ಹಾಸನ l ಪ್ರೇಮ ವಿವಾಹಕ್ಕೆ ಪೋಷಕರ ನಿರಾಕರಣೆ: ಮಗಳನ್ನು ಕರೆದೊಯ್ಯುವಾಗ ಕಾರಿನಲ್ಲಿ ಜೋತಾಡಿದ  ತಂದೆ 

Date:

ಅಪ್ಪನ ಎದುರೇ ಮಗಳನ್ನು ಕಾರಿನಲ್ಲಿ ಅಪಹರಿಸಿದ ಆರೋಪ ಕೇಳಿ ಬಂದಿರುವ ಘಟನೆ ಹಾಸನ ಜಿಲ್ಲೆ  ಬೇಲೂರು ತಾಲೂಕಿನ, ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. 

ಚನ್ನರಾಯಪಟ್ಟಣ ಮೂಲದ ಯುವಕ ಪ್ರಜ್ವಲ್ ಮತ್ತು ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಪ್ರೇಮಿಗಳು. ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಈ ವಿಚಾರ ತಿಳಿದ ಯುವತಿ ಪ್ರಸ್ಟಲ್ ಡಿಯಲಾರ ತಂದೆ-ತಾಯಿ ಮರಳಿ ಮನೆಗೆ ಬರುವಂತೆ ಮಗಳಿಗೆ ತಿಳಿಸಿದ್ದಾರೆ. ಪೋಷಕರ ಒತ್ತಡ ಹಿನ್ನೆಲೆಯಲ್ಲಿ ಯುವತಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ ಮರಳಿ ಮನೆಗೆ ಬಂದಿದ್ದಾರೆ. ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಮನೆಗೆ ಮರಳುತ್ತಿದ್ದಂತೆ ಯುವತಿಯ ಪೋಷಕರು ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿರುವುದರ ಬಗ್ಗೆ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ ಪತಿ ಪ್ರಜ್ವಲ್​ಗೆ ಹೇಳಿದ್ದಾರೆ

ಅರೇಹಳ್ಳಿ ಗ್ರಾಮಕ್ಕೆ ಪ್ರಜ್ವಲ್​ ಬಂದು ಪತ್ನಿಯನ್ನು ತನ್ನ ಜೊತೆ ಕಳಸಿಕೊಡುವಂತೆ ಪ್ರಜ್ವಲ್ ಹೇಳಿದಾಗ​ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಮೇ.13) ರಂದು ತಂದೆ ಜೊತೆ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ನಡೆದುಕೊಂಡು ಹೋಗುತ್ತಿರುವ ವೇಳೆ ಕಾರಿನಲ್ಲಿ ಬಂದ ಪ್ರಜ್ವಲ್​, ತನ್ನ ಪತ್ನಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ರನ್ನು ಕರೆದುಕೊಂಡು ಹೋಗಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ಕಚೇರಿಗೆ ಮುತ್ತಿಗೆ; ಪ್ರತಿಭಟನಾಕಾರರ ಬಂಧನ

ಈ ವೇಳೆ ತಡೆಯಲು ಹೋಗಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​​ ರ ತಂದೆ ಕಾರಿನ ಡೋರ್​ಗೆ ಜೋತು ಬಿದ್ದಿದ್ದಾರೆ. ಚಾಲಕ ಮಾತ್ರ ಕಾರು ನಿಲ್ಲಿಸದೆ ಸುಮಾರು 200 ಮೀಟರ್ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್​ರ ತಂದೆಯನ್ನು ಎಳೆದೊಯ್ದಿದ್ದಾನೆ. ದಂಪತಿಗಳು ಚನ್ನರಾಯಪಟ್ಟಣ ಶಹರ ಠಾಣೆ ಪೊಲೀಸರ ಎದುರು ಹಾಜಾರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...