ಹಾಸನ | ನ್ಯಾಯ ಒದಗಿಸುವಂತೆ ಗೂಡ್ಸ್‌ ಆಟೊ ಚಾಲಕರ ಆಗ್ರಹ

Date:

ಪ್ಯಾಸೆಂಜರ್ ಆಟೊದವರು ಪ್ರಯಾಣಿಕರ ಜತೆಗೆ ಸರಕು(ಲಗೇಜ್‌)ಗಳನ್ನೂ ತುಂಬಿಕೊಂಡು ಬಾಡಿಗೆ ಹೊಡೆಯುತ್ತಿರುವುದರಿಂದ ಗೂಡ್ಸ್ ಆಟೊ ಚಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಗೂಡ್ಸ್‌ ಆಟೊ ಚಾಲಕರು ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

“ಹಾಸನ ತಾಲೂಕಿನ ಸುತ್ತಮುತ್ತಲಿನ ಚಾಲಕರು ಗೂಡ್ಸ್ ಆಟೊ ಓಡಿಸಿಕೊಂಡು ಜೀವನ ನಡೆಸುತ್ತಿದ್ದೇವೆ. ಹಾಸನ ನಗರದಲ್ಲಿ ಕೆಲವು ಪ್ಯಾಸೆಂಜ‌ರ್ ಆಟೊ ಓಡಿಸುತ್ತಿರುವ ಚಾಲಕರು, ಈ ಆಟೊಗಳಲ್ಲಿ ಅಕ್ರಮವಾಗಿ ಸರಕು ತುಂಬಿಕೊಂಡು ತಾಲೂಕು ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಬಾಡಿಗೆ ಮಾಡುತ್ತಿರುತ್ತಾರೆ. ಇದರಿಂದ ಗೂಡ್ಸ್ ಆಟೊ ಇಟ್ಟುಕೊಂಡಿರುವ ನಮಗೆ ತುಂಬಾ ನಷ್ಟ ಉಂಟಾಗಿದೆ” ಎಂದು ಗೂಡ್ಸ್ ವಾಹನ ಚಾಲಕ ವೇದಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

“ವಾಹನದ ಸಾಲದ ಕಂತುಗಳನ್ನು ಕಟ್ಟಲು, ಮನೆ ಬಾಡಿಗೆ ಕಟ್ಟಲು, ಇನ್ಷೂರೆನ್ಸ್ ಕಟ್ಟಲು ಹಾಗೂ ಜೀವನ ನಡೆಸಲು ತುಂಬಾ ಸಮಸ್ಯೆಯಾಗಿದೆ. ದಯಮಾಡಿ ಪ್ಯಾಸೆಂಜರ್ ಆಟೊದವರು ಈ ರೀತಿ ಅಕ್ರಮವಾಗಿ ಲಗೇಜ್‌ ತುಂಬಿಕೊಂಡು ಬಾಡಿಗೆ ಮಾಡುತ್ತಿರುವುದನ್ನು ತುರ್ತಾಗಿ ಮತ್ತು ಕಡ್ಡಾಯವಾಗಿ ನಿಲ್ಲಿಸಬೇಕು. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಪಿಡಿಒ ಹುದ್ದೆಗೆ ಪರೀಕ್ಷೆ; ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆ ಕತ್ತರಿಸಿದ ಅಧಿಕಾರಿಗಳು

ಈ ವೇಳೆ ಗೂಡ್ಸ್‌ ಆಟೊ ಚಾಲಕ ಪಾಂಡುರಂಗ, ಫಯಾಜ್, ಶಿವಣ್ಣ, ಪ್ರವೀಣ್, ಪರಮೇಶ್, ಅಶ್ವಿನ್, ಹರೀಶ್, ಧನಂಜಯ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...