ಹಾಸನ | ಪೈಶಾಚಿಕ ಕೃತ್ಯ; ಕರುವಿನ ಮೇಲೆ ಮಾರಣಾಂತಿಕ ಹಲ್ಲೆ 

Date:

ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಪ್ರತಿದಿನ ಎಂದಿನಂತೆ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ರಾತ್ರಿ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಕಾಲ್ಕಿತ್ತಿದ್ದಾರೆ. ಹಲ್ಲೆಗೊಳಗಾದ ಕರು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಕರುವಿಗೆ ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇತ್ತೀಚೆಗೆ ಗೋವುಗಳ ಮೇಲಿನ ದಾಳಿಗಳು ಹೆಚ್ಚುತ್ತಿದ್ದು, ಈ ಪ್ರಕರಣವೂ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಗ್ರಾಮದಲ್ಲಿ ಈ ಪ್ರಕರಣ ಪುನರಾವರ್ತನೆಯಾಗಿದೆ. ಈಗಾಗಲೇ ನಡೆದಿರುವ ಕೆಲವು ಪ್ರಕರಣಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಕರುವಿನ ಮೇಲಿನ ದಾಳಿಗೆ ಕಾರಣವಾಗಿದೆ. ಕೂಡಲೇ ಇಲಾಖೆ ಎಚ್ಚೆತ್ತು ಇಂತಹ ಕೃತ್ಯ ಎಸಗುವ ದುರುಳನ್ನು ಪತ್ತೆ ಹಚ್ಚಿ ಗಂಭೀರ ಶಿಕ್ಷೆಗೆ ಒಳಪಡಿಸಬೇಕು. ಈ ರೀತಿಯ ಪೈಶಾಚಿಕ ಕೃತ್ಯಗಳು ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ; ಸಾರ್ವಜನಿಕರಲ್ಲಿ ಆತಂಕ

ಘಟನೆ ಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...