ಹಾಸನ l 22.3 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು 

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಗ್ರಾಮದಲ್ಲಿ ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. 

Screenshot 2025 03 23 09 26 31 17 7352322957d4404136654ef4adb64504
ಅರಣ್ಯಇಲಾಖೆ ಅಧಿಕಾರಿಗಳಿಂದ ಕಾಫಿ ಗಿಡ ತೆರವು

ಬೆಂಗಳೂರು ಮೂಲದ ಮನೋಹರ್ ಅಯ್ಯರ್ ಎಂಬ ವ್ಯಕ್ತಿ ಅನಧಿಕೃತವಾಗಿ ಸಾಗುವಳಿ ಮಾಡಿದ್ದ, ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿತೋಟವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವುಗೊಳಿದ್ದಾರೆ.

Screenshot 2025 03 23 09 27 05 69 7352322957d4404136654ef4adb64504
ಅರಣ್ಯ ಸಿಬ್ಬಂದಿಯವರಿಂದ ತೆರವು ಕಾರ್ಯಾಚರಣೆ

ಮೂರ್ಖಣ್ಣಗುಡ್ಡ ವ್ಯಾಪ್ತಿಯ ಸೇಕ್ಷನ್ 4 ರಕ್ಷಿತಾರಣ್ಯಕ್ಕೆ ಈ ಕಾಫಿ ತೋಟ ಸೇರ್ಪಡೆಯಾಗಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಅವರು ಭೂಮಿಗೆ ಸಂಬಂಧಿಸಿದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 03 23 09 26 39 74 7352322957d4404136654ef4adb64504 1
ಅರಣ್ಯ ಇಲಾಖೆಯಿಂದ ನಾಮ ಫಲಕ ಅಳವಡಿಸಲಾಗಿದೆ

ತೋಟದ ಮಾಲೀಕರು ನ್ಯಾಯಾಲಯಕ್ಕೆ ಭೂಮಿ ದಾಖಲೆ ಸಲ್ಲಿಸಲು ವಿಫಲರಾದ ಹಿನ್ನಲೆಯಲ್ಲಿ, ಫ್ರೆಬ್ರವರಿ 27ರಂದು 64ಎ ಅಡಿಯಲ್ಲಿ ಭೂಮಿ ವಶಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಕುರಿತು ವಲಯ ಅರಣ್ಯಾಧಿಕಾರಿ ಹೇಮಂತ್ ನೇತೃತ್ವದಲ್ಲಿ ಶನಿವಾರ ಸುಮಾರು 50ಕ್ಕೂ ಅಧಿಕ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 10ಕ್ಕೂ ಅಧಿಕ ಯಂತ್ರಗಳನ್ನು ಬಳಸಿ ತೋಟದಲ್ಲಿದ್ದ, ಕಾಫಿಗಿಡಗಳನ್ನು ತೆರವುಗೊಳಿಸಿ ತೋಟವನ್ನು ಅರಣ್ಯ ಇಲಾಖೆಗೆ ವಶಪಡಿಸಿಕೊಂಡು ನಾಮ ಫಲಕ ಆಳವಡಿಸಿದ್ದಾರೆ. 

ಇದನ್ನೂ ಓದಿದ್ದೀರಾ?ಹಾಸನ l ಆನೆ ದಾಳಿ; ಪ್ರಾಣಾಪಾಯದಿಂದ ಕಾರ್ಮಿಕ ಪಾರು

ಈ ಜಾಗಕ್ಕೆ ಹಲವು ಬಗೆಯ ಅರಣ್ಯ ಗಿಡಗಳನ್ನು ನೆಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು.  ಈ ವೇಳೆ ಕಾರ್ಯಚರಣೆಯಲ್ಲಿ ಉಪ ವಲಯಾಧಿಕಾರಿಗಳಾದ ಮಹದೇವಪ್ಪ, ದರ್ಶನ್, ಮಂಜುನಾಥ್ ಹಾಗೂ ಅರಣ್ಯ ಸಿಬ್ಬಂದಿಯವರು ಹಾಗೂ  ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...