ಹಾಸನ | ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವು; ಪೋಷಕರ ಆಕ್ರಂದನ

Date:

ವಿದ್ಯುತ್ ಸ್ಪರ್ಶದಿಂದ ಬಾಲಕಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಎಲ್ಲೆಡೆ ಮಳೆಯಾಗುತ್ತಿದ್ದು, ಅಪಾರ ಹಾನಿಯಾಗುತ್ತಿದೆ. ಮಳೆ, ಗಾಳಿ ಹೆಚ್ಚಾಗಿ ಜಾನುವಾರಗಳು ಮನೆ ಕಟ್ಟಡಗಳು ದುಃಸ್ತಿತಿಯಲ್ಲಿವೆ. ಬಹುತೇಕ ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿ ಗಿಡ ಮರಗಳಿಗೆ ತಗುಲಿ ಹಲವು ಕಡೆ ವಿದ್ಯುತ್ ಸ್ಪರ್ಶವಾಗುತ್ತಿದೆ.

ಅರಸೀಕೆರೆ ತಾಲೂಕಿನ ಕಾಮಸಮುದ್ರ ಗ್ರಾಮ ಪಂಚಾಯಿತಿ ಪಡುವನಹಳ್ಳಿ ಭೋವಿ ಕಾಲೋನಿಯಲ್ಲಿ ಶೇಖರ್ ಹಾಗೂ ಕರಿಯಮ್ಮ ದಂಪತಿಯ ಮಗಳು ತನುಜಾ(15) ಗುರುವಾರ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಮುಖಂಡ ಶಿವಣ್ಣ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶುಂಠಿ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ಮಗಳನ್ನು ನೋಡಬೇಕೆಂದು ಶಾಲೆಗೆ ರಜೆ ಮಾಡಿಸಿ, ಶುಂಠಿ ಜಮೀನಿನ ಬಳಿ ಕರೆಸಿಕೊಂಡಿದ್ದರು. ನೆನ್ನೆ ಸಂಜೆ 5:30ರ ಸಮಯದಲ್ಲಿ ಮಳೆ ಸುರಿಯುತ್ತಿರುವುದರಿಂದ ತೆಂಗಿನಮರದ ಬುಡದಲ್ಲಿ ತನುಜಾ ನಿಂತಿದ್ದಳು. ಮರ ಹಸಿಯಾಗಿದ್ದರಿಂದ ವಿದ್ಯುತ್ ತಂತಿ ಮರಕ್ಕೆ ತಗುಲಿದ್ದರಿಂದ ಪಕ್ಕದಲ್ಲಿದ್ದ ತನುಜಾಳಿಗೆ ವಿದ್ಯುತ್ ಸ್ಪರ್ಶಿಸಿ ಮೃತ ಪಟ್ಟಿದ್ದಾಳೆ. ಅಲ್ಲಿದ್ದ ಜನರು ಹಾಗೂ ಪೋಷಕರು ಕೂಡಲೇ ತಿಪಟೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಗಳ ಪ್ರಾಣ ಉಳಿಬಹುದೆಂದು ವೈದ್ಯರು ಪರೀಕ್ಷಿಸಿದ್ದಾರೆ. ಆದರೆ, ಅಷ್ಟರಲ್ಲೇ ತನುಜಾಳ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಿಢೀರ್ ಕುಸಿದ ಶಾಲೆಯ ಮೇಲ್ಛಾವಣಿ; ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

“ಕೂಲಿ ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದ ದಂಪತಿ ಮಗಳಿಗೆ ವಿದ್ಯಾಭ್ಯಾಸ ಕೊಡಿಸಿ ವಿದ್ಯಾವಂತಾಳಾಗಿ ಮಾಡಬೇಕೆಂದು ಆಸೆಪಟ್ಟಿದ್ದ ಪೋಷಕರು ಇದೀಗ ಮಗಳನ್ನು ಕಳೆದುಕೊಂಡು ಗೋಳಾಡುತ್ತಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಗೂ ಪಡುವನಹಳ್ಳಿ ಭೋವಿ ಕಾಲೊನಿ ಜನರು ಹದಿಹರೆಯದ ತನುಜಾಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಸಂಬಂದ ಪಟ್ಟ ಅಧಿಕಾರಿಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ತನುಜಾಳ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...