ಹಾಸನ | ಬಸ್‌ ಹತ್ತಿಸದ ಕಂಡಕ್ಟರ್‌; ನಡು ರಸ್ತೆಯಲ್ಲೇ ವೃದ್ಧನ ಏಕಾಂಗಿ ಧರಣಿ

Date:

  • ಸಕಲೇಶಪುರದಿಂದ ಆಲೂರಿಗೆ ಹೋಗಬೇಕಿದ್ದ ವೃದ್ಧ
  • ಧರ್ಮಸ್ಥಳದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್‌

ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಕಂಡಕ್ಟರ್‌ ಅವಕಾಶ ನೀಡಲಿಲ್ಲ ಎಂದು ಆಕ್ರೋಶಗೊಂಡ ವೃದ್ಧರೊಬ್ಬರು ನಡು ರಸ್ತೆಯಲ್ಲಿಯೇ ಬಸ್‌ ಎದುರು ಏಕಾಂಗಿಯಾಗಿ ಧರಣಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಸೋಮವಾರ ನಡೆದಿದೆ.

ಕುಂದಾಪುರ ವಿಭಾಗದ ಕೆಎಸ್‌ಆರ್‌ಟಿಸಿ ಬಸ್‌ ಧರ್ಮಸ್ಥಳದಿಂದ ಸಕಲೇಶಪುರ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿತ್ತು. ಸಕಲೇಶಪುರ ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿ ಬಸ್‌ ನಿಲ್ಲಿಸಿದ್ದ ವೇಳೆ, ವೃದ್ಧ ಬಸ್‌ ಹತ್ತಲು ಮುಂದಾಗಿದ್ದಾರೆ. ವೃದ್ಧನನ್ನು ತಡೆದ ಕಂಡಕ್ಟರ್‌ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ತಾನು ಆಲೂರಿಗೆ ಹೋಗಬೇಕೆಂದು ತಿಳಿಸಿ ವೃದ್ಧ ಬಸ್‌ ಹತ್ತಲು ಹೋದಾಗ ಕಂಡಕ್ಟರ್‌ ಉಡಾಫೆಯಿಂದ ವರ್ತಿಸಿ, ಬಸ್‌ನಲ್ಲಿ ಸೀಟ್‌ ಖಾಲಿ ಇಲ್ಲವೆಂದು ವೃದ್ಧನನ್ನು ಬಸ್‌ ಹತ್ತಲು ಬಿಡದೆ ಕೆಳಗಿಳಿಸಿದ್ದಾರೆ.

ಇದರಿಂದ ಕೋಪಗೊಂಡ್ಡ ವೃದ್ಧ ಬಸ್‌ ಎದುರು ರಸ್ತೆಯಲ್ಲಿಯೇ ಏಕಾಂಗಿಯಾಗಿ ಧರಣಿ ಕುಳಿತು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಅಲ್ಲಿದ್ದ ನಾಗರಿಕರು ವೃದ್ಧನ ಮನವೊಲಿಸಿ ಅದೇ ಬಸ್‌ ಹತ್ತಿಸಿ ಆಲೂರಿಗೆ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಆಕಸ್ಮಿಕ ಬೆಂಕಿ; ನೂರಾರು ಎಕೆರೆ ಕಾಫಿ ತೋಟ ಬೆಂಕಿಗಾಹುತಿ

ಬೆಂಗಳೂರು – ಮಂಗಳೂರು ನಡುವೆ ಸಂಚರಿಸುವ ಬಹುತೇಕ ಸರ್ಕಾರಿ ಬಸ್‌ಗಳಲ್ಲಿ ಕಂಡಕ್ಟರ್‌ಗಳು ಬಸ್‌ ಪಾಸ್‌ ಹೊಂದಿರುವ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಪ್ರಯಾಣಿಕರಿಗೆ ಬಸ್‌ ಹತ್ತಲು ಅವಕಾಶ ನೀಡುವುದಿಲ್ಲ. ಸ್ಥಳೀಯರನ್ನು ಬಸ್‌ ಹತ್ತಿಸಿಕೊಂಡರೆ ದೂರದ ಪ್ರಯಾಣಿಕರು ಸಿಗುವುದಿಲ್ಲ ಎಂಬ ಉದ್ದೇಶದಿಂದ ಹೀಗೆ ಸ್ಥಳೀಯ ಪ್ರಯಾಣಿಕರನ್ನು ನಿರ್ಲಕ್ಷ್ಯ ಮಾಡಲಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...