ಹಾಸನ | ಸಾಗುವಳಿ ಭೂಮಿ ಕಬಳಿಸಲು ಕೆಐಎಡಿಬಿ ಹುನ್ನಾರ; ಕರ್ನಾಟಕ ಪ್ರಾಂತ ರೈತ ಸಂಘ ಆರೋಪ

Date:

ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗ‌ರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, “1997ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಾಸನದ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ರೈತರ ಸ್ವಾಧೀನದಲ್ಲಿರುವ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರವನ್ನು ನೀಡಿದೆ. ಆದರೆ 26 ಕುಟುಂಬಗಳಿಗೆ ಮಂಜೂರಾಗಿದ್ದ ತಲಾ 0.26 ಎಕ್ಕರೆ ಜಾಗದಲ್ಲಿ ಕೆಐಡಿಬಿಯವರು ಭೂಸ್ವಾದೀನ ಮಾಡಿಕೊಂಡು ಉಳಿದಿರುವ ಭೂಮಿಯಲ್ಲಿ ರೈತರು ಈಗಲೂ ಅನುಭವದಲ್ಲಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ” ಎಂದು ಸಂಘಟನಾಕಾರರು ತಿಳಿಸಿದರು.

ಹಾಸನ ಜಿಲ್ಲಾಧಿಕಾರಿಗೆ ಮನವಿ

ಈ ಸುದ್ದಿ ಓದಿದ್ದೀರಾ? ತುಂಗಭದ್ರಾ ಕ್ರಸ್ಟ್‌ಗೇಟ್ | ಕಳಪೆ ನಿರ್ವಹಣೆಗೈದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ: ರೈತ ಮುಖಂಡ ಬಸವರಾಜಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಉಳಿಕೆ ಭೂಮಿಯೂ ತಮಗೆ ಸೇರಬೇಕೆಂದು ರೈತರ ಮೇಲೆ ದೌರ್ಜನ್ಯ ನಡೆಸಿ ಭೂಮಿ ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ನಡೆಸಲು ಮುಂದಾಗಿದೆ. ರೈತರ ಅನುಭವದಲ್ಲಿರುವ ಕೃಷಿ ಚಟುವಟಿಕೆಯ ಉಳಿಕೆ ಭೂಮಿಯನ್ನು ಸರ್ವೆ ಮಾಡಿ, ಗಡಿಗಳನ್ನು ಗುರುತಿಸಿ, ಅದ್ದುಬಸ್ತ್ ಮೂಲಕ ಪೋಡಿ ಮಾಡಿಕೊಡಬೇಕು ಮತ್ತು ಅನಗತ್ಯವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ರೈತರಿಗೆ ತೊಂದರೆ ಕೊಡಬಾರದು” ಎಂದು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...