ಹಾಸನ | ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ; ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿ ಸಮಾಲೋಚನಾ ಸಭೆ

Date:

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ಕೆನೆಪದರ ವಿಚಾರವಾಗಿ ಉಲ್ಲೇಖಿಸಿರುವುದನ್ನು ಖಂಡಿಸುತ್ತೇವೆ. ಸುಪ್ರೀಂ ಕೋರ್ಟಿನ ತೀರ್ಪು, ದಲಿತರಲ್ಲೇ ದನಿ ಇಲ್ಲದವರಿಗೆ ಹೊಸಬೆಳಕು ನೀಡಿದೆ ಇದನ್ನು ನಾವು ಒಮ್ಮತದಿಂದ ಸ್ವಾಗತಿಸುತ್ತಿದ್ದೇವೆ. ಈಗಾಗಲೆ ಮಾದಿಗ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಕಾಣುತ್ತಿದ್ದೇವೆ. ದಶಕಗಳಿಂದ ಹೋರಾಡುತ್ತಿರುವುದರ ಫಲವಾಗಿ ಇಂದು ಪರಿಶಿಷ್ಟ ಜಾತಿಗಳಿಗೆ ಜಯ ಸಿಕ್ಕಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವಿಜಿಕುಮಾರ್‌ ಆಗ್ರಹಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿದ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸಿ ಮುಂದಿನ ನಡೆಯ ಬಗ್ಗೆ ಹಾಸನದ ಸ್ವಾಭಿಮಾನ ಭವನದಲ್ಲಿ ಮಾದಿಗ ದಂಡೋರ ಮೀಸಲಾತಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ 1

ಡಿಎಸ್‌ಎಸ್‌ ರಾಜ್ಯ ಸಂಚಾಲಕ ಸೋಮಶೇಖರ್‌ ಮಾತನಾಡಿ, “ಸತತ 30 ವರ್ಷಗಳಿಂದ ಹೋರಾಟ ಮಾಡುತ್ತಲೇ ಇದ್ದೇವೆ. ಈಗ ನಾವು ಹೊಲೆಮಾದಿಗ ಜಾತಿಗಳು ಒಟ್ಟಾಗಿ ಸುಪ್ರೀಂ ಕೋರ್ಟಿನ ತೀರ್ಪನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಗಟ್ಟಿಯಾದ ಹೋರಾಟ ರೂಪಿಸಬೇಕೆದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗಾಧರ ಬಹುಜನ್‌ ಮಾತನಾಡಿ, “ಪಂಜಾಬ್‌, ಹರಿಯಾಣ ರಾಜ್ಯಗಳಲ್ಲಿ ಹೆಚ್ಚು ಮಾದಿಗ ಸಮಯುದಾಯದವರು ಇದ್ದಾರೆ. ಈಗಾಗಲೇ ಈ ಹೋರಾಟ ಈ ಎರಡು ರಾಜ್ಯಗಳಿಂದಲೇ ಪ್ರಾರಂಭವಾಗಿದ್ದು, ತದ ನಂತರದಲ್ಲಿ ದಕ್ಷಿಣ ರಾಜ್ಯಗಳಲ್ಲಿ ಪ್ರಾರಂಭವಾಯಿತು. ಕ್ರೀಮಿಲೇಯರ್‌(ಕೆನೆಪದರ) ವಿಷಯವನ್ನು ಸುಪ್ರೀಂ ಕೋರ್ಟ್‌ ಪ್ರಸ್ತಾಪಿಸಿದೆ. ಇದನ್ನು ಕೂಡಲೇ ಕೈಬಿಡೇಕು. 1935ರ ಬ್ರಿಟೀಷ್‌ ಇಂಡಿಯನ್‌ ಗವರ್ನಮೆಂಟ್‌ ಆಕ್ಟ್‌  ಮೊದಲ ಬಾರಿಗೆ ಮೀಸಲಾತಿಯನ್ನು ನೀಡಿತ್ತು. ತದನಂತರದಲ್ಲಿ ಡಾ ಅಂಬೇಡ್ಕರ್‌ ಅವರು ಮೂಲಭೂತ ಹಕ್ಕುಗಳ ಒಳಗೆ ಮೀಸಲಾತಿಯನ್ನು ನೀಡಬೇಕೆಂದು ಪ್ರತಿಪಾದಿಸಿದ್ದರು. ಈ ಎಲ್ಲ ಐತಿಹಾಸಿಕ ವಿಷಯಗಳನ್ನು ನಾವು ಗಮನಿಸಿದರೆ ಈಗ ಪ್ರಸ್ತುತದಲ್ಲಿ ಈ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿದ ಸುಪ್ರೀಂ ಕೋರ್ಟಿನ ತೀರ್ಪನ್ನು ನಾವು ಸ್ವಾಗತಿಸಬೇಕಿದೆ ಮತ್ತು ಇದನ್ನು ಜಾರಿಗೊಳಿಸಲು ನಾವೆಲ್ಲರೂ ಶ್ರಮಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಆರೋಪ; ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ

ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆ ಟಿ ಶಿವಪ್ರಸಾದ್‌, ರಾಜು ಗೊರೂರು ಸತೀಶ್‌ ಕಡವಿನಹೊಸಳ್ಳಿ, ನಾಗರಾಜು ಕೆ ಎಂ, ಕಕ್ಕೇಹಳ್ಳಿ ರಂಗಪ್ಪ, ಹೆಚ್‌ ಕೆ ಸಂದೇಶ್‌, ಈರಪ್ಪ, ವಕೀಲರಾದ ರಾಜೇಶ್‌, ಕುಮಾರ್‌ ಗೌರವ, ಬೈರೇಶ್‌ ಶೇಖರಯ್ಯ, ಹರೀಶ್‌, ದೇವರಾಜ್‌ ಸೋಮಶೇಖರ್‌, ಅಂಬುಗ ಮಲ್ಲೇಶ್‌, ರಮೇಶ್‌ ಹಾಸನ್‌, ನವೀನ್‌ ಕುಮಾರ್‌ ಅರವಿಂದ ಸೇರಿದಂತೆ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...