ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

Date:

ಸರ್ಕಾರ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೆಲಸದಲ್ಲಿ ನಿರತರಾಗಿರುವ ಶಿಕ್ಷಕರು ಜಾತಿ ಕಾಲಂ ನಲ್ಲಿ ತಮಗೆ ಇಷ್ಟ ಬಂದ ಜಾತಿಯ ಹೆಸರನ್ನು ನಮೂದಿಸಿ ಲೋಪವೆಸಗಿದ್ದು, ತಪ್ಪುಮಾಡಿರುವ ಶಿಕ್ಷಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪನ್ನು ಸರಿಪಡಿಸಿ ಮೂಲಜಾತಿ ಮರು ನಮೂದಿಸಬೇಕು ಎಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮೂಲಕ ಹೊಳೆನರಸೀಪುರದ ಮಹದೇಶ್ವರ ಕಾಲೊನಿ ನಿವಾಸಿಗಳು ಒತ್ತಾಯಿಸಿದರು.

ಈ ವೇಳೆ ಹಿಮ್ಸ್ ಆಡಳಿತ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ರವೀಶ್ ಬಸವಾಪುರ ಮಾತನಾಡಿ, “ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಹೋಬಳಿಯ ತೇಜೂರು ಮಹಾದೇಶ್ವರ ಕಾಲೋನಿ ಗ್ರಾಮದಲ್ಲಿ ಸುಮಾರು 135 ಮಾದಿಗ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದು, ಈ ಗ್ರಾಮಕ್ಕೆ ಸಮೀಕ್ಷೆ ಮಾಡಲು ಬಂದಿದ್ದ ಗಣತಿದಾರರಾದ ಶುಭ ಮತ್ತು ಲಲಿತ ಎಂಬುವವರು ಮನಸೋ ಇಚ್ಛೆ ಬರೆದುಕೊಂಡು ಹೋಗುತ್ತಿದ್ದಾರೆ” ಎಂದು ಆರೋಪಿಸಿದರು.

WhatsApp Image 2025 10 08 at 1.47.46 PM

ಇದನ್ನೂ ಓದಿ: ಹಾಸನ | ಅಡುಗೆ ಮಾಡಿಲ್ಲವೆಂದು ಸಿಟ್ಟಾಗಿ ತಾಯಿಯನ್ನೇ ಕೊಂದ ಮಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಣತಿ ಮಾಡುವ ವೇಳೆ ಗ್ರಾಮಸ್ಥರು ಗಣತಿಯ ಜಾತಿ ಕಾಲಂನಲ್ಲಿ 061 ಅದರಲ್ಲಿ ಮಾದಿಗ ಎಂದು ನಮೂದಿಸುವಂತೆ ಕೇಳಿಕೊಂಡರೂ ಶಿಕ್ಷಕಿಯರಾದ ಶುಭಾ ಮತ್ತು ಲಲಿತಾ ಎಂಬುವರು ಗಣತಿಯ ಜಾತಿ ಕಾಲಂನಲ್ಲಿ 061 ರಲ್ಲಿ ಮಾದಿಗ ಎಂದು ಬರೆದಿರುವುದಿಲ್ಲ. ಕೇಳಿದರೆ ನಾವು ಹಾಗೆ ಮಾಡಲಿಕ್ಕೆ ಬರಲ್ಲ. ನಮಗೆ ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂದು ಮಾತ್ರ ನಮೂದಿಸಲು ಸರ್ಕಾರದ ನಿರ್ದೇಶನವಿದೆ ಎಂದು ಉತ್ತರ ನೀಡಿದ್ದಾರೆ. ಶೋಷಿತ ಸಮುದಾಯಗಳಲ್ಲೊಂದಾದ ಮಾದಿಗ ಸಮುದಾಯದ ಗಣತಿಯಲ್ಲಿ ಸರ್ಕಾರದ ಗಣತಿ ನಿಯಮ ಉಲ್ಲಂಘಿಸಿ ಸಾರ್ವಜನಿಕರೋಡನೆ ಉಡಾಫೆಯಿಂದ ಅನುಚಿತವಾಗಿ ವರ್ತಿಸಿದ್ದಾರೆ. ಈ ಗಣತಿದಾರ ಶಿಕ್ಷಕಿಯರನ್ನು ಅಮಾನತು ಮಾಡುವಂತೆ ಹಾಗೂ ಸಮೀಕ್ಷೆಯಲ್ಲಿ ಆಗಿರುವ ಲೋಪವನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಈ ವಿಚಾರದ ತಿಳಿಸಲಾಗಿದ್ದು ಆ ಇಬ್ಬರು ಶಿಕ್ಷಕಿಯರಿಗೆ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿಸಿದರು.

ಈ ವೇಲೆ INTUC ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ರಾಮಚಂದ್ರ ಕಬ್ಬಳಿ, ಲೋಕೇಶ್ ಕ್ಯಾತನಹಳ್ಳಿ, ರಂಗಸ್ವಾಮಿ ಸೇರಿದಂತೆ ಮಹದೇಶ್ವರ ಕಾಲೊನಿ ನಿವಾಸಿಗಳು ಉಪಸ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...