ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

Date:

ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, “ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು” ಎಂದು ವ್ಯಂಗ್ಯವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು ನನಗೆ ಅನ್ವಯವಾಗುವುದಿಲ್ಲವೆಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆಗೆ ಶಾಸಕ ರೇವಣ್ಣ ಸ್ಪಷ್ಟಪಡಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಆಯುರ್ವೇದ ಮನುಷ್ಯನ ಆರೋಗ್ಯಕ್ಕೆ ವರದಾನ; ಶಾಸಕ ಸ್ವರೂಪ್ ಪ್ರಕಾಶ್

“ಸ್ವಾಮೀಜಿಗಳು ಹೇಳಿದ್ದು ಸತ್ಯ. ಈ ಜಿಲ್ಲೆಯಲ್ಲಿಯೂ ಕೆಲವರು ನಂಬಿಕೆ ದ್ರೋಹ ಮಾಡಿದ್ದಾರೆ. ಕೆಲ ಸಂದರ್ಭಗಳಲ್ಲಿ ಕುಮಾರಣ್ಣ ಒಳ್ಳೆಯವರನ್ನೇ ನಂಬುವುದಿಲ್ಲ. ಏನು ಮಾಡುತ್ತಾರೆ, ನಂಬಿಸಿ ಬಿಡುತ್ತಾರೆ” ಎಂದು ಅಸಮಾಧಾನ ಹೊರಹಾಕಿದರು. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅನ್ನು ಮುಗಿಸಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದೆ ಎಂದು ಆರೋಪಿಸಿದ ರೇವಣ್ಣ,”ನಿನ್ನೆ ಅರಸೀಕೆರೆಯಿಂದ ನಾನು ಹೋರಾಟ ಆರಂಭಿಸಿದ್ದೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ರಾಜ್ಯದ 31 ಜಿಲ್ಲೆಗಳಲ್ಲಿ ಸಭೆ ಮಾಡಿಲ್ಲ, ಆದರೆ ದೇವೇಗೌಡರ ಶಕ್ತಿ ಕುಂದಿಸಲು ಹಾಸನದಲ್ಲಿ ಮಾತ್ರ ಎರಡು ಸಭೆ ನಡೆಸಿದೆ ಎಂದು ಶಾಸಕ ರೇವಣ್ಣ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...