ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ.
ಹಾಸನದ ನಾಗತವಳ್ಳಿ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ರೇವಣ್ಣ ಅವರ ಆಪ್ತ, ಶ್ರೀರಾಮ ಮಾರ್ಬಲ್ಸ್ ಮಾಲೀಕ ಕೃಷ್ಣೇಗೌಡ ಹತ್ಯೆಗೀಡಾಗಿದ್ದಾರೆ.
ಕೃಷ್ಣೇಗೌಡರ ಗ್ರಾನೈಟ್ ಫ್ಯಾಕ್ಡರಿಯ ಎದುರೇ ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




