ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

Date:

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು ನಗರದ ಎಂಜಿ ರಸ್ತೆಯ ಬಿಜಿಎಸ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಪ್ರೀತಂಗೌಡ ಕುಟುಂಬ
ಮತ ಚಲಾಯಿಸಿದ ಪ್ರೀತಂ ಗೌಡ ಮತ್ತು ಪತ್ನಿ

ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಎ ಮಂಜು ಅವರು ಹನ್ಯಾಳು ಗ್ರಾಮದಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಎ ಮಂಜು
ಮತ ಚಲಾಯಿಸಿದ ಜೆಡಿಎಸ್‌ ಅಭ್ಯರ್ಥಿ ಎ ಮಂಜು

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ ಶಿವಲಿಂಗೇಗೌಡ ಅವರು ಮತದಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದ್ದು, ಅರಸೀಕೆರೆಯ ಮಾರುತಿ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.  

ಶಿವರಾಮೇಗೌಡ ಕುಟುಂಬ
ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಂ ಶಿವಲಿಂಗೇಗೌಡ

ಹೊಳೆನರಸೀಪುರ ಕ್ಷೇತ್ರದ ಶಾಸಕ, ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ ರೇವಣ್ಣ ಮತ್ತವರ ಕುಟುಂಬಸ್ಥರು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದು, ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಡಿ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಹಾಗೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವಣ್ಣ ಮತ ಚಲಾಯಿಸಿದ್ದಾರೆ.

ರೇವಣ್ಣ ಅವರ ಕುಟುಂಬ
ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ರೇವಣ್ಣ ಅವರ ಕುಟುಂಬ

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ಪತ್ನಿ ಜೊತೆ ಬಂದ ದೇವೇಗೌಡರು
ಹೊಳೆನರಸೀಪುರ ಕ್ಷೇತ್ರದಲ್ಲಿ ಪತ್ನಿ ಜೊತೆ ಮತ ಚಲಾಯಿಸಿದ ದೇವೇಗೌಡರು
ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು 2
ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮೂರು ಪಕ್ಷದ ಅಭ್ಯರ್ಥಿಗಳು

ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್ ಅವರು ತಮ್ಮ ಕುಟುಂಬದೊಂದಿಗೆ ಬಂದು ಬೇಲೂರು ವಾರ್ಡ್ 9ರಲ್ಲಿ ಮತದಾನ ಮಾಡಿದ್ದಾರೆ.

ಹುಲ್ಲಳ್ಳಿ ಸುರೇಶ್‌ ಅವರ ಕುಟುಂಬ
ಬೇಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಳ್ಳಿ ಸುರೇಶ್

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್‌ ಮಂಜು‌ ಮತದಾನ ಮಾಡಿದ್ದು, ಜೆಡಿಎಸ್‌ ಅಭ್ಯರ್ಥಿ ಎಚ್‌ ಕೆ ಕುಮಾರಸ್ವಾಮಿ ಅವರು ಕುಟುಂಬ ಸಹಿತ ಮತದಾನ ಮಾಡಿದ್ದಾರೆ.

ಸಿಮೆಂಟ್‌ ಮಂಜು
ಸಕಲೇಶಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಮೆಂಟ್‌ ಮಂಜು
ಎಚ್‌ ಕೆ ಕುಮಾರಸ್ವಾಮಿ
ಸಕಲೇಶಪುರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌ ಕೆ ಕುಮಾರಸ್ವಾಮಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...