ಹಾಸನ l ಸಚಿವ ರಾಜಣ್ಣ ವಿರುದ್ಧ ಅವಹೇಳನ; ವಕೀಲ ದೇವರಾಜೇಗೌಡ ಮಾತಿಗೆ ಕಾಂಗ್ರೆಸ್ ಮುಖಂಡರ ಖಂಡನೆ

Date:

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಅವಹೇಳನ ಹೇಳಿಕೆ ನೀಡಿರುವು ವಕೀಲ ದೇವರಾಜೇಗೌಡನ ವಿರುದ್ಧ ಹಾಸನ ಜಿಲ್ಲಾ ಕಾಂಗ್ರೆಸ್‌ ಘಟಕದ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.

ಹಾಸನ ನಗರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಚಂದ್ರಶೇಖರ್, “ಹಾಸನಾಂಬ ಜಾತ್ರಾ ಮಹೋತ್ಸವ ಅದ್ಧೂರಿಯಿಂದ ಉತ್ತಮ ರೀತಿಯಲ್ಲಿ ನಡೆದಿದೆ. ಕಳೆದ ಬಾರಿಗಿಂತ ಆರು ಲಕ್ಷಕ್ಕೂ ಹೆಚ್ಚು ಮಂದಿ ಈ ವರ್ಷ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬದ್ಧತೆ ಇಲ್ಲದ, ಜಾಮೀನಿನ ಮೇಲೆ ಹೊರ ಬಂದಿರುವ ವಕೀಲ ದೇವರಾಜೇಗೌಡ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ದೇವರಾಜೇಗೌಡನ ಮಾತಿನಲ್ಲಿ ಹಿಡಿತವಿಲ್ಲ ಹಾಗೂ ಸತ್ಯಾಂಶವಿಲ್ಲ” ಎಂದು ತಿಳಿಸಿದರು.

“ಹಾಸನಾಂಬ ಉತ್ಸವದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಯಾವುದೇ ಲೋಪವಾಗಿದ್ದರೆ ಕಾನೂನಾತ್ಮಕವಾಗಿ ಪ್ರಶ್ನಿಸಬೇಕು. ಅದನ್ನು ಬಿಟ್ಟು ಮಸಿ ಬಳಿಯುವುದಾಗಿ ಉಡಾಫೆಯಾಗಿ ಮಾತನಾಡುವುದು ಸರಿಯಲ್ಲ. ಅವರಿಗೆ ತಾಕತ್ತಿದ್ದರೆ ಮಸಿ ಬಳಿಯಲಿ. ನಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ದೇವರಾಜೇಗೌಡನಿಗೆ ತಕ್ಕ ಉತ್ತರವನ್ನು ನೀಡಲಿದ್ದೇವೆ” ಎಂದು ಕಾಂಗ್ರೆಸ್ ಮುಖಂಡ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶೇಷ ಪಾಸ್‌ಗಳನ್ನು ಎಲ್ಲ ಜನಪ್ರತಿನಿಧಿಗಳಿಗೂ ನೀಡಲಾಗಿದೆ. ದೇವರಾಜೇಗೌಡ ಅವರೂ ಸಹ ಪಾಸುಗಳನ್ನು ಪಡೆದಿದ್ದಾರೆ. ಆದರೂ ಉಸ್ತುವಾರಿ ಸಚಿವರ ವಿರುದ್ಧ ಬೇಕಾಬಿಟ್ಟಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಕೇವಲ ಪ್ರಚಾರಕ್ಕೋಸ್ಕರ ದೇವರಾಜೇಗೌಡ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆಯೂ ಮಾಜಿ ಸಚಿವ ಎಚ್ ಡಿ ರೇವಣ್ಣ, ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧವೂ ಮಾತನಾಡಿದ್ದಾರೆ. ಅವರ ವರ್ತನೆ ಇದೇ ರೀತಿ ಮುಂದುವರೆದರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಕೈಗೊಳ್ಳುತ್ತೇವೆ” ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಜ. 1ರಿಂದ ಮಾ. 31 ವರೆಗೆ ರಾಗಿ,ಭತ್ತ, ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಸತ್ಯಭಾಮ

ಈ ವೇಳೆ ಎಚ್ ಆರ್ ವಿನೋದ್ ಕುಮಾರ್, ಅಸ್ಲಾಂ, ರಾಮೇಗೌಡ, ಪ್ರಕಾಶ್‌ ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...