ಹಾಸನ | ಕೋಟ್ಯಂತರ ರೂಪಾಯಿ ವಂಚನೆ: ಮಹಿಳೆಯನ್ನು ನಡುರಸ್ತೆಯಲ್ಲಿ ಎಳೆದಾಡಿದ ಸಂತ್ರಸ್ತೆಯರು

Date:

ಹಾಸನದ ಲೇಡೀಸ್ ಡ್ರೆಸ್ ಟೈಲರ್ ಹೇಮಾವತಿ ವಿರುದ್ಧ ಮಹಿಳೆಯರ ನಂಬಿಕೆಯನ್ನು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಹಿಳೆಯರೆಲ್ಲ ಒಗ್ಗೂಡಿ ವಂಚಕಿ ಹೇಮಾವತಿಯನ್ನು ನಡುರಸ್ತೆಯಲ್ಲಿ ಹಿಡಿದು ಎಳೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಿಗ್ಗಾಮುಗ್ಗಾ ಥಳಿಸಿರುವ ಸಂತ್ರಸ್ತ ಮಹಿಳೆಯರ ವಿರುದ್ಧವೇ ಆರೋಪಿ ಟೈಲರ್ ದೂರು ದಾಖಲಿಸಿದ್ದು, ಸತ್ಯಾಂಶ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೇಮಾವತಿ ಎಂಬಾಕೆ ಹಾಸನದ ಅರಳಿಪೇಟೆ ರಸ್ತೆಯಲ್ಲಿದ್ದ ಜ್ಯೋತಿ ಡ್ರೆಸ್ ಮೇಕರ್ಸ್ ಅಂಗಡಿ ನಡೆಸುತ್ತಿದ್ದು, ಇದೀಗ ಟೈಲರಿಂಗ್ ಕೆಲಸದ ಹೆಸರಿನಲ್ಲಿ ಹಾಗೂ ವೈಯಕ್ತಿಕ ಪರಿಚಯದ ಆಧಾರದಲ್ಲಿ ಮಹಿಳೆಯರಿಂದ ಸಾಲ ಪಡೆದು 3 ಕೋಟಿ ರೂ.ಗಿಂತ ಅಧಿಕ ಹಣ ವಂಚನೆ ಮಾಡಿರುವುದಾಗಿ ಆರೋಪ ವ್ಯಕ್ತವಾಗಿದೆ.

ಹೇಮಾವತಿ ಅವರು ಡ್ರೆಸ್ ಸ್ಟಿಚಿಂಗ್ ಮಾಡಿಸಲು ಬರುತ್ತಿದ್ದ ಮಹಿಳೆಯರನ್ನೇ ತಮ್ಮ ಟಾರ್ಗೆಟ್ ಮಾಡಿದ್ದು, ಅವರ ಜತೆ ಬಣ್ಣಬಣ್ಣದ ಮಾತುಗಳನ್ನಾಡಿ ಒಬ್ಬೊಬ್ಬರಿಂದ ಲಕ್ಷಾಂತರ ರೂಪಾಯಿಯ ಸಾಲ ಪಡೆದು, ಹಣವನ್ನು ಮರಳಿ ಕೊಡದೆ ಮೋಸ ಮಾಡಿದ್ದಾರೆಂಬ ಆರೋಪ ಎದ್ದಿದೆ. ಕೆಲವರು ಚಿನ್ನಾಭರಣ ಅಡವಿಟ್ಟು ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೇಮಾವತಿ ತನ್ನ ಮಗಳನ್ನು ವಿದೇಶದಲ್ಲಿ ಎಂ ಎಸ್ ಓದಿಸಬೇಕೆಂದು ಹಾಗೂ ಕೋಟಿ ರೂಪಾಯಿಯ ಮನೆ ಖರೀದಿಸಿದ್ದೇನೆಂದು ಹೇಳಿ ಹಣ ಕೇಳುತ್ತಿದ್ದಳು. ಅಲ್ಲದೆ ತಾನು ಕೊಡಚಾದ್ರಿ ಚಿಟ್ಸ್​ನಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಚೀಟಿ ಹಾಕಿದ್ದು, ಇದರಿಂದ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟು ಹಣ ಬರಲಿದೆ ಎಂದು ಹೇಳಿ ನಕಲಿ ಸ್ಲಿಪ್ ತೋರಿಸಿ ಪರಿಚಯದ ಮಹಿಳೆಯರ ಬಳಿ ಸಾಲ ಕೇಳುತ್ತಿದ್ದಳು. ಹೇಮಾವತಿಯ ಮಾತಿಗೆ ಮರುಳಾಗಿದ್ದ ಮಹಿಳೆಯರು ತಮ್ಮ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಹಣವನ್ನು ಆಕೆಗೆ ನೀಡಿದ್ದರು. ಹತ್ತಾರು ವರ್ಷಗಳಿಂದ ಡ್ರೆಸ್ ಶಾಪ್ ನಡೆಸುತ್ತಿದ್ದ ಹೇಮಾವತಿಯು ತನ್ನ ನಿತ್ಯ ಗ್ರಾಹಕರನ್ನೇ ಗುರಿಯಾಗಿಸಿಕೊಂಡು, ಅವರಿಂದ 45 ಲಕ್ಷ ರೂಪಾಯಿವರೆಗೂ ಹಣ ಪಡೆದು ವಂಚನೆ ಮಾಡಿದ್ದಾಳೆ” ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಸನ ನಗರ ಠಾಣೆ, ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹತ್ತಾರು ಮಹಿಳೆಯರು ಮೋಸ ಹೋಗಿರುವುದಾಗಿ ದೂರು ನೀಡಿದ್ದಾರೆ. ಒಟ್ಟು 3 ಕೋಟಿ ರೂ.ಗೂ ಹೆಚ್ಚು ವಂಚನೆಯಾಗಿದೆ. ಇತ್ತೀಚೆಗೆ ಸುದ್ದಿ ಬೆಳಕಿಗೆ ಬಂದ ನಂತರ, ನೊಂದ ಮಹಿಳೆಯರು ಹೇಮಾವತಿ ಅವರ ಟೈಲರಿಂಗ್ ಶಾಪ್‌ಗೆ ನುಗ್ಗಿ ಆಕ್ರೋಶ ಹೊರಹಾಕಿ, ನಡುರಸ್ತೆಯಲ್ಲಿ ಅವರನ್ನು ಹಿಡಿದು ಎಳೆದಾಡಿ, ಕೈಯಲ್ಲಿ ಹೊಡೆದು, ತಲೆ ಜುಟ್ಟು ಹಿಡಿದು ಹಲ್ಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಗುಡ್ಡಗಾಡು ಓಟ ಸ್ಪರ್ಧೆ ಪ್ರಥಮ ಸ್ಥಾನ ಪಡೆದ ಗುಬ್ಬಿ ಪ್ರತಿಭೆ ಜಿ.ಕವನ ಯಾದವ್

“ನಾವು ನಂಬಿಕೆಯಿಂದ ಹಣ ಕೊಟ್ಟಿದ್ದೇವೆ. ಆದರೆ ಒಂದು ರೂಪಾಯಿಯೂ ಮರಳಿ ಬಂದಿಲ್ಲ. ಇಂತಹ ವಂಚನೆಗಾರರನ್ನು ತಡೆಯಬೇಕು” ಎಂದು ಆಕ್ರೋಶ ಹೊರಹಾಕಿರುವ ಮಹಿಳೆಯರು ಈಗ ಹಣವನ್ನು ಮರಳಿ ಪಡೆಯಲು ಪರಿತಪಿಸುತ್ತಿದ್ದಾರೆ.

“ಸಂತ್ರಸ್ತ ಮಹಿಳೆಯರು ಹೇಮಾವತಿ ವಿರುದ್ಧ ಹಾಸನ ನಗರ ಠಾಣೆ ಮತ್ತು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಂಚನೆ, ಧಮಕಿ ಮತ್ತು ಇತರ ರಾಜ್ಯ ಸಂಹಿತೆಗಳಡಿ ಕೇಸ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಹೇಮಾವತಿ ಅವರು ಈಗ ತಮ್ಮ ಮನೆ ಖಾಲಿ ಮಾಡಿಕೊಂಡು ತಪ್ಪಿಸಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...