ಹಾಸನ | ಹೊಸವರ್ಷದ ಸಂಭ್ರಮ; ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ

Date:

ಕಾಲೇಜಿನ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಸಲ್ಪ ದಿನಗಳ ಕಾಲ ದೂರವಾಗಿದ್ದರು. ಹೊಸವರ್ಷದ ಸಂಭ್ರಮಕ್ಕೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದ ಪ್ರೇಯಸಿ ಮೊದಲೇ ನಿರ್ಧರಿಸಿದಂತೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿಯಲ್ಲಿ ನಡೆದಿದೆ.

ಹಾಸನ ತಾಲೂಕಿನ ಎ ಗುಡುಗನಹಳ್ಳಿ ಗ್ರಾಮದ ಮನುಕುಮಾರ್(24) ಪ್ರೇಯಸಿಯಿಂದ ಚಾಕು ಇರಿತಕ್ಕೆ ಒಳಗಾದವರು. ನಗರದ ಬಿಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಪ್ರೇಯಸಿ ಭವಾನಿ, ಮನುಕುಮಾರ್ ಜತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇವರಿಬ್ಬರಲ್ಲಿ ಪ್ರೀತಿ ಪ್ರೇಮ ನಡೆಯುತಿತ್ತು. ಕೆಲ ದಿನಗಳಿಂದ ಇಬ್ಬರೂ ಬೇರೆಯಾಗಿದ್ದರು. ಯಾವ ಕರೆ ಕೂಡ ಮಾಡಿರಲಿಲ್ಲ. ನಿನ್ನೆ ರಾತ್ರಿ ಹೊಸ ವರ್ಷಾಚರಣೆಗೆಂದು ಮನುಕುಮಾರ್ ಸ್ನೇಹಿತರ ಜತೆಗೆ ಖಾಸಗಿ ಹೋಟೆಲ್‌ಗೆ ಬಂದಿದ್ದ ವಿಚಾರ ತಿಳಿದುಕೊಂಡು ಪದೇ ಪದೆ ಭವಾನಿ ಫೋನ್ ಮಾಡಿದ್ದಾಳೆ. ಆದರೂ ಆತ ಫೋನ್‌ ಕರೆ ತೆಗೆದಿರಲಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಡರಾತ್ರಿ 12:30ಕ್ಕೆ ಹೋಟೆಲ್ ಬಳಿ ಬಂದ ಭವಾನಿಯು ಅಲ್ಲೇ ಬಿದ್ದಿದ್ದ ಪಾಸ್ ಒಂದನ್ನು ಕೊರಳಿಗೆ ಹಾಕಿಕೊಂಡು ಗೇಟ್ ಒಳಗೆ ಹೋದಳು. ಅಷ್ಟರಲ್ಲಿ ಮನುಕುಮಾರ್ ಗೇಟ್ ಬಳಿ ಬಂದನು. ಈ ವೇಳೆ ಭವಾನಿ ಹಾಗೂ ಮನುಕುಮಾರ್ ನಡುವೆ ಜಗಳ ಆರಂಭವಾಗಿದೆ. ಮನುಕುಮಾರ್ ಸ್ನೇಹಿತರು ಕೂಡಲೇ ಜಗಳ ಬಿಡಿಸಲು ಮುಂದಾದರು. ನೋಡ ನೋಡುತಿದ್ದಂತೆಯೇ ಈ ವೇಳೆ ಮನುಕುಮಾರ್‌ಗೆ ಭವಾನಿ ಏಕಾಏಕಿ ಚಾಕುವಿನಿಂದ ಇರಿದಳು. ಕೂಡಲೇ ಮನುಕುಮಾರನನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿದ್ದಾರೆ. ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ಕೊಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಹೊಸವರ್ಷದ ಸಂಭ್ರಮ-2025; ಮದ್ಯ, ಬಿಯರ್ ಮಾರಾಟದಲ್ಲಿ ಅನಿರೀಕ್ಷಿತ ಕುಸಿತ

ಮನುಕುಮಾರ್ ಹಾಸನದಲ್ಲಿ ಹಾರ್ಡ್‌ವೇರ್ ಮತ್ತು ಪ್ಲೇವುಡ್ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...