ಹಾಸನ | ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯನ್ನು ಹತ್ಯೆಮಾಡಿದ ಕಾಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಶುಕ್ರವಾರ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.

ಕಾರ್ಮಿಕ ಮಹಿಳೆ ಶೋಭಾ ಮೇಲೆ ದಾಳಿ ನಡೆಸಿ, ಸಾವಿಗೆ ಕಾರಣವಾದ ಕಾಡಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕ ಆಕ್ರೋಶದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ನಡೆದ ಬಳಿಕ ಸ್ಥಳೀಯ ರಲ್ಲಿ ಭೀತಿ ಹಾಗೂ ಆಕ್ರೋಶ ಹೆಚ್ಚಾಗಿದ್ದು, ಗ್ರಾಮಸ್ಥರು ಕಾಡಾನೆ ದಾಳಿ ತಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಕಾರ್ಯಾಚರಣೆಗೆ ಮೈಸೂರು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ಐದು ತರಬೇತಿ ಪಡೆದ ಸಾಕಾನೆಗಳನ್ನು ಬೈರಾಪುರಕ್ಕೆ ಕರೆತರಲಾಗಿದೆ. ಸುಗ್ರೀವ, ಧನಂಜಯ, ಲಕ್ಷಣ, ಅಯ್ಯಪ್ಪ ಹಾಗೂ ಹರ್ಷ ಎಂಬ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿ ಸಲಿದ್ದು, ಅನುಭವೀ ಮಾವುತರ ಸಹಕಾರವೂ ಇದೆ. ಕಾಡಾನೆ ಬಿಕ್ಕೋಡು ಭಾಗದಲ್ಲಿ ಸಂಚರಿಸುತ್ತಿರುವಮಾಹಿತಿ ಲಭ್ಯವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇಟಿಎಫ್ (ಎಲಿಫೆಂಟ್ ಟಾಸ್ಕ್ ಪೋರ್ಸ್) ತಂಡಗಳು ಕಾಡಾನೆ ಚಲನ ವಲನವನ್ನು ನಿಖರವಾಗಿ ಟ್ರ್ಯಾಕ್ ಮಾಡುತ್ತಿವೆ. ಪ್ರೋನ್‌ಗಳು, ಟ್ರ್ಯಾಕಿಂ ಗ್ ಸಾಧನಗಳು ಮತ್ತು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಇದನ್ನೂ ಓದಿದ್ದೀರಾ?ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಕಾರ್ಯಾಚರಣೆ ನಡೆಯುವ ಪ್ರದೇ ಶದಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾಡಾನೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದು, ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಗುರಿಯೊಂದಿಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ಯಶಸ್ವಿಯಾದರೆ, ಕಳೆದ ಕೆಲವು ದಿನಗಳಿಂದ ಭಯದ ವಾತಾವರಣದಲ್ಲಿರುವ ಜನರಿಗೆ ನಿಟ್ಟುಸಿರುವ ಬಿಟ್ಟಂತ್ತಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...