ಹಾಸನ | ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆ, ಹಸು ಸಾವು ಪ್ರಕರಣ; ಎಇಇ ಅಮಾನತು

Date:

  • ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕ
  • ಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು

ವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಚಂದ್ರಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ಗಂಗಮ್ಮ ಎಂಬುವವರು ಹಸು ಮೇಯಿಸಿಕೊಂಡು ಹಿಂತಿರುಗುತ್ತಿದ್ದಾಗ ಕೆಳಗೆ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ತುಳಿದ ಕಾರಣ ಹಸು ಮತ್ತು ಗಂಗಮ್ಮ ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆ ರೈತ ಸಂಘ ಮತ್ತು ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

“ಹಿಂದೆಯೂ ಇದೇ ರೀತಿ ಘಟನೆ ನಡೆದಿದ್ದು, ವಿದ್ಯುತ್ ವಾಹಕವನ್ನು ಬದಲಾವಣೆ ಮಾಡುವ ಬಗ್ಗೆ ಒಂದು ವರ್ಷದಿಂದ ತಿಳಿಸಿದರೂ, ಕ್ಯಾಂಪ್‌ ಮಾರ್ಗದಾಳು, ಶಾಖಾಧಿಕಾರಿ, ಉಪವಿಭಾಗಾಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ರೈತ ಸಂಘದ ಮುಖಂಡ ಬಳ್ಳೂರು ಸ್ವಾಮಿಗೌಡ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಸಂಜೆಯಿಂದ ಘಟನಾ ಸ್ಥಳದಲ್ಲೇ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಕೂಡಲೇ ಎಇಇ ಅಮಾನತುಗೊಳಿಸಿ ಎಂದು ಪಟ್ಟು ಹಿಡಿದಿದ್ದರು. ಪ್ರತಿಭಟನಾಕಾರರ ಒತ್ತಾಯ ಪರಿಗಣಿಸಿ ಅಧಿಕಾರಿ ಚಂದ್ರಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಪ್ರತಿಭಟನಾಕಾರರು ಎಇಇ ಚಂದ್ರಮ್ಮ ಅವರ ಅಮಾನತು ಆದೇಶದ ಬಳಿಕ ಮೃತದೇಹ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಈ ಸುದ್ದಿ ಓದಿದ್ದೀರಾ? ಜೈನ ಮುನಿ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಡಿ ಕೆ ಶಿವಕುಮಾರ್‌ ಭರವಸೆ

5 ಲಕ್ಷ ರೂಪಾಯಿ ಪರಿಹಾರ

ಬೇಲೂರು ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ಅವರು ಮೃತರ ಕುಟುಂಬಕ್ಕೆ ಸೆಸ್ಕ್‌ನಿಂದ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಮಾರ್ಗದಾಳುಗಳಿಗೂ ನೋಟಿಸ್ ನೀಡಲು ಸೆಸ್ಕ್ ಮುಖ್ಯ ಎಂಜಿನಿಯರ್ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...