ಹಾಸನ | ಕೌಟುಂಬಿಕ ಕಲಹ; ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ

Date:

ಕೌಟುಂಬಿಕ ಕಲಹದಿಂದ ಬೇಸತ್ತಿದ್ದು, ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಇಂದಿರಾನಗರದ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಮೋದ್‌ ಹಾಗೂ ಅವರ ಪತ್ನಿ ನಡುವೆ ಪದೇ ಪದೆ ಜಗಳವಾಗುತ್ತಿತ್ತು. ಆಕೆಯ ತಮ್ಮಂದಿರು ಅವರಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಮೋದ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಡಿಸೆಂಬರ್ 29ರ ಸಂಜೆ ಪ್ರಮೋದ್ ತನ್ನ ಮೊಬೈಲ್ ಮನೆಯಲ್ಲಿಯೇ ಬಿಟ್ಟು ತೆರಳಿದ್ದರು. ಪ್ರಮೋದ್‌ಗಾಗಿ ಪೋಷಕರು ಹುಡುಕಾಟ ನಡೆಸಿದ್ದು, ನಂತರ ಕೆ ಆರ್ ಪುರಂ ಪೊಲೀಸ್ ಠಾಣೆಗೆ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಅಂದು ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಅದನ್ನು ಕಂಡ ಸ್ಥಳೀಯರು ಪರಿಶೀಲನೆ ನಡೆಸಿದ ವೇಳೆ ಬೈಕ್‌ನಲ್ಲಿ ಬ್ಯಾಂಕ್‌ನ ಪಾಸ್‌ಬುಕ್‌ಗಳಲ್ಲಿ ಕಂಡ ಫೋನ್ ನಂಬರ್‌ಗೆ ಕರೆ ಮಾಡಿದ್ದರು. ಆ ವೇಳೆ ಪ್ರಮೋದ್ ತಂದೆ ಕರೆ ಸ್ವೀಕರಿಸಿದಾಗ ಸ್ಥಳೀಯರು, ನದಿಯ ಬಳಿ ದ್ವಿಚಕ್ರ ವಾಹನ ನಿಂತಿರುವ ಬಗ್ಗೆ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಹೊಸವರ್ಷದ ಸಂಭ್ರಮ; ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ

ಡಿಸೆಂಬರ್ 30ರಿಂದ ಹೇಮಾವತಿ ನದಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಬುಧವಾರ ಬೆಳಿಗ್ಗೆ ಪ್ರಮೋದ್ ಶವ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...