ಹಾಸನ | ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ; ₹50 ಲಕ್ಷ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ

Date:

ಆನೆ ಅರ್ಜುನನ ಸಮಾಧಿ ಚಿರಸ್ಮಾಯಿಯಾಗಿ ಉಳಿಯುವಂತೆ ಸಮಾಧಿ ಸ್ಥಳದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆವೇರಿಸಿದರು.

ಅಂಬಾರಿ ಹೊರುತಿದ್ದ ಆನೆಯಾದ ಅರ್ಜುನ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯ ವಲಯದ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿ ಕಾಡಾನೆ ಜೊತೆ ಸೆಣಸಾಡಿ ಡಿಸೆಂಬರ್ 4 ರಂದು ಮೃತಪಟ್ಟಿತ್ತು.

ವೀರಾವೇಶದಿಂದ ಹೋರಾಡಿ ಅರ್ಜುನ ವೀರಮರಣ ಹೊಂದಿದ್ದ ಸ್ಥಳದಲ್ಲೇ ಅರ್ಜುನನ ಸಮಾಧಿ ಮತ್ತು ಸ್ಮಾರಕ ನಿರ್ಮಾಣ ಮಾಡುವಂತೆ ಅರ್ಜುನನ ಅಭಿಮಾನಿಗಳು ಸೇರಿದಂತೆ ಬಹುತೇಕರು ಒತ್ತಾಯ ಮಾಡಿದ್ದರಿಂದ ಇದೀಗ ₹50 ಲಕ್ಷ ವೆಚ್ಚದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ರಾಜ್ಯ ಮಾತ್ರವಲ್ಲದೆ ದೇಶದ ವಿವಿಧೆಡೆಯೂ ಆನೆ, ಹುಲಿ ಮತ್ತು ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಅರ್ಜುನ ಪಾಲ್ಗೊಂಡ ಚಿತ್ರಗಳನ್ನೂ ಪ್ರದರ್ಶನ ಮಾಡುವ ಮೂಲಕ ಜನಮಾನಸದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲು ಸರ್ಕಾರ ನಿರ್ಧರಿಸಿದೆ.

ಸ್ಮಾರಕ ನಿರ್ಮಾಣ ಕಾಮಗಾರಿಯನ್ನು 6 ತಿಂಗಳ ಒಳಗಾಗಿ ಅಂದರೆ ಅರ್ಜುನನ ಮೊದಲ ವರ್ಷದ ಪುಣ್ಯತಿಥಿ ಡಿಸೆಂಬರ್‌ 4ರೊಳಗೆ ಪೂರ್ಣಗೊಳಿಸುವಂತೆ ಅರಣ್ಯ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿವೇಕವಿಲ್ಲದ ನಡಿಗೆಗೆ ಪರಂಪರೆಯ ಸ್ಪರ್ಶವಾಗಬೇಕಿದೆ: ಗೊಲ್ಲಹಳ್ಳಿ ಶಿವಪ್ರಸಾದ್ ‌

ಸಚಿವ ಈಶ್ವರ್ ಖಂಡ್ರೆ, ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ, ಜಿಪಂ ಸಿಇಒ ಪೂರ್ಣಿಮಾ, ಸಿಸಿಎಫ್ ರವಿಶಂಕರ್, ಡಿಸಿಎಫ್ ಸೌರಭ್ ಕುಮಾರ್ ಸೇರಿದಂತೆ ಬಹುತೇಕರು ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...