ಹಾಸನ | ‘ಸೀಗೆ’ ಹೆಸರಿನ ಒಂಟಿಸಲಗ ಸೆರೆ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ನಿಡಿಗೆರೆ ಅರಣ್ಯದಲ್ಲಿ ‘ಸೀಗೆ’ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.

ಶನಿವಾರ ಏಳು ಸಾಕಾನೆಗಳೊಂದಿಗೆ ಸಮೀಪದ ಹಳ್ಳಿಬಯಲು ಗ್ರಾಮದಲ್ಲಿ ಅರಣ್ಯ ಇಲಾಖೆ ‘ಆಪರೇಷನ್‌ ಎಲಿಫೆಂಟ್’ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ  ಆರಂಭಿಸಿತ್ತು. ಆದರೆ ‘ಸೀಗೆ’ ದಟ್ಟ ಕಾಡಿನೊಳಗೆ ಸೇರಿಕೊಂಡಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ‘ಸೀಗೆ’ಯನ್ನು ಪತ್ತೆ ಮಾಡಿದ್ದಾರೆ.

ನಿಡಿಗೆರೆ ಅರಣ್ಯ ಪ್ರದೇಶದಲ್ಲಿ ‘ಸೀಗೆ’ ಇರುವುದನ್ನು ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ತಂಡ, ಬಿಕ್ಕೋಡು ಬಳಿಯಿರುವ ತಾತ್ಕಾಲಿಕ ಶಿಬಿರದಿಂದ ಲಾರಿಗಳ ಮೂಲಕ ನಿಡಿಗೆರೆ ಅರಣ್ಯ ಪ್ರದೇಶಕ್ಕೆ ಸಾಕಾನೆಗಳನ್ನು ಸ್ಥಳಾಂತರ ಮಾಡಿ, ಕಾರ್ಯಾಚರಣೆ ಆರಂಭಿಸಿತು. ಭಾನುವಾರ ಮಧ್ಯಾಹ್ನ ವೈದ್ಯರು ‘ಸೀಗೆ’ಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು. ಡಾಟ್ ಚುಚ್ಚಿಕೊಂಡ ನಂತರವೂ ಕಿ.ಮೀ.ಗಟ್ಟಲೆ ಓಡಿದ ‘ಸೀಗೆ’, ಕೊನೆಗೆ ಪ್ರಜ್ಞೆತಪ್ಪಿ ಬಿತ್ತು. ಅದನ್ನು ಆರೈಕೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಹಗ್ಗದಿಂದ ಬಂಧಿಸಿದರು. ಪ್ರಜ್ಞೆ ಮರಳಿದ ನಂತರ ಸ್ಥಳಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

‘ಅಭಿಮನ್ಯು’ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ‘ಹರ್ಷ’, ‘ಪ್ರಶಾಂತ’, ‘ಕರ್ನಾಟಕ ಭೀಮ’, ‘ಮಹೇಂದ್ರ’, ‘ಧನಂಜಯ’, ‘ಅಶ್ವತ್ಥಾಮ’ ಸಾಕಾನೆಗಳು ಭಾಗವಹಿಸಿದ್ದವು.

ಸೆರೆಯಾದ ‘ಸೀಗೆ’ ಈ ಮೊದಲು ಇಬ್ಬರನ್ನು ಬಲಿ ಪಡೆದಿದ್ದು, ಹಲವರ ಮೇಲೆ ದಾಳಿ ಮಾಡಿ ಗಾಯಗೊಳಿಸಿತ್ತು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...