ಹಾಸನ l ರೈತರ ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ; ಕಾರ್ಮಿಕ ಸಂಘಟನೆ ಜಂಟಿ ಸಮಿತಿ ಪ್ರತಿಭಟನೆ

Date:

ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Screenshot 2024 11 26 19 56 51 11 7352322957d4404136654ef4adb64504

“ಕೇಂದ್ರ ಸರ್ಕಾರ ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ಹಿಂದೆ ವಿವಿಧ ರೈತ ಸಂಘಟನೆಗಳ ವತಿಯಿಂದ ದೆಹಲಿಯಲ್ಲಿ ನಡೆದ ಅನಿರ್ದಿಷ್ಟಾವಧಿ ಹೋರಾಟದ ವೇಳೆ ಕೇಂದ್ರ ಸರ್ಕಾರ ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಕೇವಲ ಭರವಸೆ ನೀಡಿದ ಕೇಂದ್ರ ಸರ್ಕಾರ ಈವರೆಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ ಆ‌ರ್ ನವೀನ್ ಕುಮಾ‌ರ್ ತಿಳಿಸಿದರು.

“ಸಾಲಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರು ಹಾಗೂ ಕೃಷಿ ಕಾರ್ಮಿಕರ ಸಮಗ್ರ ಸಾಲಮನ್ನಾ ಮತ್ತು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು. ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗಿಕರಣ ಮಾಡಬಾರದು. ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಲು ಎಲ್ಲರಿಗೂ ಗುಣಮಟ್ಟದ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ಕೋಮು ವಿಭಜನೆಯನ್ನು ನಿಲ್ಲಿಸಲು ಮತ್ತು ಅವುಗಳ ಪರಿಣಾಮಕಾರಿ ಅನುಷ್ಠಾನ ಖಚಿತಪಡಿಸಿಕೊಳ್ಳಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಮಹಿಳಾ ಸಬಲೀಕರಣ ಮತ್ತು ತ್ವರಿತ ನ್ಯಾಯಾಂಗ ವ್ಯವಸ್ಥೆ ಮೂಲಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನವನ್ನು ಕೊನೆಗೊಳಿಸಬೇಕು. ಜಾತಿ ಹಾಗೂ ಕೋಮು ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು” ಎಂದು ಜಂಟಿ ಸಂಘಟನೆ ಕಾರ್ಮಿಕ ಸಮಿತಿ ಆಗ್ರಹಿಸಿತು.

ಇದನ್ನೂ ಓದಿದ್ದೀರಾ?ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ಈ ವೇಳೆ ಮುಖಂಡರಾದ ಧರ್ಮೇಶ್, ಪೃಥ್ವಿ, ಮಂಜುನಾಥ್, ರವಿ, ಪುಷ್ಪ, ರಮೇಶ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...