ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

Date:

ನಮ್ಮ ತಂದೆ ದೇವೇಗೌಡರಿಗೆ 1962ರಿಂದ ರಾಜಕೀಯ ಜನ್ಮ ನೀಡಿ ಶಕ್ತಿ ತುಂಬಿದ ಹಾಸನ ಜಿಲ್ಲೆಯಲ್ಲಿ ಆಗದೇ ಉಳಿದಿರುವ ಯೋಜನೆ ಪೂರ್ಣಗೊಳಿಸಿ, ಸಮಗ್ರ ಅಭಿವೃದ್ಧಿ ಮಾಡಿದ ನಂತರವೇ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೊಳೆನರಸೀಪುರ ಕ್ಷೇತ್ರದ ಶಾಸಕ  ಹೆಚ್.ಡಿ.ರೇವಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಾಸಕ ಹೆಚ್ ಡಿ ರೇವಣ್ಣ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ದೇವೇಗೌಡರು ರಾಜಕೀಯವಾಗಿ ಹಲವು ಸ್ಥಾನಮಾನ, ಸಿಎಂ-ಪಿಎಂ ಆಗಲು ಹಾಸನ ಹಾಗೂ ಕನಕಪುರ ಲೋಕಸಭಾ ಕ್ಷೇತ್ರದ ಜನರೇ ಕಾರಣ ಎಂದರು. ದೇವೇಗೌಡರಲ್ಲದೆ, ನಾನು ಜೊತೆಗೆ ದಿ.ಪ್ರಕಾಶ್‌, ಈಗ ಸ್ವರೂಪ್ ಮೊದಲಾದವರು ಗೆಲ್ಲಲು ಜನರೇ ಕಾರಣರಾಗಿದ್ದಾರೆ. ಕೆಲವೊಮ್ಮೆ ಎಂಟಕ್ಕೆ ಎಂಟೂ ಈ ಸ್ಥಾನ ಗೆಲ್ಲಿಸಿದ್ದನ್ನು ನಾವು ಮರೆಯುವುದಿಲ್ಲ, ನನ್ನ ಕೊನೆ ಉಸಿರು ಇರೋವರೆಗೂ ಜಿಲ್ಲೆಯಲ್ಲಿ ಬಾಕಿ ಕೆಲಸ ಮುಗಿಸಲು ಸಿದ್ದವಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಮತ್ತೆ ನಾಲಿಗೆ ಹರಿಬಿಟ್ಟ ಸೂರಜ್ ರೇವಣ್ಣ; ಪಕ್ಷದ ಮುಖಂಡರಿಗೆ ಅಶ್ಲೀಲವಾಗಿ ನಿಂದನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಕುಮಾರಸ್ವಾಮಿ ಹಾಸನ ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಿರುವುದರಲ್ಲಿ ಸ್ವಲ್ಪ ಬಾಕಿ ಇದೆ. ಯಾವುದೇ ಅಡೆತಡೆ ಬಂದರೂ ಪೂರ್ಣಗೊಳಿಸುವೆ. ಹಾಸನ, ಹೊಳೆನರಸೀಪುರ ತಾಲ್ಲೂಕಿನಲ್ಲಿ ರಿಂಗ್ ರೋಡ್‌ ಮಾಡಿಸಲು ಪ್ರಯತ್ನ ನಡೆಯುತ್ತಿದೆ. ಜಿಲ್ಲೆಗೆ ಏನೆಲ್ಲ ಅಭಿವೃದ್ಧಿ ಕೆಲಸ ಆಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆಡಿದ್ದೇನೆ. ಹಾಸನ ಜಿಲ್ಲೆಯ ಜನರು ನೀಡಿರುವ ಸಹಕಾರ ಮರೆಯಲ್ಲ. ರಾಜ್ಯ ಸರ್ಕಾರ ಕೊಟ್ಟರೆ ಸಂತೋಷ, ಇಲ್ಲವಾದರೆ ಕೇಂದ್ರದ ನೆರವಿನಿಂದಲೇ ಅಭಿವೃದ್ಧಿ ಮಾಡುವುದಾಗಿ ಶಾಸಕ ಹೆಚ್ ಡಿ ರೇವಣ್ಣ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...