ಹಾಸನ | ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ; ಮಾ.15ರಿಂದ ಏಕಮುಖ ಸಂಚಾರ

Date:

ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್‌ 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಹಾಸನ ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್‌ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಜಿಲ್ಲಾಡಳಿತ ಮಾರ್ಚ್‌ 15ರಿಂದ ಏಪ್ರಿಲ್ ಅಂತ್ಯದವರೆಗೆ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಬದಲು ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.

ಗುಂಡ್ಯದಿಂದ ಸಕಲೇಶಪುರಕ್ಕೆ 40 ಕಿಮೀ ಇದ್ದು, ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗೂ ರಸ್ತೆ ಕಾಮಗಾರಿ ಮುಗಿದಿದೆ. ಮಾರನಹಳ್ಳಿ, ದೊಡ್ಡತಪ್ಪಲು, ದೋಣಿಗಲ್‌ ಗ್ರಾಮದವರೆಗೂ ಅಲ್ಲಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಚತುಷ್ಪಥ ಕಾಂಕ್ರಿಟ್‌ ರಸ್ತೆ ನಿರ್ಮಾಣ ಸಂಬಂಧ ಈವರೆಗೆ 4.8 ಕಿಮೀ ರಸ್ತೆ ಕಾಮಗಾರಿ ಮುಗಿದಿದ್ದು, ದೊಡ್ಡತಪ್ಪಲು ಗ್ರಾಮದ ಬಳಿ ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆಗೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್‌ಎಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು

ಸಕಲೇಶಪುರ-ಶಿರಾಡಿ ಮಾರ್ಗದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ರಸ್ತೆ ಬಂದ್‌ ಮಾಡಿದರೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ, ವಹಿವಾಟು ಸೇರಿದಂತೆ ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಬಂದ್‌ ಆಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...