ಹಾಸನ ಹಾಸನಾಂಬ ದೇವಾಲಯ: ಕರ್ತವ್ಯ ಲೋಪ ಆರೋಪದಲ್ಲಿ ನಾಲ್ವರು ಸರ್ಕಾರಿ ನೌಕರರ ಅಮಾನತು

Date:

ವರ್ಷಕ್ಕೆ ಒಮ್ಮೆ ಮಾತ್ರವೇ ಬಾಗಿಲು ತೆರೆಯುವ ಹಾಸನ ಹಾಸನಾಂಬ ದೇವಾಲಯದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ನಾಲ್ವರು ಸರ್ಕಾರಿ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಪ್ರವೇಶ ಕಾರ್ಡ್‌ ಸ್ಕ್ಯಾನ್‌ ಮಾಡದೇ ಭಕ್ತರಿಗೆ ಪ್ರವೇಶ ನೀಡಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ದೇವಾಲಯದ ಪ್ರವೇಶದಲ್ಲಿ ನೇರ ಪ್ರವೇಶ ಪಡೆಯುವವರಿಗೆ ಗೋಲ್ಡ್‌ ಪಾಸ್‌ ನೀಡಲಾಗಿದೆ. ಈ ಪಾಸ್‌ಗಳ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಆದಾಗ್ಯೂ, ಪಾಸ್‌ಗಳನ್ನು ಸ್ಕ್ಯಾನ್‌ ಮಾಡದೆಯೇ ಕೆಲವರಿಗೆ ಪ್ರವೇಶ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಗೋಲ್ಡ್ ಕಾರ್ಡ್​ ಕೌಂಟರ್​ನಲ್ಲಿ ಕುಳಿತಿದ್ದ ನಾಲ್ವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಸಿಬಂದಿಗಳಾದ ಗೋವಿಂದರಾಜ್, ಯೋಗಾನಂದ್, ವಿಎಗಳಾದ ಸಂತೋಷ್ ಅಂಬಿಗರ ಹಾಗೂ ಶಿರಾಜ್ ಮಹಿಮಾ ಪಟೇಲ್ ಎಂಬವರು ಅಮಾನತು ಮಾಡಿ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದರೂ, ಭಕ್ತರಿಗೆ ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದು ಗಂಭೀರ ಉಲ್ಲಂಘನೆಯಾಗಿದೆ. ಇದು ಸರ್ಕಾರಿ ಗುರುತಿನ ಚೀಟಿಯ ದುರುಪಯೋಗವೂ ಆಗಿದೆ. ಇಂತಹ ವರ್ತನೆ ಸರ್ಕಾರಿ ನೌಕರರಿಗೆ ಯೋಗ್ಯವಲ್ಲ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಇದಕ್ಕೂ ಮೊದಲು, ದೇವಾಲಯ ತೆರೆದ ಮೊದಲ ದಿನವೇ ಕರ್ತವ್ಯ ಐಡಿ ಕಾರ್ಡ್ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...