ಹಾಸನ l ಎಂಟು ವರ್ಷದಿಂದ ಕಾಮಗಾರಿ ವಿಳಂಬ: ಬೇಸತ್ತ ಸಾರ್ವಜನಿಕರು 

Date:

ಕಾಂಕ್ರೀಟ್ ಚರಂಡಿ ಕಾಮಗಾರಿ ಕಾರ್ಯ ವಿಳಂಬ ಆಗಿರುವುದರಿಂದ ಸ್ಥಳೀಯ ಆಕ್ರೋಶ ವ್ಯಕ್ತಪಡಿಸಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸುಮಾರು ಎಂಟು ವರ್ಷಗಳಿಂದ ಕೊಲ್ಲಹಳ್ಳಿ ಗ್ರಾಮದ ಸಾರ್ವಜನಿಕರು ರಸ್ತೆ ಕಾಮಗಾರಿಯಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಂಟ್ರಾಕ್ಟ್ ಗಳಿಂದ ಕೂಡಿದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕೆಲಸ ಅರ್ಧದಲ್ಲಿ ಉಳಿದರಿಂದ, ಗ್ರಾಮದ ಸರ್ಕಲ್ ನಲ್ಲಿ ಸರ್ಕಾರಿ ಶಾಲೆ, ಬಸ್ ಸ್ಟಾಪ್, ನ್ಯಾಯಬೆಲೆ ಅಂಗಡಿ, ಅರಬಿ ಸ್ಕೂಲ್  ಇನ್ನು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

Screenshot 2025 05 17 06 30 57 07 40deb401b9ffe8e1df2f1cc5ba480b12

ಚರಂಡಿ ನೀರು ಹಾಗೂ ಮಳೆ ನೀರು ನಿಂತು ಕೊಳಚೆ ನಿರ್ಮಾಣವಾಗಿದೆ. ಇದರಿಂದ ಗ್ರಾಮದಲ್ಲಿ ಮಲೇರಿಯಾ ಡೆಂಗ್ಯೂ ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳು ಉತ್ಪತ್ತಿಯಾಗುತ್ತಿದೆ. ಗ್ರಾಮದ ಸಾರ್ವಜನಿಕರು ದಿನನಿತ್ಯ ನಡೆದಾಡುವ ರಸ್ತೆಯ ಪಕ್ಕದಲ್ಲಿ ಆಳದ ಚರಂಡಿಯಿಂದ ಸಾವು ನೋವುಗಳು ಸಂಭವಿಸುವ  ಸಾಧ್ಯತೆಗಳು ಹೆಚ್ಚಾಗಿದೆ. ಈ ಬಗ್ಗೆ ಗ್ರಾಮಸ್ಥರಾದ ನಾವು ಹಲವು ಬಾರಿ ಸಂಬಂಧ ಪಟ್ಟ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮತ್ತು ರಸ್ತೆ ಕಾಂಟ್ರಾಕ್ಟ್ ಗಳಲ್ಲಿ ಸಮಸ್ಯೆ ಕುರಿತು ಹಲವು ಬಾರಿ ತಿಳಿಸಿ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ l ಜಿಲ್ಲೆಯ ಹಲವೆಡೆ ವರುಣನ ಅಬ್ಬರ: ರೈತರಲ್ಲಿ ಮಂದಹಾಸ ಮೂಡಿದೆ

ಹಾಸನ ಲೋಕಸಭಾ ಸದಸ್ಯರ ಮತ್ತು ಹಾಸನ ಜಿಲ್ಲಾಧಿಕಾರಿಗಳ ಗಮನಕ್ಕೆ ವಹಿಸಲು 19 ರಂದು ಗ್ರಾಮದ ವಿವಿಧ ಸಂಘಟನೆಗಳೊಂದಿಗೆ ಸೇರಿ ಹೆದ್ದಾರಿ ತಡೆದು, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆಂದು ಸ್ಥಳೀಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...