ಹಾಸನ ಚಲೋ | ಪ್ರಜ್ವಲ್ ಗೆದ್ದರೆ ಮತ್ತೊಮ್ಮೆ ಹೋರಾಟ: ಬಡಗಲಪುರ ನಾಗೇಂದ್ರ

Date:

ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ಹಾಸನ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿ, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟಗಾರ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ಹಾಸನ ಚಲೋ ಚಳುವಳಿಯ ಅಧ್ಯಕ್ಷತೆ ವಹಿಸಿದ್ದ ರೂಪ ಹಾಸನ ಮಾತನಾಡಿ, “ಇದು ಅತ್ಯಾಚಾರ ಅಲ್ಲ. ಇಲ್ಲಿ ನಡೆದಿರುವುದು ವಿಕೃತ ಲೈಂಗಿಕ ಹತ್ಯಾಕಾಂಡ. ಒಬ್ಬ ಸಂಸದನ ನಿರ್ಲಜ್ಜತನ ಅಕ್ಷಮ್ಯ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಇಂದು ಅನೇಕ ಹೋರಾಟಗಾರರು ಬಂದು ನಾವಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ. ಆದ್ದರಿಂದ ಸಂತ್ರಸ್ತೆಯರು ಧೈರ್ಯವಾಗಿ ಪ್ರಕರಣವನ್ನು ಎದುರಿಸಿ ಎಂದು ಸಂತ್ರಸ್ತೆಯರಿಗೆ ಧೈರ್ಯ ತುಂಬಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ : “ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...