ಹಾಸನ | ಸಮಗ್ರ ಅಭಿವೃದ್ಧಿ ಕುರಿತು ಅ.20ರಂದು ಬೃಹತ್ ವಿಚಾರ ಸಂಕಿರಣ

Date:

ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿ ಕುರಿತು ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 20ರಂದು ಬೃಹತ್ ವಿಚಾರ ಸಂಕಿರಣ ಆಯೋಜಿಸಲಾಗುತ್ತಿದ್ದು, ವಿಚಾರ ಗೋಷ್ಠಿಗಳು ಹಾಗೂ ಪ್ರಬಂಧ ಸ್ಪರ್ಧೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಅವರು ತಿಳಿಸಿದ್ದಾರೆ.

ಹಾಸನ ನಗರದಲ್ಲಿ ನಡೆಯಲಿರುವ ಬೃಹತ್ ವಿಚಾರ ಸಂಕಿರಣಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಕೃಷಿ, ಪರಿಸರ ಉಳಿಸಿ, ಕೈಗಾರಿಕೆಗಳನ್ನು ಸ್ಥಾಪಿಸಿ, ವಾಣಿಜ್ಯ ಮತ್ತು ಉದ್ಯೋಗ ಸೃಷ್ಟಿಸಿ ಎಂಬ ಘೋಷಣೆಯ ಅಡಿಯಲ್ಲಿ ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಬೃಹತ್ ವಿಚಾರ ಸಂಕಿರಣ ಆಯೋಜಿಸಲಾಗುತ್ತಿದೆ” ಎಂದರು.

“ಈ ಬೃಹತ್ ವಿಚಾರ ಸಂಕಿರಣದಲ್ಲಿ ಕೃಷಿ, ಪರಿಸರ, ಕೈಗಾರಿಕೆ ಮತ್ತು ವಾಣಿಜ್ಯದ ವಿಷಯಗಳ ತಜ್ಞರು ಹಾಗೂ ಸಾಮಾಜಿಕ ಮತ್ತು‌ ಆರ್ಥಿಕ‌ ಚಿಂತಕರಿಂದ ಹಾಸನ ಜಿಲ್ಲೆಗೆ ಸಂಬಂಧಿಸಿದ ಸಂಶೋಧನೆ ಮತ್ತು‌ ಅಧ್ಯಯನದ ಆಧಾರದಲ್ಲಿ ಸಿದ್ಧಪಡಿಸಿದ ವಿಷಯಗಳ ಪ್ರಬಂಧ ಮಂಡನೆ, ಸಂವಾದ ಮತ್ತು ಚರ್ಚಾಗೋಷ್ಠಿಗಳನ್ನು ನಡೆಸಲಾಗುವುದು” ಎಂದು ಹೇಳೀದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬೃಹತ್ ವಿಚಾರ ಸಂಕಿರಣಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳು, ಜಿಲ್ಲೆಯ ಕೃಷಿ, ವಾಣಿಜ್ಯ, ಕೈಗಾರಿಕೆ ಹಾಗೂ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಪ್ರಮುಖರು‌, ಜಿಲ್ಲೆಯ ಪ್ರಮುಖ ದಲಿತ, ರೈತ, ಕಾರ್ಮಿಕ, ಪರಿಸರ ಮತ್ತು ಜನಪರ ಚಳವಳಿಗಳ ಮುಖಂಡರುಗಳನ್ನು ಆಹ್ವಾನಿಸಲಾಗುವುದು. ಇದರ ಜತೆಗೆ ಈ ಬೃಹತ್ ವಿಚಾರ ಸಂಕಿರಣದ ಪೂರ್ವಭಾವಿಯಾಗಿ ಮತ್ತು ಸಿದ್ಧತೆಗಾಗಿ ಜಿಲ್ಲೆಯ ವಿವಿಧ ಪ್ರದೇಶ ಮತ್ತು ಸ್ಥಳಗಳಲ್ಲಿ ‘ಜಿಲ್ಲೆಯ ಕೃಷಿ ಕ್ಷೇತ್ರದ ಪರಿಸ್ಥಿತಿ ಮತ್ತು ಅಭಿವೃದ್ಧಿಗಿರುವ ಸಾಧ್ಯತೆಗಳು’, ‘ಜಿಲ್ಲೆಯಲ್ಲಿ ಕೈಗಾರಿಕೆ, ವಾಣಿಜ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಟಿಗಿರುವ ಸಾಧ್ಯತೆಗಳು’, ‘ಲಿಂಗ ಅಸಮಾನತೆ ಮತ್ತು ಮಹಿಳೆಯರ ಘನತೆ ಹಾಗೂ ಅಭಿವೃದ್ಧಿಗಿರುವ ಸಂಬಂಧ’, ‘ಪರಿಸರ ಸಂರಕ್ಷಣೆ, ಕಾಡು ಪ್ರಾಣಿ-ಮಾನವ ಸಂಘರ್ಷ ಮತ್ತು ಅಭಿವೃದ್ಧಿ’, ‘ಕಾಫಿ, ತೆಂಗು, ಕಬ್ಬು, ಆಲೂಗೆಡ್ಡೆ ಮತ್ತು ಕೃಷಿ ವಾಣಿಜ್ಯಾಭಿವೃದ್ಧಿ’ ಹಾಗೂ ‘ಹಾಸನ ಜಿಲ್ಲೆಯಲ್ಲಿನ ‘ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯದ ಪ್ರಶ್ನೆಗಳು’ ಎಂಬ ಅಂಶಗಳ ಕುರಿತಾದ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

“ಹಾಸನ ಜಿಲ್ಲೆಯಲ್ಲಿ ಕೃಷಿ, ಕೈಗಾರಿಕೆ ವಾಣಿಜ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗಿರುವ ಸಾಧ್ಯತೆಗಳು” ಎಂಬ ವಿಷಯ‌ಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಅತ್ಯುತ್ತಮ ಪ್ರಬಂಧಗಳನ್ನು ಬರೆದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 20ರ ಬೃಹತ್ ವಿಚಾರ ಸಂಕಿರಣದಲ್ಲಿ ಗಣ್ಯರಿಂದ ಸನ್ಮಾನಿಸಿ ಬಹುಮಾನ ನೀಡಲಾಗುವುದು. ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳಿಂದಲೂ ಕೂಡ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಿದ್ದು, ಉಪಯುಕ್ತ ಅಭಿಪ್ರಾಯ ಹಾಗೂ ಸಲಹೆಗಳನ್ನು ವಿಚಾರ ಸಂಕಿರಣದಲ್ಲಿ ಪ್ರಸ್ತಾಪಿಸಲಾಗುವುದು” ಎಂದರು.

‘ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿʼ ಕುರಿತು ವಿಚಾರ ಸಂಕಿರಣದ ಹಿನ್ನೆಲೆ ಮತ್ತು ಉದ್ದೇಶ:

ಅಭಿವೃದ್ಧಿ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವುದು ಬೃಹತ್ ಹೈವೇಗಳು, ಫ್ಲೈ ಓವರ್‌ಗಳು, ಬಹುಅಂತಸ್ತಿನ ಕಟ್ಟಡಗಳು ಮತ್ತು ಕಣ್ಣು ಕೋರೈಸುವ ಬಣ್ಣಬಣ್ಣದ ದೀಪಾಲಂಕಾರಗಳು ಮಾತ್ರ. ಈ ಮಾದರಿಯನ್ನೇ ನಾವು ‘ಅಭಿವೃದ್ಧಿ’ ಎಂದು ನಂಬಿಕೊಂಡಿದ್ದೇವೆ. ಆದರೆ ‘ಅಭಿವೃದ್ಧಿ’ ಹೊಂದುತ್ತಿರುವ ನಮ್ಮ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ವಸತಿ, ಆಹಾರ, ಉದ್ಯೋಗ, ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಇವೆಲ್ಲವುಗಳೂ ಸಮರ್ಪಕವಾಗಿ ದೊರಕುತ್ತಿದೆಯೆ? ಎಂದು ನೋಡಿದರೆ, ಇಲ್ಲ! ಎಂದೇ ಹೇಳಬೇಕಾಗುತ್ತದೆ” ಎಂದು ಹೇಳಿದರು.

“ನಮ್ಮ ಸಮಾಜದ‌ ಬಹುಪಾಲು ಜನರು ಕನಿಷ್ಠ ಮೂಲಸೌಕರ್ಯಗಳಿಲ್ಲದೆ, ಉದ್ಯೋಗವಿಲ್ಲದೆ, ಆರ್ಥಿಕ ಮತ್ತು ಸಾಮಾಜಿಕ ಅವಕಾಶಗಳ ಕೊರತೆಗಳಲ್ಲಿ ಬದುಕುತ್ತಿರುವುದನ್ನು ಕಾಣುತ್ತೇವೆ. ‘ಅಭಿವೃದ್ಧಿ’ ಹೆಸರಿನಲ್ಲಿ ಪರಿಸರವನ್ನು ನಿರಂತರವಾಗಿ ದುರ್ಬಳಕೆ ಮಾಡಿಕೊಂಡಿರುವ ಕಾರಣದಿಂದ ನಾವಿಂದು ಹಲವು ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾವಿಂದು ‘ಅಭಿವೃದ್ಧಿ’ ಎಂಬ ಪರಿಕಲ್ಪನೆಯನ್ನು ಬದಲಿ ದೃಷ್ಟಿಯಿಂದ ನೋಡಬೇಕಾದ ಅನಿವಾರ್ಯತೆ ಇದೆ. ಜನಸಮುದಾಯ ಮತ್ತು ಜೀವ ಜಗತ್ತಿನ ನಡುವಿನ ಕೊಡು-ಕೊಳ್ಳುವಿಕೆ, ಎಲ್ಲರಿಗೂ ಆರ್ಥಿಕ ಮತ್ತು ಸಾಮಾಜಿಕ ಅವಕಾಶಗಳಿರುವ ಒಂದು ಸುಸ್ಥಿರ ಸಮಗ್ರ ಅಭಿವೃದ್ಧಿಯ ಮಾನದಂಡಗಳನ್ನು ರೂಪಿಸಿಕೊಳ್ಳುವ ಅಗತ್ಯವಿದೆ” ಎಂದರು.

“ಈ ಮಾನದಂಡಗಳ ಆಧಾರದಲ್ಲಿಯೇ ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ನೋಡಬೇಕಿದೆ. ಜಿಲ್ಲೆಯು ಭೌಗೋಳಿಕವಾಗಿ ಮತ್ತು ನೈಸರ್ಗಿಕವಾಗಿ ಹಲವು ಅನುಕೂಲಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆಯನ್ನು ಒಳಗೊಂಡಿರುವ ಭೂಪ್ರದೇಶವಾಗಿದೆ. ಜಿಲ್ಲಾ ಕೇಂದ್ರವಾದ ಹಾಸನ ನಗರವು ಔದ್ಯೋಗಿಕ ಮಹಾನಗರಗಳಾದ ಬೆಂಗಳೂರು-ಮಂಗಳೂರು ಮತ್ತು ಮೈಸೂರು-ಚಿಕ್ಕಮಗಳೂರು ನಗರಗಳನ್ನು ಸಂಪರ್ಕಿಸುವ ಹೆದ್ದಾರಿಗಳ ಪ್ರಮುಖ ಕೇಂದ್ರಸ್ಥಾನವಾಗಿದೆ. ವಾಣಿಜ್ಯ ಮತ್ತು ಉದ್ಯೋಗಗಳ ಸೃಷ್ಟಿಗೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಅತ್ಯಂತ ಪೂರಕವಾಗಿರುವ ನಗರವಾಗಿದೆ” ಎಂದು ಹೇಳಿದರು.

“ಜಿಲ್ಲೆಯ ಕಾಫಿ಼, ತೆಂಗು, ಆಲೂಗಡ್ಡೆ, ಭತ್ತ, ಕಬ್ಬು, ಶುಂಠಿ, ಜೋಳ ಮತ್ತಿತರೆ ಪ್ರಮುಖ ಕೃಷಿ ಉತ್ಪನ್ನಗಳ ಆಧಾರದಲ್ಲಿ ವಾಣಿಜ್ಯ ಮತ್ತು ಉದ್ಯಮಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಕೃಷಿಯೇ ಪ್ರಧಾನ ಆರ್ಥಿಕತೆಯಾಗಿರುವ ಹಾಸನ ಜಿಲ್ಲೆಯಲ್ಲಿ ಕೃಷಿ ಮತ್ತು ಕೃಷಿ ಉತ್ಪನ್ನಗಳ ಆಧಾರದಲ್ಲಿ ವಾಣಿಜ್ಯೋದ್ಯಮಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಕೃಷಿ ಅಭಿವೃದ್ಧಿಗೆ ಒತ್ತುನೀಡಲು ನೀರಾವರಿಯ ಪ್ರಶ್ನೆಯೂ ಇದೆ. ಜಿಲ್ಲೆಯ ಎಲ್ಲ ತಾಲೂಕುಗಳು ಮತ್ತು ಜಿಲ್ಲಾ ಕೇಂದ್ರ ಹಾಸನವೂ ಸೇರಿದಂತೆ ಸುಮಾರು 3000 ಎಕರೆಗೂ ಹೆಚ್ಚು ಭೂಮಿಯನ್ನು ಕೈಗಾರಿಕಾಭಿವೃದ್ಧಿಗಾಗಿ ಮೀಸಲಿಡಲಾಗಿದೆ. ಆದರೆ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಕೈಗಾರಿಕೆಗಳ ಸ್ಥಾಪನೆಗೆ ಸಾಧ್ಯವಾಗಲಿಲ್ಲ” ಎಂದರು.

“ಕೃಷಿ ಮತ್ತು ವಾಣಿಜ್ಯೋದ್ಯಮಗಳೂ ಬೆಳೆಯಲಿಲ್ಲ. ಸಾಕಷ್ಟು ಪ್ರಮಾಣದ ಉದ್ಯೋಗಗಳೂ ಸೃಷ್ಟಿಯಾಗಲಿಲ್ಲ. ಜಿಲ್ಲೆಯಲ್ಲಿ ಕೃಷಿ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆಯಾಗದ ಕಾರಣದಿಂದ ಉದ್ಯೋಗಕ್ಕಾಗಿ ಜಿಲ್ಲೆಯ ಯುವಜನರು ಬೇರೆಬೇರೆ ನಗರಗಳು ಮತ್ತು ಮಹಾನಗರಗಳ ಕಡೆಗೆ ವಲಸೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಸತಿ-ನಿವೇಶನ ರಹಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಇದೆ. ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸಮರ್ಪಕವಾಗಿ ಎಲ್ಲರಿಗೂ ದೊರೆಯುತ್ತಿಲ್ಲ. ಭೂಮಿ ಮತ್ತು ನೀರಾವರಿಯ ಪ್ರಶ್ನೆಗಳಿಗೆ ಇನ್ನೂ ಸಮರ್ಪಕ ಪರಿಹಾರ ದೊರಕಿಲ್ಲ. ಪರಿಸರ ಅಸಮತೋಲನದಿಂದಾಗಿ ತಂಪಾಗಿದ್ದ ಹಾಸನ ಬೆಂಕಿಯ ಗೂಡಾಗುತ್ತಿದೆ. ಕಾಡು ಪ್ರಾಣಿಗಳು, ಆನೆ-ಮಾನವ ಸಂಘರ್ಷ ವಿಕೋಪದ ಹಂತ ತಲುಪಿದೆ. ಜಿಲ್ಲೆಯ ಜನರಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಂತರ ಹೆಚ್ಚಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

“ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಿರ್ದಿಷ್ಟ ಸಮಸ್ಯೆಗಳ ಕುರಿತು ಸೂಕ್ತ ಅಧ್ಯಯನ ಮತ್ತು ಸಂಶೋಧನೆಗಳ ಆಧಾರದಲ್ಲಿ ‘ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು’ ಎಂಬ ಬೃಹತ್‌ ವಿಚಾರ ಸಂಕಿರಣವನ್ನು ಸಂಘಟಿಸಲಾಗುತ್ತಿದೆ. ಅಂತಿಮವಾಗಿ ಈ ವಿಚಾರ ಸಂಕಿರಣದಲ್ಲಿ ಸಂಶೋಧನೆ ಮತ್ತು ಅಧ್ಯಯನದ ಆಧಾರದಲ್ಲಿ ಮಂಡಿಸಲಾಗುವ ವಿಷಯಗಳು ಮತ್ತು‌ ಸಮಗ್ರ ಚರ್ಚೆಯಿಂದ ವ್ಯಕ್ತವಾಗುವ ಅಭಿಪ್ರಾಯಗಳ ಆಧಾರದಲ್ಲಿ ‘ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು’ ಒಂದು ಅಂತಿಮ ವರದಿ ಸಿದ್ಧಪಡಿಸಿ ರಾಜ್ಯ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಹಾಗೂ ಆ ವರದಿಯನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಎಚ್ ಆರ್ ನವೀನ್ ಕುಮಾರ್, ಡಿವೈಎಫ಼್‌ಐ ಜಿಲ್ಲಾ ಕಾರ್ಯದರ್ಶಿ ಎಂ ಜಿ ಪೃಥ್ವಿ, ಎಸ್‌ಎಫ಼್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಡಿಎಚ್‌ಎಸ್‌ ಜಿಲ್ಲಾ ಸಹ ಸಂಚಾಲಕ ರಾಜು ಸಿಗರನಹಳ್ಳಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸೌಮ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...