ಹಾಸನ l ಪಿಡಿಒ ರಘುನಾಥ್‌ ವಿರುದ್ಧ ಗೋಣಿಸೋಮನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Date:

ಪಿಡಿಒ ರಘುನಾಥ್‌ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, “‌ಗ್ರಾಮಠಾಣಾ ಜಾಗಕ್ಕೆ ಸೇರಿದ ಸುಮಾರು 12 ಅಡಿ ಜಾಗದಲ್ಲಿ ರಸ್ತೆಗೆ ಜಾಗ ಬಿಡಿಸಿಕೊಡುವಂತೆ ಬೇಲೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ಮೌಖಿಕವಾಗಿ ಸ್ಥಳದಲ್ಲಿ ಪಿಡಿಒ ರಘುನಾಥ್ ಅವರಿಗೆ ಆದೇಶ ನೀಡಿದರೂ ರಸ್ತೆ ಬಿಡಿಸಿಕೊಡುವಲ್ಲಿ ವಿಫಲರಾಗಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ಅನಾಧಿಕಾಲದಿಂದಲೂ ಮನೆಕಟ್ಟಿಕೊಂಡು 12 ಅಡಿ ಖಾಲಿ ನಿವೇಶನದಲ್ಲಿ ತಿರುಗಾಡಿಕೊಂಡು ಬಂದಿದ್ದೇವೆ. ಆದರೆ ನಮ್ಮ ಗ್ರಾಮದ ಮೊಗಣ್ಣೆಗೌಡ ಮತ್ತು ಇತರರು ಈ ಜಾಗದಲ್ಲಿ ನಮ್ಮ ಕುಟುಂಬಕ್ಕೆ ತಿರುಗಾಡದಂತೆ ತೊಂದರೆ ಕೊಡುತ್ತಿದ್ದಾರೆ. ಅನೇಕ ಬಾರಿ ಪಿಡಿಒ ಅವರಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ” ಎಂದು ಗ್ರಾಮದ ಜಯಕುಮಾರ್ ಆಕ್ರೋಶಾ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮನೆಯ ಹೆಣ್ಣುಮಕ್ಕಳು, ವೃದ್ಧರು, ದವಸ ಧಾನ್ಯ, ನೀರು ತರಲು ತುಂಬಾ ತೊಂದರೆಯಾಗುತ್ತಿದೆ. ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಸಚಿವ ರಾಜಣ್ಣ ವಿರುದ್ಧ ಅವಹೇಳನ; ವಕೀಲ ದೇವರಾಜೇಗೌಡ ಮಾತಿಗೆ ಕಾಂಗ್ರೆಸ್ ಮುಖಂಡರ ಖಂಡನೆ

“ನಮ್ಮ ಕಷ್ಟವನ್ನು ಮನಗಂಡು ಜಿಲ್ಲಾಧಿಕಾರಿಗಳು ನ್ಯಾಯ ಕೊಡಿಸಬೇಕು” ಎಂದಿ ಮನವಿ ಮಾಡಿದರು.

ಈ ವೇಳೆ ನೊಂದ ಕುಟುಂಬಸ್ಥರು, ಗ್ರಾಮ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...