ಹಾಸನ | ಪೊಲೀಸ್‌ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಸಾವು

Date:

ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.

ಮಧ್ಯಪ್ರದೇಶದ ಸಿಂಗ್ರುಲಿ ಜಿಲ್ಲೆಯ ದೋಸಾರ್‌ ಗ್ರಾಮದ ಹರ್ಷಬರ್ಧನ್‌(26) ಮೃತಪಟ್ಟಿರುವ ಐಪಿಎಸ್ ಅಧಿಕಾರಿ. ಜೀಪ್‌ ಚಾಲಕ, ಹಾಸನದ ಡಿಎಆರ್‌ ಕಾನ್‌ಸ್ಟೆಬಲ್‌ ಮಂಜೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ಮಹೇಂದ್ರ ಬುಲೆರೋ ಜೀಪ್‌ ಟೈಯರ್‌ ಸ್ಫೋಟದಿಂದ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ತಡೆಕಂಬಗಳಿಗೆ ಡಿಕ್ಕಿ ಹೊಡೆದು ನಂತರ ತೆಂಗಿನ ಮರಕ್ಕೆ ಡಿಕ್ಕಿಯಾಗಿ, ಪಕ್ಕದ ಮನೆಗೆ ತಾಗಿ ನಿಂತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಆ್ಯಂಬುಲೆನ್ಸ್ ಮೂಲಕ ಹರ್ಷಬರ್ಧನ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರನ್ನು ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿಯೇ ಹರ್ಷಬರ್ಧನ್‌ ಮೃತಪಟ್ಟಿರುವುದಾಗಿ ವೈದ್ಯರುಈ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ಚನ್ನಬಸವಾನಂದ ಸ್ವಾಮೀಜಿ

ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮೊಹಮದ್‌ ಸುಜೀತಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

ಹರ್ಷಬರ್ಧನ್ ಅವರು ಪ್ರೊಬೇಷನರಿ ಎಎಸ್‌ಪಿಯಾಗಿ ಹಾಸನಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯಕ್ಕೆ ಹಾಜರಾಗಲು ಬರುವ ವೇಳೆ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...