ್ ಕುಮಾರ್ ಹಾಗೂ ಅವರ ಜೊತೆಗಿದ್ದ ಪ್ರಮೋದ್ ಮತ್ತು ಸಂದೇಶ ಎಂಬವರ ಮೇಲೆ ಹಲ್ಲೆ ನಡೆಸಿದೆ. ಮೂವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಬೆಂಬಲಿಗರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯ್ ಅವರು ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರೀತಂಗೌಡ ಅವರಿಂದ ದೂರ ಉಳಿದಿದ್ದರು. ಇದೀಗ, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರ ಪ್ರಚಾರದಲ್ಲಿ ವಿಜಯ್ ಭಾಗಿಯಾಗಿದ್ದರು. ಹೀಗಾಗಿಯೇ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಆಸ್ಪತ್ರೆಗೆ ಹಾಸನ ಜೆಡಿಎಸ್ ಶಾಸಕ ಸ್ವರೂಪ್ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...