ಹಾಸನದಲ್ಲಿ ಭೀಕರ ದುರಂತ: ಗಣೇಶ ಮೆರವಣಿಗೆ ಮೇಲೆ ಹರಿದ ಲಾರಿ: 8 ಮಂದಿ ಮೃತ್ಯು

Date:

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಘಟನೆ ಕಾರಣನಾದ ಚಾಲಕ ಭುವನೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ.

ಶುಕ್ರವಾರ ರಾತ್ರಿ 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ. ರಾಷ್ಟ್ರೀಯ ಹೆದ್ದಾರಿ 373ರ ಒಂದು ಬದಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಹೋಗುವಾಗ ಡಿವೈಡರ್‌ ದಾಟಿ ಕ್ಯಾಂಟರ್‌ ಗಣೇಶ ಭಕ್ತರ ಮೇಲೆ ಯಮನಂತೆ ಎರಗಿದೆ. ಇದರಿಂದಾಗಿ 5 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವು ಕಂಡಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ನಿಧನರಾಗಿದ್ದಾರೆ. ಇಲ್ಲಿಯವರೆಗೂ 8 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

20ಕ್ಕೂ ಅಧಿಕ ಮಂದಿ ಗಾಯಾಳುವಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ. ಕೆಲವರ ಕೈಕಾಲುಗಳ ಮೇಲೆ ವಾಹನ ಹರಿದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೇರಿದಂತೆ ಮೊಬೈಲ್‌ಗಳಲ್ಲಿ ಸೆರೆಯಾದ ದೃಶ್ಯಗಳು ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಭಯಾನಕವಾಗಿದೆ.

ರಾಷ್ಟ್ರೀಯ ಹೆದ್ದಾರಿ 373ರ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಒಂದು ಕಡೆ ಮೆರವಣಿಗೆ ಸಾಗುತ್ತಿದ್ದರೆ, ಇನ್ನೊಂದೆಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ವೇಗದಲ್ಲಿ ಸಾಗುತ್ತಿದ್ದ ಕ್ಯಾಂಟರ್‌ ತನ್ನ ಎದುರಿಗೆ ಇದ್ದ ಬೈಕ್‌ಅನ್ನು ತಪ್ಪಿಸುವ ಭರದಲ್ಲಿ ಕ್ಯಾಂಟರ್‌ನ ದಿಕ್ಕನ್ನು ಬಲಕ್ಕೆ ತಿರುಗಿಸಿದ್ದಾನೆ. ವೇಗದಲ್ಲಿ ಇದ್ದ ಕಾರಣಕ್ಕೆ ಕ್ಯಾಂಟರ್‌ ಡಿವೈಡರ್‌ಗೆ ಢಿಕ್ಕಿಯಾಗಿ ಅದೇ ವೇಗದಲ್ಲಿ ಭಕ್ತರ ಮೇಲೆ ಎರಗಿದೆ.

ಶಾಂತಿಗ್ರಾಮದ ಪೊಲೀಸರಿಂದ ಕಾರ್ಯಾಚರಣೆ ನಡೆಯುತ್ತಿದೆ. ಆತ ಚಾಲನೆ ಮಾಡುವ ವೇಳೆ ಕುಡಿದಿದ್ದ ಎಂದು ಸ್ಥಳೀಯರು ಕೂಡ ತಿಳಿಸಿದ್ದಾರೆ. ಲಾರಿ ಚಾಲಕ ಅತಿವೇಗದಿಂದ ಬಂದ ಪರಿಣಮ ಈ ಭೀಕರ ಘಟನೆ ನಡೆದಿದೆ. ಸುಮಾರು 500 ಮೀಟರ್‌ ದೂರದಲ್ಲೇ ಬ್ಯಾರಿಕೇಡ್‌ ಹಾಕಿ, ಎಲ್ಲಾ ವಾಹನಗಳನ್ನು ನಿಲ್ಲಿಸಿ, ಪೊಲೀಸರು ನಿಂತಿದ್ದರೆ ಈ ಘಟನೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

1002211359
ಆರೋಪಿ ಚಾಲಕ ಭುವನೇಶ್

“ಘಟನೆ ದುರದೃಷ್ಟಕರ. ಈ ವಿಷಯದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತನಾಡುತ್ತೇನೆ. ಮೃತಪಟ್ಟ ಕುಟುಂಬಕ್ಕೆ ಕನಿಷ್ಠ 15 ರಿಂದ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ” ಎಂದು ಹೊಳೆನರಸೀಪುರ ಎಚ್‌ಡಿ ರೇವಣ್ಣ ಹೇಳಿದ್ದಾರೆ.

ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ, ಡಿಸಿಎಂ ಸೇರಿದಂತೆ ಹಲವು ಮಂದಿ ರಾಜಕೀಯ ನಾಯಕರುಗಳು ಟ್ವೀಟ್‌ ಮಾಡಿದ್ದಾರೆ.

ಲಾರಿ ಚಾಲಕನೂ ಗಾಯಾಳು:

ಮೊಸಳೆ ಹೊಸಹಳ್ಳಿಯಲ್ಲಿ ಅಪಘಾತ ಎಸಗಿದ ಲಾರಿಯ ಚಾಲಕ ಕಟ್ಟೆಬೆಳಗುಲಿ ಗ್ರಾಮದ ಭುವನೇಶನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನೂ ಹಿಮ್ಸ್ ಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಶನಿವಾರ ಮುಂಜಾನೆ ಹಾಸನಕ್ಕೆ ಭೇಟಿ

ಘಟನೆಯ ಮಾಹಿತಿ ಪಡೆದಿರುವ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶನಿವಾರ ಮುಂಜಾನೆ ಹಾಸನಕ್ಲೆ ತೆರಳಲಿದ್ದೇನೆ. ಗಾಯಾಳುಗಳ ಕುಟುಂಬವನ್ನು ಭೇಟಿಯಾಗಿ, ಮಾತುಕತೆ ನಡೆಸಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮೊಕ್ಕಾಂ ಹೂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...