ಹಾಸನ l ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರಿಂದ ಪ್ರತಿಭಟನೆ 

Date:

ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ, ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ, ಶನಿವಾರದಂದು ಮಹಾರಾಜ ಪಾರ್ಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು.

ಹಾಸನದ ಬೂವನಹಳ್ಳಿ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬೂವನಹಳ್ಳಿ, ಲಕ್ಷ್ಮೀಸಾಗರ, ದ್ಯಾವಲಾಪುರ, ತೊಂಡಿಹಳ್ಳಿ ಮತ್ತು ಜಿ.ಮೈಲನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ರೈತರ ನೂರಾರು ಎಕ್ಕರೆ ಕೃಷಿಯೋಗ್ಯ ಭೂಮಿಯನ್ನು ಕೆಐಡಿಬಿ ಭೂಸ್ವಾಧೀನ ಮಾಡಿಕೊಂಡು ವಿಮಾನ ನಿಲ್ದಾಣದ ಕಾರ್ಯ ನಡೆಯುತ್ತಿದೆ.

Screenshot 2025 02 02 19 59 43 04 7352322957d4404136654ef4adb64504

1997 ರಲ್ಲಿ ಕೆಐಡಿಬಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆದಾಗಲೇ ವಿಮಾನ ನಿಲ್ದಾಣದ ಸುತ್ತಲೂ ಬರುವ ಗ್ರಾಮಗಳಿಗೆ ಮತ್ತು ಕೃಷಿ ಭೂಮಿಗೆ ಅನುಕೂಲವಾಗುವಂತೆ, ಸಂಪರ್ಕ ರಸ್ತೆಯನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಡಳಿತವು ಭರವಸೆ ನೀಡಿತ್ತು. ಈ ಭರವಸೆ ಈಡೇರದಿದ್ದರೆ ಸುತ್ತಮುತ್ತಲ ಗ್ರಾಮಗಳಿಗೆ ಸಂಲರ್ಕವೇ ಕಡಿತವಾಗಿ ರೈತರು ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಇದರ ಜೊತೆಗೆ ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಒಂದೊಂದು ಉದ್ಯೋಗ ನೀಡುತ್ತೇವೆಂಬ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಪ್ರಸ್ತುತ ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ತೀರ್ಮಾನ ಮಾಡಬೇಕಾಗಿದೆ ಎಂದು ಪ್ರತಿಭಟನಾ ರೈತರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೂವನಹಳ್ಳಿ, ಲಕ್ಷ್ಮೀಸಾಗರ, ದ್ಯಾವಲಾಪುರ, ತೆಂಡಿಹಳ್ಳಿ, ಜಿ.ಮೈಲನಹಳ್ಳಿ, ಸಂಕೇನಹಳ್ಳಿ, ಚಿಕ್ಕಬೂವನಹಳ್ಳಿ, ಕೊಮ್ಮೇನಹಳ್ಳಿ, ಚಟ್ಟನಹಳ್ಳಿ, ಹಲಸಿನಹಳ್ಳಿ, ಗಾಡೇನಹಳ್ಳಿ, ಸಮುದ್ರವಳ್ಳಿ, ಗೇಕರವಳ್ಳಿ, ಯೋಗಿಹಳ್ಳಿ, ಹಂಡಂಗಿ, ಕುಂದೂರು ಮಠ ರಸ್ತೆ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ವಿಮಾನ ನಿಲ್ದಾಣ ಪ್ರಾರಂಭವಾದ ನಂತರ ರಸ್ತೆ ಸಂಪರ್ಕ ಇಲ್ಲದಾಗುತ್ತದೆ. ಇವರೆಲ್ಲರೂ ಹತ್ತಾರು ಕಿಲೋಮೀಟರ್‌ಗಳು ಸುತ್ತಿಬಳಸಿ ತಮ್ಮ ಕೆಲಸ ಕಾರ್ಯಗಳಿಗೆ ಹಾಸನಕ್ಕೆ ಬರಬೇಕಾಗುತ್ತದೆ. ಒಂದೆಡೆ ಆದಾಯದ ಮೂಲವಾಗಿದ್ದ ಕೃಷಿಯೋಗ್ಯ ಭೂಮಿಯನ್ನು ಕಳೆದುಕೊಂಡು, ಪರ್ಯಾಯ ಉದ್ಯೋಗವೂ ಇಲ್ಲದೆ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಕೆಪಿಅರ್ ಎಸ್ ಸಂಘಟನೆಯ ಮುಖಂಡರು ತಿಳಿಸಿದರು.

Screenshot 2025 02 02 20 00 12 38 7352322957d4404136654ef4adb64504

ವಿಮಾನ ನಿಲ್ದಾಣದ ಸುತ್ತಮುತ್ತಲಿನ ಭೂಮಿಯು ಹಲವು ವರ್ಷಗಳ ಹಿಂದೆ ರೈತರಿಗೆ ಬಗರ್ ಹುಕುಂ ಸಾಗುವಳಿಯ ಆಧಾರದಲ್ಲಿ ಮಂಜೂರಾಗಿದ್ದರೂ, ರೈತರೇ ಸ್ವಾಧೀನಾನುಭವದಲ್ಲಿದ್ದರೂ, ಇದುವರೆಗೂ ಈ ಭೂಮಿಯಲ್ಲಿ ಪೂರ್ಣ ಪ್ರಮಾಣದ ದುರಸ್ತಿಕಾರ್ಯ ಕೈಗೊಂಡಿಲ್ಲದಿರುವುದರಿಂದ ಬಹುತೇಕ ರೈತರಿಗೆ ಪಟ್ಟಭದ್ರಹಿತಾಸಕ್ತಿಗಳು ದಾರಿತಪ್ಪಿಸಿ ಮೋಸ ಮಾಡುತ್ತಿದ್ದಾರೆ. ಜೊತೆಗೆ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಳ್ಳುತ್ತಿರುವ ಲಕ್ಷ್ಮೀಸಾಗರ ಗ್ರಾಮದ ರೈತರ ಭೂಮಿಗೆ ಸೂಕ್ತ ಪರಿಹಾರವನ್ನು ನೀಡಿಲ್ಲ ಎಂದು ಕೆಪಿಆರ್ ಎಸ್ ರೈತ ಮುಖಂಡ ಎಚ್ ಅರ್ ನವೀನ್ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಒಳಮೀಸಲಾತಿ ಅನುಷ್ಠಾನಕ್ಕೆ ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಈ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ರೈತರು, ವಿಮಾನ ನಿಲ್ದಾಣ ಭೂ ಸಂತ್ರಸ್ತರ ಹೋರಾಟ ಸಮಿತಿ, ಪ್ರಗತಿಪರ ರೈತರು, ಕೆಪಿಆರ್ ಎಸ್ ಸಂಘಟನೆ ಮುಖಂಡರು, ಕಾರ್ಯಕರ್ತರು ಹಾಗೂ ಇನ್ನಿತರರು ಉಪ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...